ಕಾವೇರಿದ ಉಪಕಣ: ಕಾಂಗ್ರೆಸ್‌, ಬಿಜೆಪಿಯಿಂದ ತಲಾ 15 ಅಭ್ಯರ್ಥಿಗಳು ಕಣದಲ್ಲಿ

ಜೆಡಿಎಸ್‌ನ 12 ಸ್ಪರ್ಧಿಗಳು, ಇಬ್ಬರಿಂದ ನಾಮಪತ್ರ ವಾಪಸ್‌

Team Udayavani, Nov 22, 2019, 6:15 AM IST

pp-49

ಬಿಜೆಪಿಯಿಂದ ಅಶೋಕ್‌ ಪೂಜಾರ್‌ ಮನವೊಲಿಕೆ ಯತ್ನ ವಿಫ‌ಲ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಬಿಜೆಪಿ ಸರಕಾರದ ಭವಿಷ್ಯ ನಿರ್ಧರಿಸಲಿರುವ 15 ಕ್ಷೇತ್ರಗಳ ಉಪಚುನಾವಣೆಯ ಅಖಾಡ ಸಿದ್ಧವಾಗಿದ್ದು, ಅಂತಿಮವಾಗಿ 165 ಮಂದಿ ಕಣದಲ್ಲಿ ಉಳಿದುಕೊಂಡಿದ್ದಾರೆ. ಪ್ರಮುಖವಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ನ ತಲಾ 15 ಹಾಗೂ ಜೆಡಿಎಸ್‌ನ 12 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.

ನಾಮಪತ್ರ ವಾಪಸ್‌ಗೆ ಗುರುವಾರ ಅಂತಿಮ ದಿನವಾಗಿದ್ದು, 53 ಅಭ್ಯರ್ಥಿಗಳು ಉಮೇದುವಾರಿಕೆ ವಾಪಸ್‌ ಪಡೆದರು. ಹೀಗಾಗಿ ಒಂಬತ್ತು ಮಹಿಳೆಯರು ಸಹಿತ 165 ಅಭ್ಯರ್ಥಿಗಳು ಕಣದಲ್ಲಿ ಉಳಿದರು. ಮೂರು ಪಕ್ಷಗಳಲ್ಲಿ ಬಿಜೆಪಿಗೆ ಬಂಡಾಯದ ಚಿಂತೆ ಹೆಚ್ಚಾಗಿ ಕಾಡುತ್ತಿದೆ. ಹೊಸಕೋಟೆ ಮತ್ತು ವಿಜಯನಗರ ಕ್ಷೇತ್ರಗಳಲ್ಲಿ ಕಣದಲ್ಲೇ ಉಳಿದ ಬಿಜೆಪಿಯ ಬಂಡಾಯ ಅಭ್ಯರ್ಥಿಗಳಾದ ಶರತ್‌ ಬಚ್ಚೇಗೌಡ, ಕವಿರಾಜ್‌ ಅರಸ್‌ರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಕಾಂಗ್ರೆಸ್‌ಗೂ ಅಥಣಿ ಕ್ಷೇತ್ರದಲ್ಲಿ ಬಂಡಾಯದ ಚಿಂತೆ ಇತ್ತಾದರೂ ಕೊನೆಯ ಕ್ಷಣದಲ್ಲಿ ನಡೆಸಿದ ಮನವೊಲಿಕೆ ಕಾರ್ಯ ಫ‌ಲ ನೀಡಿದೆ. ಅತ್ತ ಜೆಡಿಎಸ್‌ 14 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತಾದರೂ ಕಡೇ ಕ್ಷಣದಲ್ಲಿ ಹಿರೇಕೆರೂರು ಮತ್ತು ಅಥಣಿಯ ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಹೊಸಕೋಟೆಯಲ್ಲಿ ಜೆಡಿಎಸ್‌ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್‌ ಬಚ್ಚೇಗೌಡರಿಗೆ ಬೆಂಬಲ ಘೋಷಿಸಿದೆ.

ಕಣದಲ್ಲಿ 13 ಅನರ್ಹ ಶಾಸಕರು
ಶಿವಾಜಿನಗರ ಮತ್ತು ರಾಣೆಬೆನ್ನೂರು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ಹೀಗಾಗಿ ಇವೆಲ್ಲವೂ ಹೈಪ್ರೊಫೈಲ್‌ ಕ್ಷೇತ್ರಗಳು. ಶಿವಾಜಿನಗರದಲ್ಲಿ ರೋಶನ್‌ಬೇಗ್‌ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳದ ಕಾರಣ ಎಂ. ಸರವಣಗೆ ಟಿಕೆಟ್‌ ನೀಡಿ ಕಣಕ್ಕಿಳಿಸಲಾಗಿದೆ. ರಾಣೆಬೆನ್ನೂರಿನಲ್ಲಿ ಹಿಂದೆ ಕೆಪಿಜೆಪಿಯಿಂದ ಗೆದ್ದಿದ್ದ ಆರ್‌. ಶಂಕರ್‌ಗೆ ಟಿಕೆಟ್‌ ನೀಡದೆ, ಬಿಜೆಪಿಯಿಂದ ಅರುಣ್‌ಕುಮಾರ್‌ಗೆ ಟಿಕೆಟ್‌ ನೀಡಿ ಅದೃಷ್ಟ ಪರೀಕ್ಷೆ ನಡೆಸಲಾಗಿದೆ.

