ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಹಿಂದೇಟು ಸಲ್ಲದು

Team Udayavani, Apr 11, 2022, 6:00 AM IST

ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಹಿಂದೇಟು ಸಲ್ಲದು

ಕೇಂದ್ರ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಎಲ್ಲ ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆಯ ಮುನ್ನೆಚ್ಚರಿಕೆ ಡೋಸ್‌ ನೀಡಿಕೆ ಆರಂಭವಾಗಿದೆ. ಸದ್ಯ ಈ ಮುನ್ನೆಚ್ಚರಿಕೆ ಡೋಸ್‌ಗಳನ್ನು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ ಕಂಪನಿಗಳು ಲಸಿಕೆಗೆ ಕನಿಷ್ಠ ದರವನ್ನು ನಿಗದಿಪಡಿಸಿವೆ.

ಈಗಾಗಲೇ ದೇಶದಲ್ಲಿ ಕೊರೊನಾ ಸೋಂಕಿನ ಮೂರು ಅಲೆಗಳು ಕಾಣಿಸಿಕೊಂಡಿದ್ದು ಒಂದು ಮತ್ತು ಎರಡನೇ ಅಲೆಗಳು ಜನರ ಆರೋಗ್ಯದ ಮೇಲೆ ಭಾರೀ ಪರಿಣಾಮವನ್ನು ಬೀರಿದ್ದವು. ಮೊದಲ ಅಲೆಯ ವೇಳೆ ಜನರಲ್ಲಿನ ತಿಳಿವಳಿಕೆ ಕೊರತೆ, ನಿರ್ಲಕ್ಷ್ಯ ಮತ್ತಿತರ ಕಾರಣಗಳಿಂದಾಗಿ ಹಾನಿ ಸಂಭವಿಸಿತ್ತು. ಎರಡನೇ ಅಲೆ ದೇಶವನ್ನು ಸಂಪೂರ್ಣವಾಗಿ ಕಂಗೆಡುವಂತೆ ಮಾಡಿತ್ತಲ್ಲದೆ ಅಪಾರ ಸಾವು-ನೋವು ಸಂಭವಿಸಿತ್ತು. ಈ ಎರಡು ಅಲೆಗಳಿಂದ ಪಾಠ ಕಲಿತಿದ್ದ ಜನರು ಮತ್ತು ಸರಕಾರ ಸಾಕಷ್ಟು ಮುಂಜಾಗ್ರತೆ ವಹಿಸಿದ್ದರಿಂದಾಗಿ ಮೂರನೇ ಅಲೆ ಅಷ್ಟೇನೂ ಪರಿಣಾಮ ಬೀರಿರಲಿಲ್ಲ. ಅಲ್ಲದೆ ಈ ವೇಳೆಗೆ ದೇಶದ ಬಹುತೇಕ ವಯಸ್ಕರು ಕೊರೊನಾ ನಿರೋಧಕ ಲಸಿಕೆಗಳನ್ನು ಪಡೆದುಕೊಂಡಿದ್ದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿತ್ತು. ಮಾತ್ರವಲ್ಲದೆ ಎರಡು ಅಲೆಗಳ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಸೋಂಕು ಬಾಧಿಸಿದ್ದರಿಂದಾಗಿ ಸಹಜವಾಗಿಯೇ ಅವರಲ್ಲಿ ಕೊರೊನಾ ನಿರೋಧಕ ಶಕ್ತಿ ವೃದ್ಧಿಯಾಗಿತ್ತು. ಹೀಗಾಗಿ ಅತ್ಯಂತ ತೀವ್ರಗತಿಯಲ್ಲಿ ಹರಡುತ್ತಿದ್ದ ಒಮಿಕ್ರಾನ್‌ ಸೋಂಕು ಅಷ್ಟೇನೂ ಪರಿಣಾಮ ಬೀರಲಿಲ್ಲ.

