ಸಂಪುಟ ಸಮಿತಿಗೆ ಇರಾನಿ, ಸೋನೊವಾಲ್
Team Udayavani, Jul 14, 2021, 6:45 AM IST
ಹೊಸದಿಲ್ಲಿ: ಕೇಂದ್ರ ಸಂಪುಟ ಪುನಾರಚನೆಯ ಬೆನ್ನಲ್ಲೇ , ಮಹತ್ವದ ಸಂಪುಟ ಸಮಿತಿಗಳನ್ನು ಪುನರಾಚಿಸಲಾಗಿದೆ. ಕೇಂದ್ರ ಸಚಿವೆ ಸ್ಮತಿ ಇರಾನಿ, ಭೂಪೇಂದರ್ ಯಾದವ್ ಹಾಗೂ ಸರ್ಬಾನಂದ ಸೋನೊವಾಲ್ ಅವರಿಗೆ ರಾಜಕೀಯ ವ್ಯವಹಾರಗಳಿಗಾಗಿ ಇರುವ ಸಂಪುಟ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
ಈ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ನರೇಂದ್ರ ಸಿಂಗ್ ತೋಮರ್, ಸ್ಮತಿ ಇರಾನಿ, ಪಿಯೂಶ್ ಗೋಯಲ್, ಪ್ರಹ್ಲಾದ್ ಜೋಶಿ, ಸರ್ಬಾನಂದ ಸೋನೊವಾಲ್, ಗಿರಿರಾಜ್ ಸಿಂಗ್, ಮನಸುಖ್ ಮಾಂಡ ವೀಯ, ಭೂಪೇಂದರ್ ಯಾದವ್ ಇದ್ದಾರೆ. ಅವರ ಜತೆಗೆ ನೂತನವಾಗಿ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ, ಅಶ್ವಿನಿ ವೈಷ್ಣವ್ ಅವರನ್ನು ಹೂಡಿಕೆ, ಬೆಳವಣಿಗೆಗಾಗಿನ ಸಂಪುಟ ಸಮಿತಿಗೆ ಸೇರ್ಪಡೆಗೊಳಿಸ ಲಾಗಿದೆ.
ಉದ್ಯೋಗ ಮತ್ತು ಕೌಶಲಾ ಭಿವೃದ್ಧಿ ಸಮಿತಿಯಲ್ಲೂ ಅಶ್ವಿನಿ ವೈಷ್ಣವ್ ಇದ್ದಾರೆ. ರಕ್ಷಣೆ ಹಾಗೂ ಆಂತರಿಕ ಭದ್ರತೆ ಕುರಿತಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ರಕ್ಷಣ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿ ಹಾಗೂ ನೇಮಕಾತಿ ಸಮಿತಿಯಲ್ಲಿ ಬದಲಾವಣೆ ಮಾಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