ಪ್ರಮುಖ ಕ್ಷೇತ್ರಗಳ ಸ್ಥಿತಿಗತಿ
– ಅಥಣಿ
ಜೆಡಿಎಸ್‌ ಅಭ್ಯರ್ಥಿ ಗುರು ದಾಸ್ಯಾಳ್‌ ಕೊನೇ ಘಳಿಗೆಯಲ್ಲಿ ನಾಮಪತ್ರ ಹಿಂಪಡೆದಿದ್ದಾರೆ. ತಮ್ಮದೇ ಪಕ್ಷದ ಮೂಲವುಳ್ಳ ಹಾಗೂ ಲಿಂಗಾಯತ ಸಮುದಾಯದ ದಾಸ್ಯಾಳ್‌ ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದು ಕುಮಟಳ್ಳಿಗೆ ಲಾಭ ತಂದುಕೊಡಬಹುದು ಎಂದು ಅಂದಾಜಿಸಲಾಗಿದೆ.

– ಹಿರೇಕೆರೂರು
ಹಿರೇಕೆರೂರಿನಲ್ಲಿ ಬಿಜೆಪಿಯಿಂದ ಬಿ.ಸಿ. ಪಾಟೀಲ್‌ ಸ್ಪರ್ಧಿಸುತ್ತಿದ್ದು, ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಲಿಂಗಾಯತ ಸಮುದಾಯದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ನಾಯಕರ ಒತ್ತಡ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ವ್ಯಂಗ್ಯ ಮತ್ತಿತರ ಕಾರಣಗಳಿಂದ ತಮ್ಮ ಅಭ್ಯರ್ಥಿತನ ವಾಪಸ್‌ ಪಡೆದಿದ್ದಾರೆ.

-ಗೋಕಾಕ್‌
ಇಲ್ಲಿ ಬಿಜೆಪಿಯ ರಮೇಶ್‌ ಜಾರಕಿಹೊಳಿ ವಿರುದ್ಧ ಹಿಂದಿನ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಅಶೋಕ್‌ ಪೂಜಾರಿ ಜೆಡಿಎಸ್‌ನಿಂದ ಸ್ಪರ್ಧೆ ಒಡ್ಡಿದ್ದಾರೆ. ಅವರು ಬಿಜೆಪಿ ನಾಯಕರ ಒತ್ತಡಕ್ಕೆ ಮಣಿಯದೇ ಬಂಡಾಯ ಎದ್ದಿರುವುದು ಬಿಜೆಪಿಗೆ ಒಂದು ಹಂತದಲ್ಲಿ ಲಿಂಗಾಯತ ಮತ ಕೈತಪ್ಪುವ ಲಕ್ಷಣಗಳಿವೆ.

-ವಿಜಯನಗರ
ಈ ಕ್ಷೇತ್ರದಿಂದ ಬಿಜೆಪಿ ಮೂಲದ ಕವಿರಾಜ ಅರಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಕಮಲ ಪಾಳಯಕ್ಕೆ ಬಿಸಿ ಮುಟ್ಟಿಸಿದೆ. ಕವಿರಾಜ್‌ ಹಿಂದುಳಿದ ವರ್ಗಕ್ಕೆ ಸೇರಿದವರು. ಇದು ಪರೋಕ್ಷವಾಗಿ ಬಿಜೆಪಿಯ ಅನಂದ್‌ ಸಿಂಗ್‌ ಅವರಿಗೆ ತುಸು ತ್ರಾಸದಾಯಕವಾಗಿದೆ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ವಿ.ವೈ. ಘೋರ್ಪಡೆ ಅವರಿಗೆ ಲಾಭ ನೀಡಬಹುದು ಎಂದು ಅಂದಾಜಿಸಲಾಗಿದೆ.

-ಹೊಸಕೋಟೆ
ಇಲ್ಲಿ ಎಂ.ಟಿ.ಬಿ. ನಾಗರಾಜ್‌ ಚುನಾವಣ ಅಬ್ಬರಕ್ಕೆ ಸದ್ಯಕ್ಕೆ ಬ್ರೇಕ್‌ ಹಾಕಿರುವುದು ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ. ಒಂದು ಕಡೆ ಕಾಂಗ್ರೆಸ್‌ ಶಾಸಕ ಬೈರತಿ ಸುರೇಶ್‌ ಪತ್ನಿ ಪದ್ಮಾವತಿ ಸುರೇಶ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವುದು ತ್ರಿಕೋನ ಸ್ಪರ್ಧೆಯನ್ನು ಖಚಿತಪಡಿಸಿದೆ.

ಪ್ರಚಾರಕ್ಕೆ ಕಾಂಗ್ರೆಸ್‌ ಹಿರಿಯ ನಾಯಕರ ಗೈರು
ಉಪಚುನಾವಣ ಕಣ ಸಿದ್ಧವಾಗಿದ್ದರೂ ಕಾಂಗ್ರೆಸ್‌ ನಾಯಕರ ನಡುವಿನ ಭಿನ್ನಾಭಿಪ್ರಾಯ ಮಾತ್ರ ಅಂತ್ಯವಾಗಿಲ್ಲ. 15 ಕ್ಷೇತ್ರಗಳ ಟಿಕೆಟ್‌ ಹಂಚಿಕೆಯಲ್ಲಿ ಸಿದ್ದರಾಮಯ್ಯ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ಇವರ ಆಕ್ಷೇಪ. ಹೀಗಾಗಿ ಕೆ.ಎಚ್‌. ಮುನಿಯಪ್ಪ, ಬಿ.ಕೆ. ಹರಿಪ್ರಸಾದ್‌, ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್‌, ಡಾ| ಜಿ. ಪರಮೇಶ್ವರ್‌, ವೀರಪ್ಪ ಮೊಲಿ ಸಹಿತ ಅನೇಕರು ಪ್ರಚಾರದಲ್ಲಿ ತೊಡಗಿಕೊಂಡಿಲ್ಲ ಎನ್ನಲಾಗುತ್ತಿದೆ. ಇದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದೇ ಹೇಳಲಾಗುತ್ತಿದೆ.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.