ಪರೀಕ್ಷೆ ಬರೆಯಲು ಗ್ರಾಮೀಣ ಮಕ್ಕಳಿಗೆ ಬಸ್ ವ್ಯವಸ್ಥೆ: ಶಿಕ್ಷಣ ಕಾಳಜಿ ಮೆರೆದ ಗ್ರಾಪಂ ಅಧ್ಯಕ್ಷ
Team Udayavani, Mar 29, 2022, 11:44 AM IST
ವಾಡಿ: ನಗರಕ್ಕೆ ಹೋಗಿ ಪರೀಕ್ಷೆ ಬರೆಯಲು ಸಾರಿಗೆ ವ್ಯವಸ್ಥೆಯ ಸಂಕಷ್ಟ ಎದುರಿಸಿ ಚಿಂತಿತರಾಗಿದ್ದ ಗ್ರಾಮೀಣ ಭಾಗದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗ್ರಾಪಂ ಅಧ್ಯಕ್ಷನೋರ್ವ ಬಸ್ ವ್ಯವಸ್ಥೆ ಮಾಡುವಲ್ಲಿ ಯಶಸ್ವಿಯಾಗುವ ಮೂಲಕ ಶಿಕ್ಷಣ ಕಾಳಜಿ ಮೆರೆದ ಘಟನೆ ಚಿತ್ತಾಪುರ ತಾಲೂಕಿನ ಯಾಗಾಪುರ ಗ್ರಾಮದಲ್ಲಿ ನಡೆದಿದೆ.
ಸೋಮವಾರದಿಂದ ಶುರುವಾದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಯಾಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳು ಮತ್ತು ತಾಂಡಾಗಳ ಒಟ್ಟು 68 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು 18 ಕಿ.ಮೀ ದೂರದ ಹೋಬಳಿ ಕೇಂದ್ರಸ್ಥಾನ ನಾಲವಾರ ಪರೀಕ್ಷಾ ಕೇಂದ್ರಕ್ಕೆ ಹೋಗಬೇಕಿತ್ತು. ಯಾಗಾಪುರದಿಂದ ನಾಲವಾರಕ್ಕೆ ಸಾರಿಗೆ ಸೌಲಭ್ಯವಿಲ್ಲ. ಹಣ ಖರ್ಚು ಮಾಡಿ ಖಾಸಗಿ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಬೇಕಾದ ಪ್ರಸಂಗ ಎದುರಾಗಿತ್ತು. ಇದನ್ನು ಗಮನಿಸಿದ ಯಾಗಾಪುರ ಗ್ರಾಪಂ ಅಧ್ಯಕ್ಷ ಮದನ್ ರಾಠೋಡ, ತಕ್ಷಣವೇ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಪತ್ರ ಬರೆದು ಪರೀಕ್ಷೆ ಮುಗಿಯುವ ವರೆಗೆ ತಾತ್ಕಾಲಿಕ ವಿಶೇಷ ಬಸ್ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಗ್ರಾಮೀಣ ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ಯಾಗಾಪುರ ಗ್ರಾಮಕ್ಕೆ ಬಸ್ ಕಳುಹಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಉಚಿತವಾಗಿ ಪೆನ್ ವಿತರಿಸುವ ಮೂಲಕ ಗ್ರಾಪಂ ಅಧ್ಯಕ್ಷ ಮದನ್ ರಾಠೋಡ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭಕೋರಿದರು.
ಮುಖಂಡರಾದ ವಿಜಯ್ ಕುಮಾರ್ ನಾಯಕ್, ರೆಡ್ಡಿ ಬಂಜಾರ, ಚಂದ್ರು ಗೌಡ, ಗುಳ್ಳಪ್ಪ ಮುಂತಾದವರು ಇದ್ದರು.
ಇದನ್ನೂ ಓದಿ : ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಗ್ರಾಮೀಣ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡಿದ ಗ್ರಾಪಂ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ
ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ: ಸಿದ್ದರಾಮಯ್ಯ ವಾಗ್ದಾಳಿ
ಮಲೆನಾಡಿನಲ್ಲಿ ಮಳೆ ಅಬ್ಬರ: 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ, 4 ಹಸುಗಳು ಸಾವು
ಕಾಂಗ್ರೆಸ್ ಕೋಳಿ ಕೂಗಿದರೆ ಬೆಳಕು ಹರಿಯುತ್ತದೆಂಬ ಕಾಲ ಹೋಯಿತು: ಕುಮಾರಸ್ವಾಮಿ