10 ಸ್ಥಾನ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ

Team Udayavani, Dec 5, 2019, 10:07 PM IST

ಬೆಂಗಳೂರು: ಸರ್ಕಾರದ ಭವಿಷ್ಯವನ್ನು ನಿರ್ಧರಿಸುವ 15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಮುಗಿದ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಗೆಲುವು- ಸೋಲಿನ ಲೆಕ್ಕಾಚಾರದಲ್ಲಿ ತೊಡಗಿದ್ದು, 9ರಿಂದ 10 ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಹಳೇ ಮೈಸೂರು ಭಾಗದ ಹುಣಸೂರು, ಕೆ.ಆರ್‌.ಪೇಟೆ, ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಆತಂಕ ನಾಯಕರಲ್ಲಿ ಮೂಡಿದಂತಿದೆ. ಹೊಸಕೋಟೆ, ರಾಣೆಬೆನ್ನೂರು, ಕಾಗವಾಡ, ಚಿಕ್ಕಬಳ್ಳಾಪುರದಲ್ಲಿ ತೀವ್ರ ಹಣಾಹಣಿ ನಡೆದಿದ್ದು, ಅಚ್ಚರಿಯ ಫ‌ಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಮತಗಟ್ಟೆವಾರು ಮತದಾನ ಪ್ರಮಾಣ ಸೇರಿದಂತೆ ಇತರೆ ಅಂಶಗಳ ಆಧಾರಗಳ ಮೇಲೆ 9 ಸ್ಥಾನ ಗೆಲ್ಲುವ ವಿಶ್ವಾಸವನ್ನು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದಾರೆ.

ಪಕ್ಷ ಹಿಂದೆ ನಡೆಸಿದ ಆಂತರಿಕ ಸಮೀಕ್ಷೆಗಳ ಪ್ರಕಾರ ಹಿನ್ನಡೆ ಉಂಟಾಗುವ ಸಾಧ್ಯತೆಯಿದ್ದ ಕ್ಷೇತ್ರಗಳಲ್ಲಿ ವಿಶೇಷ ಒತ್ತು ನೀಡಿ ಕಾರ್ಯತಂತ್ರ ಬದಲಾಯಿಸಲಾಯಿತು. ಆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಪೂರಕ ವಾತಾವರಣ ಕಂಡುಬಂದಿತ್ತು. ಕೊನೆಯ ನಾಲ್ಕು ದಿನಗಳಲ್ಲಿ ನಡೆಸಿದ ಮನೆ ಮನೆ ಪ್ರಚಾರ, ಇತರೆ ಪ್ರಯತ್ನಗಳು ಕೈ ಹಿಡಿಯುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.