ವಯಸ್ಕರಿಗೆ ಕೊರೊನಾ ನಿರೋಧಕ ಲಸಿಕೆ ನೀಡಿಕೆ ಪ್ರಕ್ರಿಯೆ ಮುಕ್ತಾಯದ ಹಂತ ತಲುಪುತ್ತಿದ್ದಂತೆಯೇ ಸರಕಾರ ಎರಡು ಹಂತಗಳಲ್ಲಿ 12ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡಿಕೆ ಕೈಗೆತ್ತಿಕೊಂಡಿದೆ. ಇದರ ನಡುವೆಯೇ ಹಂತಹಂತವಾಗಿ ಜನತೆಗೆ ಮೂರನೆಯ ಅಥವಾ ಮುನ್ನೆಚ್ಚರಿಕೆ ಡೋಸ್‌ ಅನ್ನು ನೀಡಲು ಆರಂಭಿಸಿದೆ. ರವಿವಾರದಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲ ಈ ಹೆಚ್ಚುವರಿ ಡೋಸ್‌ ನೀಡಲಾಗುತ್ತಿದೆ. ಲಸಿಕೆಯ ದರವನ್ನು ಲಸಿಕೆ ತಯಾರಿಕ ಕಂಪೆನಿಗಳು ಗಣನೀಯವಾಗಿ ಇಳಿಕೆ ಮಾಡಿವೆ. ಸದ್ಯ ದೇಶದಲ್ಲಿ ನೀಡಲಾಗುತ್ತಿರುವ ಪ್ರಮುಖ ಎರಡು ಲಸಿಕೆಗಳಾದ ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ಲಸಿಕೆಗೆ 225 ರೂ. ದರ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ವಿತರಣ ಶುಲ್ಕವಾಗಿ 150 ರೂ. ವಿಧಿಸಲು ಸರಕಾರ ಅವಕಾಶ ಮಾಡಿಕೊಟ್ಟಿದೆ. 18 ವರ್ಷ ಮೇಲ್ಪಟ್ಟವರು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್‌ ಪಡೆಯಬಹುದಾಗಿದೆ.

ದೇಶಾದ್ಯಂತ ಕೊರೊನಾದ ತೀವ್ರತೆ ಕಡಿಮೆಯಾಗಿರುವಾಗ ಈ ಮುನ್ನೆಚ್ಚರಿಕೆ ಡೋಸ್‌ನ ಆವಶ್ಯಕತೆ ಏನು ಎಂಬ ಪ್ರಶ್ನೆ ಸದ್ಯ ಬಹುತೇಕ ಜನರನ್ನು ಕಾಡುತ್ತಿದೆ. ಕಳೆದ ಅಲೆಯ ವೇಳೆ ಒಮಿಕ್ರಾನ್‌ ಸೋಂಕು ಅಷ್ಟೇನೂ ಪರಿಣಾಮ ಬೀರಿಲ್ಲ. ಮಾತ್ರವಲ್ಲದೆ ಕೊರೊನಾ ಸಾಂಕ್ರಾಮಿಕ ಈಗ ಇತರ ಸಾಂಕ್ರಾಮಿಕಗಳಂತೆ ಸಾಮಾನ್ಯ ಕಾಯಿಲೆಯಾಗಿ ಮಾರ್ಪಟ್ಟಿದ್ದು, ಇದನ್ನು ಎದುರಿಸಲು ನಮ್ಮ ದೇಹ ಸಶಕ್ತವಾಗಿದೆ ಎಂಬ ವಾದವನ್ನು ಮುಂದಿಡತೊಡಗಿದ್ದಾರೆ. ಆದರೆ ಕೊರೊನಾ ನಿರೋಧಕ ಲಸಿಕೆಯ ಪರಿಣಾಮ ಸೀಮಿತ ಅವಧಿಯದ್ದಾಗಿರುವುದರಿಂದ ಮುನ್ನೆಚ್ಚರಿಕೆಯಾಗಿ ಮೂರನೇ ಡೋಸ್‌ ಪಡೆಯುವುದು ನಮ್ಮೆಲ್ಲರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸೂಕ್ತ. ಇಷ್ಟು ಮಾತ್ರವಲ್ಲದೆ ದೇಶದ ಕೆಲವೆಡೆ ಕೊರೊನಾ ವೈರಸ್‌ನ ಹೊಸ ರೂಪಾಂತರಿ ಎಕ್ಸ್‌ಇ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವುದರಿಂದ ಈ ಹೊತ್ತಿನಲ್ಲಿ ಮೈಮರೆಯುವುದಾಗಲೀ ಉಡಾಫೆ ವರ್ತನೆಯಾಗಲೀ ಸಲ್ಲದು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.