Udayavni Special

ಜೊಮ್ಯಾಟೊ ಡೆಲಿವರಿ ಬಾಯ್ ಕಾಮರಾಜ್‍ನಿಗೆ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಬೆಂಬಲ

Team Udayavani, Mar 14, 2021, 1:33 PM IST

Parineeti chopra

ಬೆಂಗಳೂರು : ಯುವತಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕೆಲಸ ಕಳೆದುಕೊಂಡು ಬೀದಿಗೆ ಬಂದಿರುವ ಜೊಮ್ಯಾಟೊ ಡೆಲಿವರಿ ಬಾಯ್ ಕಾಮರಾಜ್ ಪರ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಮಾಡದ ತಪ್ಪಿಗೆ ಜೈಲು ಪಾಲಾಗಿ, ಉದ್ಯೋಗ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದಿರುವ ಕಾಮರಾಜ್ ಅವರನ್ನು ಬೆಂಬಲಿಸಿ ಟ್ವಿಟರ್ ನಲ್ಲಿ #MenToo ಅಭಿಯಾನ ಪ್ರಾರಂಭವಾಗಿದೆ. ಸುಳ್ಳು ಆರೋಪಗಳಿಂದ ಸಂಕಷ್ಟಕ್ಕೆ ಸಿಲುಕಿದ ಹಲವಾರು ವ್ಯಕ್ತಿಗಳ ಉದಾಹರಣೆ ನೀಡುವ ಪೋಸ್ಟ್ ಗಳು ಟ್ವಿಟರ್ ನಲ್ಲಿ ಟ್ರೆಂಡಿಂಗ್‍ ನಲ್ಲಿವೆ.

ಬೆಂಗಳೂರಿನ ಟ್ರಾಫಿಕ್ ನಡುವೆಯೂ ಕೇವಲ 15 ನಿಮಿಷ ತಡವಾಗಿ ಆಹಾರ ತಲುಪಿಸಿದ್ದಾನೆ. ಯುವತಿಯೇ ಈತನ ಮೇಲೆ ಹಲ್ಲೆಗೆ ಮುಂದಾಗಿ, ವಿಡಿಯೋದಲ್ಲಿ ಸುಳ್ಳು ಹೇಳಿದ್ದಾಳೆ. ಅಮಾಯಕನ ಮೇಲೆ ಆಕೆಯ ದೌರ್ಜನ್ಯ ಖಂಡನಾರ್ಹ. ಈ ಘಟನೆ ನಂತರ ಆಕೆ ಇನ್‍ಸ್ಟಾಗ್ರಾಂನಲ್ಲಿ 50 ಸಾವಿರ ಫಾಲೋವರ್ಸ್ ಹೆಚ್ಚಿಸಿಕೊಂಡಿದ್ದಾಳೆ.  ಆದರೆ, ಹೊಟ್ಟೆ ಪಾಡಿಗಾಗಿ ದುಡಿಯುತ್ತಿದ್ದ ಕಾಮರಾಜ್ ಕೆಲಸ ಕಳೆದುಕೊಂಡಿದ್ದಾನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಕೂಡ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವರದಿಗಳಲ್ಲಿ ಸತ್ಯಾಂಶದ ಬಗ್ಗೆ ಗಮನ ಹರಿಸಿ. ಒಂದು ವೇಳೆ ಡೆಲಿವರಿ ಬಾಯ್ ಕಾಮರಾಜ್ ನಿರಪರಾಧಿಯಾಗಿದ್ದರೆ, ಆ ಯುವತಿಗೆ ದಂಡ ಹಾಕಿ ಎಂದು ‘ಜೊಮ್ಯಾಟೊ’ಗೆ ಆಗ್ರಹಿಸಿದ್ದಾರೆ. ಇದು ಅಮಾನವೀಯ, ನಾಚಿಕೆಗೇಡು ಮತ್ತು ಹೃದಯ ವಿದ್ರಾವಕ ಘಟನೆ, ನಾನು ಹೇಗೆ ಸಹಾಯ ಮಾಡಬಹುದೆಂದು ದಯವಿಟ್ಟು ನನಗೆ ತಿಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಘಟನೆ ಹಿನ್ನೆಲೆ : ಗ್ರಾಹಕಿ ಮೇಲೆ ಹಲ್ಲೆ ನಡೆಸಿದ್ದ ಆರೋಪ ಕಾಮರಾಜ್ ಮೇಲೆ ಕೇಳಿ ಬಂದಿತ್ತು. ಪರಿಣಾಮ ಕೆಲಸ ಕಳೆದುಕೊಳ್ಳಬೇಕಾಯಿತು. ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದಿರುವ ಕಾಮರಾಜ್, ‘ಮಹಿಳೆಯೇ ತಮ್ಮ ಉಂಗುರದಿಂದ ಮುಖಕ್ಕೆ ಹೊಡೆದು ಕೊಂಡಿದ್ದರು’ಹೇಳಿದ್ದಾರೆ.