ಮುಖ್ಯವಾಗಿ ಬೆಂಗಳೂರಿನ ನಾಲ್ಕೂ ಕ್ಷೇತ್ರಗಳಲ್ಲಿ ಮತದಾನ ಕಡಿಮೆಯಾಗಿರುವುದರಿಂದ ಫ‌ಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಆತಂಕ ನಾಯಕರಲ್ಲಿ ಮೂಡಿದಂತಿದೆ. ಕಡಿಮೆ ಮತದಾನ ಪ್ರಮಾಣವು ಪಕ್ಷದ ಅಭ್ಯರ್ಥಿಗಳಿಗೆ ವರದಾನವೋ, ವ್ಯತಿರಿಕ್ತವಾಗಿ ಪರಿಣಮಿಸುವುದೋ ಎಂಬ ಲೆಕ್ಕಾಚಾರದಲ್ಲಿ ನಾಯಕರು ನಿರತರಾಗಿದ್ದಾರೆ. ಸದ್ಯದಲ್ಲೇ ಕ್ಷೇತ್ರವಾರು ಅವಲೋಕನ ಸಭೆ ನಡೆಸಿ ಮೌಲ್ಯಮಾಪನ ನಡೆಸಿದಾಗ ಇನ್ನಷ್ಟು ನಿಖರ ಮಾಹಿತಿ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಮತದಾನೋತ್ತರ ಸಮೀಕ್ಷೆಗಳು, ಆಂತರಿಕ ಲೆಕ್ಕಾಚಾರಗಳು, ಉಪಚುನಾವಣಾ ಉಸ್ತುವಾರಿಗಳ ಮಾಹಿತಿಯನ್ನು ತಾಳೆ ಹಾಕಿದ್ದು, ಕನಿಷ್ಠ 8 ಸ್ಥಾನ ಗೆಲ್ಲಲು ಸಮಸ್ಯೆಯಿಲ್ಲ ಎಂಬ ಲೆಕ್ಕಾಚಾರಕ್ಕೆ ನಾಯಕರು ಬಂದಂತಿದೆ. ಬಿಜೆಪಿ ಸರ್ಕಾರ ಸುಭದ್ರವಾಗಲು 7 ಸ್ಥಾನ ಗೆಲ್ಲಬೇಕಿದ್ದು, ಸರ್ಕಾರ ಸುರಕ್ಷಿತವಾಗಿರಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಡಾಲರ್ ಕಾಲೋನಿಯಲ್ಲಿದ್ದುಕೊಂಡು ಪ್ರತಿ ಕ್ಷೇತ್ರಗಳಲ್ಲಿನ ಮತದಾನ ಪ್ರಮಾಣ, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಅವಲೋಕಿಸಿದರು. ಮತದಾನ ಮುಗಿಯುವವರೆಗೂ ನಿರಂತರವಾಗಿ ಉಪಚುನಾವಣಾ ಉಸ್ತುವಾರಿಗಳಿಂದಲೂ ಮಾಹಿತಿ ಪಡೆದು ಚರ್ಚಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಈಗಾಗಲೇ ಶುರುವಾಗಿದ್ದು, 26ಕ್ಕೆ ಕೊನೆಗೊಳ್ಳಲಿದೆ. ಜಗತ್ತಿಗೆ ಶಾಂತಿ ಬೋಧಿಸಿದ ಈ ಮಠದಲ್ಲಿ ಭೋಜನವೂ...

  • ರಂಗದ ಮೇಲೆ ಮಿಂಚಿನ ಬಳ್ಳಿಯೊಂದು ಝಳಪಿಸಿದಂತೆ ಅದಮ್ಯ ಚೈತನ್ಯದಿಂದ ಲೀಲಾಜಾಲವಾಗಿ ನರ್ತಿಸಿದವಳು ಭರತನಾಟ್ಯ ಕಲಾವಿದೆ ಹರ್ಷಿತಾ ಜಗದೀಶ್‌. ಅದು ಅವಳ ಮೊದಲ ರಂಗಾರ್ಪಣೆ...

  • ಕುರಿಗಾಹಿಯೊಬ್ಬನಿಗೆ ಭೀಮಾ ನದಿಯಲ್ಲಿ ಗಾಜಿನ ರೂಪದ ಕಂಬದಲ್ಲಿದ್ದ ದೇವಿ ಕಾಣಿಸಿಕೊಳ್ಳುತ್ತಾಳೆ. ಆ ದೇವಿಯನ್ನು ಒಂದು ಸರ್ಪವು ಕಾಯುತ್ತಿತ್ತು... ಭೀಮಾ ನದಿಯಲ್ಲಿ...

  • "ಅದೊಂದು ವಟವೃಕ್ಷ. ಅಲ್ಲೊಂದು ವಿಚಿತ್ರವಾದ ಸನ್ನಿವೇಶ. ಗುರುವನ್ನು ಸುತ್ತುವರಿದು ಶಿಷ್ಯರೆಲ್ಲ ಕುಳಿತಿದ್ದಾರೆ. ಶಿಷ್ಯರೆಲ್ಲರೂ ವೃದ್ಧರು. ಗುರುವಾದರೋ ಯುವಕ....

  • ಎಷ್ಟು ಬಗೆಯಲ್ಲಿ ಇಡ್ಲಿ ಮಾಡಬಹುದು ಅಂದುಕೊಂಡಿದ್ದೀರಿ? ಹೆಚ್ಚೆಂದರೆ ಹತ್ತಿಪ್ಪತ್ತು ವೆರೈಟಿ ಅಂತೀರಾ? ಇಲ್ಲ, 55 ವೆರೈಟಿಯ ಇಡ್ಲಿ ಮಾಡಬಹುದು ಅನ್ನುತ್ತಿದೆ...