ಕೃಷಿಕರು, ಬಡವರ ಪರವಾದ ಜನಸ್ನೇಹಿ ಬಜೆಟ್: ಮುಖ್ಯಮಂತ್ರಿ ಪ್ರತಿಕ್ರಿಯೆ

Team Udayavani, Feb 1, 2020, 5:11 PM IST

bsy1

ಬೆಂಗಳೂರು : ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2020-2021ನೇ ಸಾಲಿನ ಆಯವ್ಯಯ ಜನಸ್ನೇಹಿಯಾಗಿದ್ದು, ಕೃಷಿಕರು, ಬಡವರ ಪರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.

“ಮೊದಲನೇ ಬಾರಿಗೆ ದೇಶದ ಇತಿಹಾಸದಲ್ಲಿ ರೈತರಿಗೆ, ಬಡವರಿಗೆ ಮತ್ತು ಹಳ್ಳಿಗಳಿಗೆ ಇಷ್ಟೊಂದು ಆದ್ಯತೆ ನೀಡಿದ ಆಯವ್ಯಯ ಎಂದೂ ಬಂದಿಲ್ಲ. ರೈತರಿಗೆ ಈ ಆಯವ್ಯಯ ವರದಾನವಾಗಲಿದೆ.

2022ರಲ್ಲಿ ರೈತರ ಆದಾಯ ದ್ವಿಗುಣ ಮಾಡುವ ಗುರಿ ಸಾಧನೆಗೆ ಈ ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಪೂರಕವಾಗಿವೆ. 100 ಜಲಕ್ಷಾಮ ಜಿಲ್ಲೆಗಳಲ್ಲಿ ವಿಶೇಷ ಯೋಜನೆ ರೈತರಿಗೆ ಅನುಕೂಲವಾಗಲಿದೆ. ವಿದ್ಯುತ್ ಸ್ವಾವಲಂಬನೆ ನಿಟ್ಟಿನಲ್ಲಿ ಬಂಜರು ಭೂಮಿಯಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ ಉತ್ತೇಜನ, 20 ಲಕ್ಷ ರೈತರಿಗೆ ಸೌರ ಪಂಪ್‍ಸೆಟ್‍ಗಳನ್ನು ಒದಗಿಸಲು ನೆರವು, ಜಮೀನುಗಳಲ್ಲಿ ರೈತರು ರಸಾಯನಿಕ ಗೊಬ್ಬರದ ಬಳಕೆಯನ್ನು ಕಡಿಮೆ ಮಾಡುವುದು ಮೊದಲಾದ ಕಾರ್ಯಕ್ರಮಗಳು ಕೃಷಿ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡಲಿದೆ.

ಕೃಷಿ ಉತ್ಪನ್ನಗಳ ಸಾಗಾಣಿಕೆ ಮತ್ತು ರಫ್ತು ಮಾಡಲು ಕಿಸಾನ್ ರೈಲ್, ಕಿಸಾನ್ ಉಡಾನ್ ಯೋಜನೆ ಸಹಾಯಕವಾಗಲಿದೆ.

2.83 ಲಕ್ಷ ಕೋಟಿ ದೊಡ್ಡ ಬಜೆಟ್. ಕೃಷಿಗೆ ಆದ್ಯತೆಯನ್ನು ಎತ್ತಿ ತೋರಿಸಲಾಗಿದೆ.

ಕ್ಷಯ ರೋಗ ನಿವಾರಣೆ, ಜನ ಔಷಧಿ ಕೇಂದ್ರಗಳ ವಿಸ್ತರಣೆ, ಆರೋಗ್ಯ ಸೇವೆ ಸುಧಾರಣೆಗೆ ಆದ್ಯತೆ, ವೈದ್ಯಕೀಯ ಶಿಕ್ಷಣಕ್ಕೆ ಒತ್ತು ನೀಡಿರುವುದು ಶ್ಲಾಘನೀಯ.

ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹಾಗೂ ವಿದೇಶಿ ಸಾಲ ಪಡೆಯಲು ಅನುಮತಿ ದೊರೆತಿರುವುದು ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಹಳ ಅನುಕೂಲವಾಗಲಿದೆ. ಅಲ್ಲದೆ ಆನ್‍ಲೈನ್ ಶಿಕ್ಷಣ ವ್ಯವಸ್ಥೆಯನ್ನು ಘೋಷಿಸಿರುವುದು ಒಂದು ಮಹತ್ವಪೂರ್ಣ ಬೆಳವಣಿಗೆಯಾಗಿದೆ.
ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶ ಸೃಜನೆಗೆ ಪೂರಕ ಆಯವ್ಯಯ ಇದಾಗಿದ್ದು, ಮಾನವ ಸಂಪನ್ಮೂಲ ಬಳಕೆಗೆ ