ಭಾರತದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆಯ ಅವಶ್ಯಕತೆಯಿಲ್ಲ : ಐಸಿಎಂಆರ್‌

ವೈಜ್ಞಾನಿಕ ವರದಿ ಆಧರಿಸಿ ಸಲಹೆ ನೀಡಿದ ತಜ್ಞರು

Team Udayavani, Nov 21, 2021, 11:15 PM IST

ಭಾರತದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆಯ ಅವಶ್ಯಕತೆಯಿಲ್ಲ : ಐಸಿಎಂಆರ್‌

ನವದೆಹಲಿ: “ಎರಡು ಡೋಸ್‌ ಕೊರೊನಾ ಲಸಿಕೆ ಪಡೆದವರು ಬೂಸ್ಟರ್‌ ಡೋಸ್‌ ಪಡೆದರೆ ಹೇಳಿಕೊಳ್ಳುವಂಥ ಪ್ರಯೋಜನವೇನೂ ಆಗುವುದಿಲ್ಲ’.

– ಬೂಸ್ಟರ್‌ ಡೋಸ್‌ ಲಸಿಕೆ ಪಡೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ಭಾರತೀಯ ಔಷಧೀಯ ಸಂಶೋಧನಾ ಮಂಡಳಿ(ಐಸಿಎಂಆರ್‌) ಬಗ್ಗೆ ಕೇಂದ್ರ ಸರ್ಕಾರಕ್ಕೆ ಇಂಥದ್ದೊಂದು ವರದಿಯನ್ನೊಂದನ್ನು ಸಲ್ಲಿಸಿದೆ. ಕೇಂದ್ರ ಸರ್ಕಾರದ ಸಲಹಾ ತಂಡವಾಗಿರುವ ಎನ್‌ಟಿಎಜಿಐ (ಪ್ರತಿರಕ್ಷಣೆ ಕುರಿತು ಭಾರತದ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ) ವತಿಯಿಂದ ಸಲ್ಲಿಕೆಯಾಗಿರುವ ಈ ವರದಿಯಲ್ಲಿ, “ಭಾರತದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆಯ ಅವಶ್ಯಕತೆಯಿಲ್ಲ’ ಎಂದೂ ತಿಳಿಸಿದೆ.

ಕೋವಿನ್‌ ಮೊಬೈಲ್‌ ಅಪ್ಲಿಕೇಷನ್‌ ಅಥವಾ ಜಾಲತಾಣದ ಮೂಲಕ, ಕೊರೊನಾ ಲಸಿಕೆ ಪಡೆದವರು ತಮ್ಮ ಲಸಿಕಾ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲು ಅನುಕೂಲವಾಗವಂಥ ಫೀಚರ್‌ ನೀಡಲಾಗಿರುವುದು ಸರಿಯಷ್ಟೆ. ಇದರ ಜೊತೆಗೆ, ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳು ಯಾವುದೇ ವ್ಯಕ್ತಿಯ ಲಸಿಕೆ ಪ್ರಮಾಣಪತ್ರವನ್ನು ತಾವೇ ಕೋವಿನ್‌ ಮೂಲಕ ಪರಿಶೀಲಿಸಲು ಅವಕಾಶ ಮಾಡಿಕೊಡುವ ಮತ್ತೂಂದು ಫೀಚರ್‌ ಅವಕಾಶ ನೀಡಲಾಗಿದೆ. ಇದರಿಂದಾಗಿ ಸಿನಿಮಾ ಮಂದಿರ, ವಿಮಾನ ನಿಲ್ದಾಣ, ಹೋಟೆಲ್‌ ಸೇರಿ ಅನೇಕ ಕಡೆ ಗ್ರಾಹಕರ ಲಸಿಕಾ ಪ್ರಮಾಣಪತ್ರವನ್ನು ಅಲ್ಲಿನ ಸಿಬ್ಬಂದಿ ಪರಿಶೀಲಿಸಬಹುದಾಗಿದೆ.

ಇದನ್ನೂ ಓದಿ : ಚೊಚ್ಚಲ ಪಂದ್ಯದಲ್ಲೇ ಹೆಲ್ಮೆಟ್‌ಗೆ ಬಡಿದ ಚೆಂಡು, ಆಸ್ಪತ್ರೆಗೆ ದಾಖಲಾದ ವಿಂಡೀಸ್‌ ಆಟಗಾರ

10,488 ಪ್ರಕರಣ ದೃಢ: ಶನಿವಾರ ಬೆಳಗ್ಗೆಯಿಂದ ಭಾನುವಾರ ಬೆಳಗ್ಗೆವರೆಗೆ ದೇಶದಲ್ಲಿ 10,488 ಕೊರೊನಾ ಪ್ರಕರಣಗಳು ದೃಢವಾಗಿವೆ. 313 ಸೋಂಕಿತರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,22,714ಕ್ಕೆ ಇಳಿದಿದ್ದು, ಇದು ಕಳೆದ 532 ದಿನಗಳಲ್ಲೇ ಅತ್ಯಂತ ಕನಿಷ್ಠ ಸಕ್ರಿಯ ಪ್ರಕರಣಗಳ ಸಂಖ್ಯೆಯಾಗಿದೆ. ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯು ಒಟ್ಟಾರೆ ಪ್ರಕರಣಗಳ ಶೇ. 0.36ರಷ್ಟಿದೆ. ಈವರೆಗೆ ರಾಜ್ಯಗಳಿಗೆ 129 ಕೋಟಿ ಡೋಸ್‌ ಲಸಿಕೆ ಪೂರೈಕೆ ಮಾಡಲಾಗಿದೆ. ಅದರಲ್ಲಿ 116.50 ಕೋಟಿ ಲಸಿಕೆ ವಿತರಣೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪರಿಶೀಲನಾ ಸಭೆ:
ಮಣಿಪುರ, ಮೇಘಾಲಯ, ನಾಗಾಲ್ಯಾಂಡ್‌ ಮತ್ತು ಪುದುಚೆರಿ ಸರ್ಕಾರದೊಂದಿಗೆ ಸೋಮವಾರ ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯಾ ಲಸಿಕೆ ಅಭಿಯಾನ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.