ನಗರಸಭೆಯಲ್ಲಿದ್ದ ಫೋಟೋ ಒಂದೇ ದಿನದಲ್ಲಿ ಬದಲಾವಣೆ ; ಬಿಎಸ್‌ವೈಗೆ ಕೊಕ್, ಬೊಮ್ಮಾಯಿಗೆ ಸ್ಥಾನ!

Team Udayavani, Apr 5, 2022, 8:11 PM IST

ಒಂದೇ ದಿನದಲ್ಲಿ ಬದಲಾವಣೆ ; ಬಿಎಸ್‌ವೈಗೆ ಕೊಕ್, ಬೊಮ್ಮಾಯಿಗೆ ಸ್ಥಾನ!

ಸಾಗರ : ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಸರಿಸುಮಾರು ಒಂಬತ್ತು ತಿಂಗಳು ಕಳೆದಿದ್ದರೂ ಸಾಗರದ ನಗರಸಭೆ ಮಾತ್ರ ಈಗಲೂ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಇರಿಸಿ ಗೌರವಿಸುತ್ತಿದೆ ಎಂದು ‘ಉದಯವಾಣಿ’ ಸುದ್ದಿ ಮಾಡಿದ 24 ಘಂಟೆಯೊಳಗೆ ಸಾಗರ ನಗರಸಭೆಯ ಅಧ್ಯಕ್ಷರ ಕೊಠಡಿಯಲ್ಲಿ ಬಿಎಸ್‌ವೈ ಫೋಟೋಗೆ ಕೊಕ್ ಕೊಟ್ಟು ಬಸವರಾಜ ಬೊಮ್ಮಾಯಿ ಅವರ ಫೋಟೋವನ್ನೂ ಅಳವಡಿಸಲಾಗಿರುವ ಘಟನೆ ಮಂಗಳವಾರ ನಡೆದಿದೆ.

ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿಯಲ್ಲಿ ಒಂದೆಡೆ ಹಾಲಿ ಶಾಸಕ ಹಾಲಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗಳನ್ನು ಹಾಕಲಾಗಿದೆ. ಇನ್ನೊಂದೆಡೆ ಭಾರತದ ಪ್ರಧಾನ ನರೇಂದ್ರ ಮೋದಿ, ದೇಶದ ರಾಷ್ಟ್ರಪತಿ ರಾಮನಾಥ್ ಕೋವಿದ್‌ರ ಫೋಟೋಗಳಿದ್ದು, ಅವರ ಜೊತೆ ಮುಖ್ಯಮಂತ್ರಿಗಳ ಫೋಟೋ ಇರುವಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೋ ರಾರಾಜಿಸುತ್ತಿದೆಯೇ ವಿನಃ ಇಡೀ ಹಾಲ್‌ನಲ್ಲಿ ಎಲ್ಲಿಯೂ ರಾಜ್ಯದ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೋಟೋ ಕಂಡುಬರುತ್ತಿರಲಿಲ್ಲ. ಇದು ಉದಯವಾಣಿ ಆನ್‌ಲೈನ್‌ನಲ್ಲೂ ಸುದ್ದಿಯಾಗಿತ್ತು. ಉದಯವಾಣಿಯ ಸುದ್ದಿಯನ್ನೇ ಅರಸಿ ಉಳಿದ ಆನ್‌ಲೈನ್ ವೆಬ್‌ಪೋರ್ಟಲ್‌ಗಳು ಕೂಡ ಸುದ್ದಿಯನ್ನು ದಾಖಲಿಸಿದ್ದವು.

ಇದನ್ನೂ ಓದಿ : ಸಿಟಿ ಮಾರ್ಕೆಟ್ ಮೇಲ್ಸೇತುವೆಯಲ್ಲಿ ಅಪಘಾತ : ಹಲವರಿಗೆ ಗಾಯ, ಟೌನ್ ಹಾಲ್ ಸುತ್ತ ಸಂಚಾರ ದಟ್ಟಣೆ

ಸುದ್ದಿ ಹರಡುತ್ತಿದ್ದಂತೆ ಮಾತನಾಡಿದ್ದ ಸಾಗರ ನಗರಸಭೆ ಪೌರಾಯುಕ್ತ ರಾಜು ಡಿ. ಬಣಕಾರ್, ನಗರಸಭೆ ಅಧ್ಯಕ್ಷರ ಕೊಠಡಿಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಜನಪ್ರತಿನಿಧಿಗಳ ಫೋಟೋ ಅಳವಡಿಸುವ ಸಂಬಂಧ ಅಧಿಕೃತ ಸುತ್ತೋಲೆ, ಸೂಚನೆಗಳಿರುವ ಬಗ್ಗೆ ಮಾಹಿತಿ ಇಲ್ಲ. ಸರ್ಕಾರದ ಸೂಚನೆ ಪರಿಶೀಲಿಸಿ, ಈ ಬಗ್ಗೆ ಗಮನಹರಿಸಲಾಗುವುದು ಎಂದಿದ್ದರು. ಎಂ.ಕೆ. ಗಾಂಧಿ, ಡಾ. ಬಿ.ಆರ್.ಅಂಬೇಡ್ಕರ್‌ರ ಭಾವಚಿತ್ರ ಹಾಕಲು ಅಧಿಕೃತ ಸೂಚನೆಗಳಿವೆ. ಮುಖ್ಯಮಂತ್ರಿಗಳ ಭಾವಚಿತ್ರ ಹಾಕುವ ಸಂಬಂಧ ಪ್ರೊಟೋಕಾಲ್ ಸೂಚನೆ ಇಲ್ಲ.

ಈ ಹಿಂದೆ ಕಾಗೋಡು ತಿಮ್ಮಪ್ಪ ಅವರು ಶಾಸಕರಾಗಿದ್ದ ಅವಧಿಯಲ್ಲಿ ಸ್ಥಳೀಯ ಶಾಸಕರ ಭಾವಚಿತ್ರ ಮಾತ್ರ ಹಾಕಲಾಗಿತ್ತು. ಅಂದಿನ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಹಾಕಿರಲಿಲ್ಲ ಎಂದು ಸಾಗರ ನಗರಸಭೆಯಲ್ಲಿ ಈ ಹಿಂದೆ ಪ್ರಭಾರಿ ಆಯುಕ್ತರಾಗಿಯೂ ಕಾರ್ಯ ನಿರ್ವಹಿಸಿರುವ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಕೆ.ನಾಗಪ್ಪ ಪ್ರತಿಪಾದಿಸಿದ್ದರು. ಪೌರಾಯುಕ್ತ ರಾಜು. ಡಿ.ಬಣಕಾರ್‌ರಿಗೆ ಪತ್ರಿಕೆ ಕರೆ ಮಾಡಿದರೂ ಅವರದನ್ನು ಸ್ವೀಕರಿಸಲಿಲ್ಲ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.