ಕೇಂದ್ರ ಸಂಪುಟದಲ್ಲಿ ಜಾತಿ, ಪ್ರಾದೇಶಿಕತೆಗೆ ಪ್ರಾತಿನಿಧ್ಯ

ಸಮತೂಕದ ಆಯ್ಕೆ ಹಿಂದಿದೆ ಭವಿಷ್ಯದ ಲೆಕ್ಕಾಚಾರ

Team Udayavani, Jul 8, 2021, 7:10 AM IST

ಕೇಂದ್ರ ಸಂಪುಟದಲ್ಲಿ ಜಾತಿ, ಪ್ರಾದೇಶಿಕತೆಗೆ ಪ್ರಾತಿನಿಧ್ಯ

ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ಕಲ್ಪಿಸಿರುವ ಪ್ರಧಾನಿ ನರೇಂದ್ರ ಮೋದಿ ಜಾತಿ ಮತ್ತು ಪ್ರಾದೇಶಿಕತೆಯ ಲೆಕ್ಕಾಚಾರದಲ್ಲಿ ಪ್ರಾತಿನಿಧ್ಯ ನೀಡಿ ಪಕ್ಷಕ್ಕೆ ಎಲ್ಲ ಕಡೆಯೂ ಬಲ ತುಂಬುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಪ್ರಧಾನಿ ಎಲ್ಲರ ನಿರೀಕ್ಷೆಗಳನ್ನು ಮೀರಿ ರಾಜ್ಯಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡಿದ್ದು, ವಿಶೇಷವಾಗಿ ಜಾತಿ ಮತ್ತು ಪ್ರಾದೇಶಿಕ ಸಮಾನತೆಗೆ ಆದ್ಯತೆ ನೀಡಿರುವುದು ಭವಿಷ್ಯದಲ್ಲಿ ಎಲ್ಲ ಸಮುದಾಯದವರನ್ನು ಸೆಳೆಯಬೇಕೆಂಬ ಮುಂದಾಲೋಚನೆ ಬಿಜೆಪಿ ಹಾಕಿಕೊಂಡಂತಿದೆ.

ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಬಿಜೆಪಿಯ 6 ಸಂಸದರಿದ್ದರೂ ವಿಧಾನಸಭೆ ಹಾಗೂ ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಅಷ್ಟೊಂದು ಬಲಿಷ್ಠವಾಗಿಲ್ಲ. ಅದೇ ಕಾರಣಕ್ಕೆ ಆ ಭಾಗದ ಸಂಸದರು ವಿಶೇಷವಾಗಿ ರಾಜ್ಯದ ಪ್ರಮುಖ ಸಮುದಾಯವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿರುವ ಭಗವಂತ ಖೂಬಾ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಆ ಭಾಗದಲ್ಲಿ ಪಕ್ಷವನ್ನು ಬಲಗೊಳಿಸುವ ಲೆಕ್ಕಾಚಾರ ಅಡಗಿರುವಂತೆ ಕಾಣಿಸುತ್ತದೆ.

ಸಿಎಂ ಪುತ್ರನಿಗೆ ತಪ್ಪಿದ ಅವಕಾಶ
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಅವರಿಗೆ ಆದ್ಯತೆ ದೊರೆಯುತ್ತದೆ ಎಂಬ ಬಹುತೇಕರ ಲೆಕ್ಕಾಚಾರ ಸುಳ್ಳಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದ ಮೇಲೂ ಪರಿಣಾಮ ಬೀರಿದ್ದು, ರಾಘವೇಂದ್ರ ಕೇಂದ್ರ ಸಂಪುಟ ಸೇರಿದರೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಖಚಿತ ಎಂಬ ನಿರೀಕ್ಷೆಯಲ್ಲಿದ್ದವರಿಗೆ ಸ್ವಲ್ಪ ಮಟ್ಟಿನ ನಿರಾಸೆಯಾದಂತಾಗಿದೆ.
ವಿಶೇಷವಾಗಿ ಮಧ್ಯ ಕರ್ನಾಟಕ ವನ್ನೂ ಅವಗಣಿಸದ ಪ್ರಧಾನಿ, ಚಿತ್ರದುರ್ಗ ಸಂಸದ ಆನೇಕಲ್‌ ಮೂಲದ ಎ. ನಾರಾಯಣ ಸ್ವಾಮಿಗೆ ಅವಕಾಶ ಕಲ್ಪಿಸುವ ಮೂಲಕ ಬೆಂಗಳೂರು ಸಹಿತ ಹಳೆ ಮೈಸೂರು ಭಾಗದಲ್ಲಿ ದಲಿತ ಎಡಗೈ ಸಮುದಾಯವನ್ನು ಪಕ್ಷದ ಕಡೆಗೆ ಸೆಳೆಯುವ ತಂತ್ರ ಅಡಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶೋಭಾಗೆ ಒಲಿದ ಅದೃಷ್ಟ
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಗೆ ಅದೃಷ್ಟ ಒಲಿದಿದೆ. ಕೇಂದ್ರ ರಸಗೊಬ್ಬರ ಸಚಿವರಾಗಿದ್ದ ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈ ಬಿಟ್ಟು, ಕರಾವಳಿ ಮೂಲದ ಹಾಗೂ (ಸದಾನಂದ ಗೌಡರದೇ ಸಮುದಾಯದ) ಒಕ್ಕಲಿಗ ಸಮುದಾಯಕ್ಕೆ ಸೇರಿದ ಶೋಭಾ ಕರಂದ್ಲಾಜೆ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಪ್ರಾದೇಶಿಕತೆ ಹಾಗೂ ಜಾತಿ ಎರಡನ್ನೂ ಪರಿಗಣಿಸಿ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗಿದೆ. ಈ ಮೂಲಕ ಕರಾವಳಿ, ಮಲೆನಾಡು ಹಾಗೂ ಒಕ್ಕಲಿಗ ಸಮುದಾಯ ಎಲ್ಲವನ್ನೂ ತಮ್ಮತ್ತ ಸೆಳೆಯುವ ಕೆಲಸವನ್ನು ಪ್ರಧಾನಿ ಮಾಡಿದ್ದಾರೆ.

ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರಿಗೆ ರಾಜ್ಯದ ಕೋಟಾದಡಿ ಸಚಿವ ಸ್ಥಾನ ನೀಡಲಾಗಿದೆ. ಮೋದಿಯವರ ಆಪ್ತ ತಂಡದಲ್ಲಿ ರಾಜೀವ್‌ ಚಂದ್ರಶೇಖರ್‌ ಗುರುತಿಸಿಕೊಂಡಿದ್ದು, ಭವಿಷ್ಯದಲ್ಲಿ ಕೇರಳದಲ್ಲಿ ಪಕ್ಷವನ್ನು ಬಲಪಡಿಸುವ ಲೆಕ್ಕಾಚಾರ ಇವರ ಹಿಂದಿದೆ ಎನ್ನಲಾಗುತ್ತಿದೆ.

ಚುನಾವಣೆಗೆ ಅನುಕೂಲ
ಸಮತೋಲಿತ ಪುನಾರಚನೆಯಿಂದ ಮುಂಬರುವ ಜಿಲ್ಲೆ, ತಾಲೂಕು ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಆಯಾ ಭಾಗದಲ್ಲಿ ಸಂಘಟಿಸಲು ಹೆಚ್ಚಿನ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ದಲಿತ ಸಿಎಂ ವಿಷಯವನ್ನು ಕಾಂಗ್ರೆಸ್‌ ಆಗಾಗ ಪ್ರಸ್ತಾವಿಸುತ್ತಿದ್ದು, ಅದಕ್ಕೆ ಉತ್ತರ ಎನ್ನುವಂತೆ ದಲಿತ ಸಮುದಾಯದ ಥಾವರ್‌ಚಂದ್‌ ಗೆಹೊÉàಟ್‌ ಅವರನ್ನು ರಾಜ್ಯದ ರಾಜ್ಯಪಾಲರನ್ನಾಗಿ ಮಾಡಿರುವುದು ಹಾಗೂ ಎ. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡುವ ಮೂಲಕ ಬಿಜೆಪಿ ಬಗ್ಗೆ ಇರುವ ದಲಿತ ವಿರೋಧಿ ಎಂಬ ಹಣೆಪಟ್ಟಿಯಿಂದ ಹೊರ ಬರಲು ಅನುಕೂಲವಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ragini dwivedi

ಕಾಲಿವುಡ್‌ ನ‌ತ್ತ ಹೊರಟ ರಾಗಿಣಿ

ಜೆಡಿಎಸ್ ನ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ

ಜೆಡಿಎಸ್ ನ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ಮೃತ ಬಾಲಕಲಾವಿದೆ ಸಮನ್ವಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ

ಮೃತ ಬಾಲಕಲಾವಿದೆ ಸಮನ್ವಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ

ಸಂಕ್ರಾಂತಿಗೆ ಸಿಹಿ ಅಲ, ವಿಷ ಕೊಟ್ಟ ಸರ್ಕಾರ : ಅತಿಥಿ ಉಪನ್ಯಾಸಕರ ಆಕ್ರೋಶ

ಸಂಕ್ರಾಂತಿಗೆ ಸಿಹಿ ಅಲ, ವಿಷ ಕೊಟ್ಟ ಸರ್ಕಾರ : ಅತಿಥಿ ಉಪನ್ಯಾಸಕರ ಆಕ್ರೋಶ

ಸ್ಮಾರ್ಟ್‌ ಸಿಟಿಯಲ್ಲಿ ಇನ್ನು ಸೈಕಲ್‌ ಸವಾರಿ : ಪ್ರಾಯೋಗಿಕವಾಗಿ 8 ನಿಲ್ದಾಣಗಳು ಸಜ್ಜು

ಸ್ಮಾರ್ಟ್‌ ಸಿಟಿಯಲ್ಲಿ ಇನ್ನು ಸೈಕಲ್‌ ಸವಾರಿ : ಪ್ರಾಯೋಗಿಕವಾಗಿ 8 ನಿಲ್ದಾಣಗಳು ಸಜ್ಜು

MUST WATCH

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

ಹೊಸ ಸೇರ್ಪಡೆ

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಶೇ.33 ಅರಣ್ಯಪ್ರದೇಶ ವಿಸ್ತರಣೆ: ಕತ್ತಿ

ಶೇ.33 ಅರಣ್ಯಪ್ರದೇಶ ವಿಸ್ತರಣೆ: ಕತ್ತಿ

ಬಸವೇಶ್ವರ ಏತ ನೀರಾವರಿಗೆ ಪಾದಯಾತ್ರೆ

ಬಸವೇಶ್ವರ ಏತ ನೀರಾವರಿಗೆ ಪಾದಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.