ಬಿಎಸ್ ವೈ ಸರ್ಕಾರಕ್ಕೀಗ ಸ್ಪಷ್ಟ ಬಹುಮತ; ತಲೆಕೆಳಗಾದ ಕಾಂಗ್ರೆಸ್, ಜೆಡಿಎಸ್ ಲೆಕ್ಕಾಚಾರ

ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಕನಿಷ್ಠ 112 ಶಾಸಕರ ಅಗತ್ಯವಿತ್ತು

Team Udayavani, Dec 9, 2019, 1:09 PM IST

ಬೆಂಗಳೂರು:ರಾಜ್ಯದ ಹದಿನೈದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ 12 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಭರ್ಜರಿ ಬಹುಮತ ಪಡೆದಿದೆ. ಇದರೊಂದಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಮೂರುವರೆ ವರ್ಷಗಳ ಕಾಲ ಭದ್ರವಾದಂತಾಗಿದೆ.

ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಪಚುನಾವಣೆಯಲ್ಲಿ ಎಂಟು ಸ್ಥಾನಗಳಲ್ಲಿ ಗೆಲ್ಲಲೇಬೇಕಾದ ಅನಿರ್ವಾಯತೆಗೆ ಸಿಲುಕಿತ್ತು. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಕನಿಷ್ಠ 112 ಶಾಸಕರ ಅಗತ್ಯವಿತ್ತು. ಇದೀಗ ಉಪಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಜಯ ಸಾಧಿಸುವುದರೊಂದಿಗೆ ಪ್ರಸ್ತುತ ವಿಧಾನಸಭೆಯಲ್ಲಿ ಬಿಜೆಪಿ ಬಲ 117ಕ್ಕೆ ಏರಿದಂತಾಗಿದೆ.

105 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿಗೆ ವಿಧಾನಸಭೆಯಲ್ಲಿ ಸರಳ ಬಹುಮತ ಸಾಬೀತುಪಡಿಸಲು 112 ಶಾಸಕರ ಅಗತ್ಯವಿತ್ತು. ಹಾಲಿ 222 ಸದಸ್ಯಬಲದ(2 ಕ್ಷೇತ್ರಗಳಿಗೆ ಉಪಚುನಾವಣೆ ಇನ್ನಷ್ಟೇ ಘೋಷಣೆಯಾಗಬೇಕಿದೆ) ವಿಧಾನಸಭೆಯಲ್ಲಿ ಬಿಜೆಪಿ ಪ್ರಸ್ತುತ 117 ಸಂಖ್ಯಾಬಲ ಹೊಂದಿದೆ. ಕಾಂಗ್ರೆಸ್ 68, ಜೆಡಿಎಸ್ 34 ಸ್ಥಾನ ಹೊಂದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತ ಹೊಂದಿದ್ದು, ಬಿಎಸ್ ಯಡಿಯೂರಪ್ಪ ಸಿಎಂ ಕುರ್ಚಿ ಭದ್ರವಾದಂತಾಗಿದೆ.

15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಒಂಬತ್ತು ಕ್ಷೇತ್ರಗಳನ್ನು ಕಳೆದುಕೊಂಡಿದ್ದು, ಜೆಡಿಎಸ್ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇದರಿಂದ ಮತ್ತೆ ಅಧಿಕಾರದ ಗದ್ದುಗೆ ಏರಬೇಕೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ಕುಮಾರಸ್ವಾಮಿ ಲೆಕ್ಕಾಚಾರ ತಲೆಕೆಳಗಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮೈಸೂರು/ ಬೆಂಗಳೂರು: ಪಾಕಿಸ್ಥಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಾ ಲಿಯೋನಾಗೆ ನಕ್ಸಲ್‌ ನಂಟು ಇರುವುದು ಸಾಬೀತಾ ಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ...

  • ಬೆಂಗಳೂರು: ಅನಕ್ಷರತೆ, ಬಡತನ, ಮೂಢನಂಬಿಕೆ, ಸಂಪ್ರದಾಯಗಳು,ಅರಿವಿನ ಕೊರತೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹ ಹೆಚ್ಚುತ್ತಲೇ ಇದೆ. ಕಳೆದ ಐದು ವರ್ಷಗಳಲ್ಲಿ 453...

  • ಬೆಂಗಳೂರು: ಅಮೂಲ್ಯಾ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ "ಮುಸಲ್ಮಾನ್‌,ದಲಿತ,ಕಾಶ್ಮೀರಿ, ಟ್ರಾನ್ಸ್‌,ಆದಿವಾಸಿ-ಮುಕ್ತಿ, ಮುಕ್ತಿ, ಮುಕ್ತಿ, ಈ ಕೂಡಲೇ' ಎಂಬ...

  • ಬೆಂಗಳೂರು: ರಾಜ್ಯದ ಸರಕಾರಿ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಿದೇಶೀ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಹೆಚ್ಚು ನಿಗಾ ವಹಿಸಬೇಕು ಎಂದು ಕಾಲೇಜು...

  • ಬೆಂಗಳೂರು: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಶ ಕೊಟ್ಟು, ಅವುಗಳನ್ನು ಓದುಗ ಸ್ನೇಹಿ ಮತ್ತು ಜನಸ್ನೇಹಿ ಜ್ಞಾನ ಕೇಂದ್ರಗಳನ್ನಾಗಿ ಮಾಡಲು ಗ್ರಾಮೀಣಾಭಿವೃದ್ಧಿ...

ಹೊಸ ಸೇರ್ಪಡೆ