ಬಿಜೆಪಿಯಲ್ಲಿ ಮತ್ತೆ ಬಿಎಸ್‌ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ

ಹಿಂದುತ್ವದ ಹೆಸರಿನಲ್ಲಿ ಮತ ಕ್ರೋಢೀಕರಣ ಕಷ್ಟವಾಗುವ ಲಕ್ಷಣಗಳು ಬಿಜೆಪಿ ನಾಯಕರಿಗೆ ಕಂಡು ಬಂದಂತಿದೆ.

Team Udayavani, Aug 18, 2022, 11:47 AM IST

ಬಿಜೆಪಿಯಲ್ಲಿ ಮತ್ತೆ ಬಿಎಸ್‌ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಹೈಕಮಾಂಡ್‌ ಮತ್ತೆ ಯಡಿಯೂರಪ್ಪ ಅವರಿಗೆ ಜೈ ಎಂದಿರುವುದು ರಾಜ್ಯ ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿ.ಎಸ್‌.ಯಡಿ ಯೂರಪ್ಪ ಅವರು ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಅಧಿಕಾರ ವಹಿಸಿಕೊಂಡಿದ್ದರೂ, ಒಂದಿ ಲ್ಲೊಂದು ಕಾರಣದಿಂದಾಗಿ ಅವಧಿ ಪೂರ್ಣಗೊಳಿಸದೇ ಮುಖ್ಯಮಂತ್ರಿ ಸ್ಥಾನ ತ್ಯಾಗ ಮಾಡಿದ್ದರು. ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್‌ ನಡುವೆ ನಿರಂತರ ಆಂತರಿಕ ಸಂಘರ್ಷ ನಡೆಯುತ್ತಲೇ ಇದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಕುಟುಂಬ ರಾಜಕಾರಣ ಹಾಗೂ ಜಾತಿ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕು ಎನ್ನುವ ಕಾರಣಕ್ಕೆ ಯಡಿಯೂರಪ್ಪ ಅವರನ್ನು ತೆರೆಗೆ ಸರಿಸುವ ಎಲ್ಲ ಪ್ರಯತ್ನಗಳನ್ನೂ ನಡೆಸಿದಂತಿದೆ.

ಅದೇ ಕಾರಣಕ್ಕೆ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ವಿಧಾನ ಪರಿಷತ್‌ ಸ್ಥಾನ, ಪಕ್ಷದಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನ, ಸಂಪುಟದಲ್ಲಿ ಸ್ಥಾನಕ್ಕೆ ಯಡಿಯೂರಪ್ಪ ನಿರಂತರ ಒತ್ತಡ ಹೇರುತ್ತಿದ್ದರೂ, ಎಲ್ಲ ಬೇಡಿಕೆ‌ಗಳನ್ನೂ ನಿರಾಕರಿಸುವ ಮೂಲಕ ಯಡಿಯೂರಪ್ಪ ಅವರ ರಾಜಕೀಯ ಯುಗಾಂತ್ಯ ಮಾಡುವ ಪ್ರಯತ್ನವನ್ನು ಬಿಜೆಪಿ ಹೈಕಮಾಂಡ್‌ ಮಾಡಿದಂತಿದೆ.

ಆದರೆ, ಇತ್ತೀಚೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮ ರಾಜ್ಯ ಬಿಜೆಪಿ ನಾಯಕರ ಜಂಘಾಬಲವನ್ನೇ ಅಡಗಿಸಿದಂತೆ ಕಾಣಿಸುತ್ತದೆ. ಅದರ ಪರಿಣಾಮ ಬಿಜೆಪಿ ಹೈಕಮಾಂಡ್‌ ಮೇಲೂ ಆದಂತಿದ್ದು, ಅವರ ಲೆಕ್ಕಾಚಾರ ಬದಲಾಗಲು ಕಾರಣವಾಗಿರಬಹುದು ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

ಹಿಡಿತಕ್ಕೆ ಸಿಗದ ದಕ್ಷಿಣದ ರಾಜಕಾರಣ: ಬಿಜೆಪಿ ಹೈಕಮಾಂಡ್‌ ನಾಯಕರಿಗೆ ಉತ್ತರ ಭಾರತದಲ್ಲಿ ಪಕ್ಷವನ್ನು ಹಿಂದೂತ್ವದ ಆಧಾರದಲ್ಲಿ ಅಧಿಕಾರಕ್ಕೆ ತರುವ ತಂತ್ರಗಾರಿಕೆ ಕರಗತವಾಗಿದ್ದು, ಅದೇ ತಂತ್ರವನ್ನು ದಕ್ಷಿಣ ಭಾರತದಲ್ಲಿಯೂ ಪ್ರಯೋಗ ಮಾಡುವ ಕಸರತ್ತನ್ನು ಬಿಜೆಪಿ ಹೈಕಮಾಂಡ್‌ ಕರ್ನಾಟಕದಲ್ಲಿ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕರ್ನಾಟಕದಲ್ಲಿ ಎಷ್ಟೇ ಕೋಮು ಸಂಘರ್ಷಗಳು ನಡೆದರೂ, ಹಿಂದುತ್ವದ ಹೆಸರಿನಲ್ಲಿ ಮತ ಕ್ರೋಢೀಕರಣ ಕಷ್ಟವಾಗುವ ಲಕ್ಷಣಗಳು ಬಿಜೆಪಿ ನಾಯಕರಿಗೆ ಕಂಡು ಬಂದಂತಿದೆ. ಅಲ್ಲದೇ, ಕರ್ನಾಟಕ ಜಾತಿ ರಾಜಕಾರಣ ಹಾಗೂ ಸಮುದಾಯಗಳನ್ನು ಹಿಡಿತದಲ್ಲಿಟ್ಟುಕೊಂಡ ನಾಯಕರ ಪ್ರಭಾವದಿಂದ ಸಮುದಾಯಗಳನ್ನು ಸೆಳೆಯುವ ಪ್ರಯತ್ನ ಯಶಸ್ಸು ಕಾಣುವುದಿಲ್ಲ ಎನ್ನುವ ಅಂಶ ಬಿಜೆಪಿ ಹೈಕಮಾಂಡ್‌ ನಾಯಕರಿಗೆ ಮನವರಿಕೆ  ಯಾದಂತಿದೆ ಎಂದು ಹೇಳಲಾಗಿದೆ.

