ಸಮುದಾಯದಲ್ಲಿ ಒಡಕು ಮೂಡಿಸುವ ಹುನ್ನಾರ: HDK ವಿರುದ್ಧ ವಿಜಯಪುರದಲ್ಲಿ ವಿಪ್ರರ ಪ್ರತಿಭಟನೆ

Team Udayavani, Feb 8, 2023, 8:14 PM IST

ವಿಜಯಪುರ: ಎಚ್‍ಡಿಕೆ ವಿರುದ್ಧ ವಿಜಯಪುರದಲ್ಲಿ ವಿಪ್ರರ ಪ್ರತಿಭಟನೆ

ವಿಜಯಪುರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣರ ಸಮುದಾಯದಲ್ಲಿ ಉತ್ತರ-ದಕ್ಷಿಣ ಎಂದು ಒಡಕು ಮೂಡಿಸುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಬ್ರಾಹ್ಮಣರು, ಕ್ಷಮೆ ಯಾಚಿಸುವಂತೆ ಆಗ್ರಹಿಸಿದರು.

ಬುಧವಾರ ನಗರದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿಪ್ರರು, ಬ್ರಾಹ್ಮಣರ ಕುರಿತು ಅನಗತ್ಯವಾಗಿ ಬ್ರಾಹ್ಮಣ ಸಮಾಜವನ್ನು ದೂರುಲಾಗುತ್ತಿದೆ. ಹೀಗಾಗಿ ಕೂಡಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮುದಾಯದ ಕ್ಷೇಮೆ ಕೋರುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ರಾಘವ ಅಣ್ಣಿಗೇರಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಾಂಧೀಜಿ ಅವರನ್ನು ಹತ್ಯೆ ಮಾಡಿರುವ ನಾಥುರಾಮ ಗೋಡ್ಸೆ ಜಾತಿಯನ್ನೇ ಮುಂದಿಟ್ಟು ಕೊಂಡು ಬ್ರಾಹ್ಮಣರನ್ನು ನಿಂದಿಸುವ ಕೆಲಸ ಮಾಡಿದ್ದಾರೆ. ಬ್ರಾಹ್ಮಣರ ಬಗ್ಗೆ ಅನಗತ್ಯವಾಗಿ ಜಾತಿ ಹೆಸರಿನಲ್ಲಿ ನಿಂದನೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಯೋತ್ಪಾದಕರ ಜಾತಿಯನ್ನು ಮುಂದಿಟ್ಟುಕೊಂಡು ಅಲ್ಪಸಂಖ್ಯಾತ ಸಮುದಾಯ ನಿಂದನಿಸುವ ಧೈರ್ಯ, ತಾಕತ್ತು ಇಲ್ಲದ ಕುಮಾರಸ್ವಾಮಿ, ಆಧಾರ ರಹಿತವಾಗಿ ಆರೋಪ ಜಾತಿ ನಿಂದನೆ ಮಾಡುವ ಕೆಲಸದಲ್ಲಿನಿರತರಾಗಿದ್ದಾರೆ. ಕೂಡಲೇ ಕುಮಾರಸ್ವಾಮಿ ಬ್ರಾಹ್ಮಣ ಸಮಾಜದ ಕ್ಷಮೆ ಯಾಚಿಸಬೇಕು ಹಾಗೂ ಸರ್ಕಾರ ತಕ್ಷಣವೇ ಕುಮಾರಸ್ವಾಮಿ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಪವನ ಕುಲಕರ್ಣಿ, ಆನಂದ ಜೋಶಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬ್ರಾಹ್ಮಣ ವಿರೋಧಿ ಹೇಳಿಕೆ ಖಂಡನಾರ್ಹವಾಗಿದೆ. ಸರ್ವರ ಹಿತ ಬಯಸುವ ಬ್ರಾಹ್ಮಣ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿರುವ ಕ್ರಮದ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಅತಿಹೆಚ್ಚು ಬಲಿದಾನ ಗೈದವರು ಬ್ರಾಹ್ಮಣರು. ಸಾಮಾಜಿಕ ಚಳುವಳಿ ಚಳುವಳಿ, ಭಾಷೆ, ಧಾರ್ಮಿಕ ಸಂಗತಿಗಳಂಥ ವಿಷಯದಲ್ಲಿ ಬ್ರಾಹ್ಮಣ ಸಮುದಾಯದವರು ಮುಂಚೂಣಿಯಲ್ಲಿ ನಿಂತಿರುತ್ತಾರೆ. ಗಾಂಧಿಜೀ ಅವರನ್ನು ಕೊಂದಿರುವ ಗೋಡ್ಸೆ ಜಾತಿ ಮುಂದಿಟ್ಟುಕೊಂಡು ಇಡೀ ಬ್ರಾಹ್ಮಣ ಸಮಾಜವವನ್ನು ಅಪಮಾನಿಸಿದ ಕುರಿತು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಸಮಾಜದ ಜಿಲ್ಲಾಧ್ಯಕ್ಷ ಮುಕುಂದು ಕುಲಕರ್ಣಿ, ಉಪಾಧ್ಯಕ್ಷ ಭೀಮಸೇನ ನಾಯಕ, ಪ್ರಶಾಂತ ದೇಶಪಾಂಡೆ, ಸಮೀರ ಕುಲಕರ್ಣಿ, ಡಾ.ಆನಂದ ಕುಲಕರ್ಣಿ, ಶಂಕರ ಕುಲಕರ್ಣಿ, ಬಿ.ಜೆ ಪುರಾಣಿಕ, ಸಚಿನ ಫಡ್ನಿಸ್, ಪುರುಷೋತ್ತಮ ಕುಲಕರ್ಣಿ, ಡಾ.ರವಿ ಜಹಗೀರದಾರ, ರಾಘವೇಂದ್ರ ಕುಲಕರ್ಣಿ, ಕೃಷ್ಣ ಗುನ್ಹಾಳಕರ, ಮೀತಾ ದೇಸಾಯಿ, ಲಕ್ಷ್ಮೀ ಕುಲಕರ್ಣಿ, ಮೀನಾಕ್ಷಿ ಸಾವಳಗಿ, ಶ್ರೀರಕ್ಷಾ ಸೊನ್ನ, ಚೇತನ ದೇಶಪಾಂಡೆ, ರವಿ ಕುಲಕರ್ಣಿ, ದೀಪಕ ಕುಲಕರ್ಣಿ, ಶ್ರೀರಂಗ ಪುರಾಣಿಕ, ಸುಧೀಂದ್ರ ಇಳ್ಳಾಲ, ಗುರುರಾಜ ಇಳ್ಳಾಲ. ಶರದ್ ಅರ್ಜುಣಗಿ, ಸಂದೀಪ ಅರ್ಜುಣಗಿ, ಅರವಿಂದ ಜೋಶಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪ್ರಹ್ಲಾದ್‌ ಜೋಶಿ ಒತ್ತಾಯ

ಟಾಪ್ ನ್ಯೂಸ್

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