ಮಹಾಮಳೆ: ಬೆಳಗಾವಿ ಭೇಟಿ ನೀಡಲಿರುವ ಬಿಎಸ್ ಯಡಿಯೂರಪ್ಪ
Team Udayavani, Sep 10, 2019, 8:17 AM IST
ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಉತ್ತರ ಕರ್ನಾಟಕದ ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿವೆ.
ನೆರೆ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪರಿಹಾರ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಲಿದ್ದಾರೆ.