ಆಪ್ತ ವಲಯದಲ್ಲಿ ಚಿಗುರಿದ ಕನಸು
ಯಡಿಯೂರಪ್ಪ ಅವರನ್ನು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ನೇಮಕ ಮಾಡಿದ್ದು, ಬಿಜೆಪಿ ಯಲ್ಲಿನ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಕನಸು ಕೈ ಬಿಟ್ಟಿದ್ದ ಬಹುತೇಕರು ಮತ್ತೆ ಕನಸು ಚಿಗುರುವಂತೆ ಮಾಡಿದೆ. ಆದರೆ, ಇನ್ನೊಂದೆಡೆ ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ವಿರೋಧಿ ಬಣದ ಶಾಸಕರು ಹಾಗೂ ನಾಯಕರಲ್ಲಿ ಆತಂಕ ಹೆಚ್ಚಾಗುವಂತೆಯೂ ಮಾಡಿದೆ. ಎರಡು ಪ್ರಮುಖ ಸಮಿತಿಗಳಲ್ಲಿ ಯಡಿಯೂರಪ್ಪ ಅವರಿಗೆ ಸ್ಥಾನ ದೊರೆತಿರುವುದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮಗೆ ಟಿಕೆಟ್‌ ಸಿಗುತ್ತದೆಯೋ ಇಲ್ಲವೋ ಎನ್ನುವ ಆತಂಕವೂ ಕೆಲವು ಶಾಸಕರಲ್ಲಿ ಉಂಟಾಗುವಂತೆ ಮಾಡಿತ್ತು.

ಹೈಕಮಾಂಡ್‌ ಲೆಕ್ಕಾಚಾರದ ಚರ್ಚೆ
ಬಿಜೆಪಿ ಹೈಕಮಾಂಡ್‌ ಯಡಿಯೂರಪ್ಪ ಅವರನ್ನು ಪೂರ್ಣ ತೆರೆಗೆ ಕಳುಹಿಸುವ ಲೆಕ್ಕಾಚಾರದಲ್ಲಿಯೇ ಆಲೋಚನೆ ಮಾಡುತ್ತ ಏಕಾಏಕಿ ಪಕ್ಷದ ಅತ್ಯುನ್ನತ ಸಮಿತಿಯಲ್ಲಿ ಸ್ಥಾನ ನೀಡಿರುವುದರ ಹಿಂದಿನ ಉದ್ದೇಶ ಏನು ಎನ್ನುವ ಬಗ್ಗೆಯೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಯಡಿಯೂರಪ್ಪ ಅವರ ಶಕ್ತಿ ಬಲಪಡಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದಾ ಅಥವಾ ಅವರಿಗೆ ಕೇಂದ್ರ ಸಮಿತಿಯಲ್ಲಿ ಸ್ಥಾನ ನೀಡಿ, ರಾಜ್ಯ ರಾಜಕೀಯದಿಂದ ಅವರನ್ನು ದೂರ ಮಾಡುವುದು, ಜೊತೆಗೆ ಅವರಿಗೆ ಉನ್ನತ ಸ್ಥಾನ ನೀಡಿರುವುದರಿಂದ ಪುತ್ರನಿಗೆ ಯಾವುದೇ ಸ್ಥಾನಮಾನ ಕೇಳದಂತೆ ಪರೋಕ್ಷ ನಿರ್ಬಂಧ ಹೇರುವ ಕಾರ್ಯತಂತ್ರ ಅಡಗಿದಿಯಾ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಯಡಿಯೂರಪ್ಪ ಅವರಿಗೆ ಕರ್ನಾಟಕದ ಜೊತೆಗೆ ದಕ್ಷಿಣದ ರಾಜ್ಯಗಳಲ್ಲಿಯೂ ಪ್ರವಾಸ ಮಾಡುವ ಜವಾಬ್ದಾರಿ ನೀಡಿರುವುದರಿಂದ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕೆನ್ನುವ ಬಿಜೆಪಿ ಹೈಕಮಾಂಡ್‌ನ‌ ಲೆಕ್ಕಾಚಾರಕ್ಕೆ ರಾಜ್ಯದ ಮತದಾರ ಯಾವ ರೀತಿ ಸ್ಪಂದಿಸುತ್ತಾನೆ ಎನ್ನುವುದು ಮಾತ್ರ ಇನ್ನೂ ನಿಗೂಢ.

●ಶಂಕರ ಪಾಗೋಜಿ

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.