‘ಸಂಚಾರ ದಟ್ಟಣೆಯಲ್ಲೂ ಕಷ್ಟಪಟ್ಟು ಯುವತಿಯ ಮನೆಗೆ ಆಹಾರ ತಲುಪಿಸಿದ್ದೆ. ಹಣ ನೀಡಬಹುದೆಂದು ಬಾಗಿಲಲ್ಲಿ ಕಾಯುತ್ತಿದ್ದೆ. ಆಹಾರ ನೀಡಿದ್ದು ತಡವಾಯಿತೆಂದು ಯುವತಿ ಜೋರಾಗಿ ಹೇಳಿದ್ದರು. ದಟ್ಟಣೆ ಹಾಗೂ ರಸ್ತೆಯಲ್ಲಿ ಕಾಮಗಾರಿಗಳು ನಡೆಯುತ್ತಿದ್ದರಿಂದ ತಡವಾಯಿತೆಂದು ಕ್ಷಮೆ ಯಾಚಿಸಿದ್ದೆ’ ಎಂದು ಕಾಮರಾಜ್ ವಿಡಿಯೊದಲ್ಲಿ ಹೇಳಿದ್ದಾರೆ.

‘ಆಹಾರಕ್ಕೆ ಹಣ ನೀಡಲು ಒಪ್ಪದ ಯುವತಿ, ಸಹಾಯವಾಣಿಗೆ ಕರೆ ಮಾಡಿದ್ದರು. ಆಹಾರ ವಾಪಸು ನೀಡುವಂತೆ ಸಹಾಯವಾಣಿ ಸಿಬ್ಬಂದಿ ಯುವತಿಗೆ ಹೇಳಿದ್ದರು. ಹೀಗಾಗಿ, ಆಹಾರದ ಪೊಟ್ಟಣವನ್ನು ಮರಳಿಸುವಂತೆ ಕೋರಿದ್ದೆ. ಅದಕ್ಕೂ ಒಪ್ಪದ ಯುವತಿ, ಬೈಯಲಾರಂಭಿಸಿದ್ದರು.’‘ಸ್ಥಳದಿಂದ ಮರಳಿ ಹೊರಟಿದ್ದೆ. ಯುವತಿಯೇ ನನ್ನ ಮೇಲೆ ಚಪ್ಪಲಿ ಎಸೆದರು. ತಮ್ಮ ಕೈಯಿಂದ ಹೊಡೆಯಲು ಬಂದರು. ನಾನು ತಪ್ಪಿಸಿಕೊಂಡೆ. ನಂತರ, ಆಕೆಯ ಕೈಯಲ್ಲಿದ್ದ ಉಂಗುರವೇ ಅವರ ಮುಖಕ್ಕೆ ತಾಗಿತ್ತು. ಅವರ ಮುಖದಲ್ಲಿ ರಕ್ತ ಬರಲಾರಂಭಿಸಿತ್ತು. ಭಯಗೊಂಡು ನಾನು ಅಲ್ಲಿಂದ ಹೊರಟೆ’ಎಂದೂ ಅವರು ವಿವರಿಸಿದ್ದಾರೆ. ಘಟನೆ ನಡೆದ ದಿನ ವಿಡಿಯೋದಲ್ಲಿ ಮಾತಾಡಿದ್ದ ಯುವತಿ, ಡೆಲಿವರಿ ಬಾಯ್‍ನಿಂದಲೇ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದರು.

ಟಾಪ್ ನ್ಯೂಸ್

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.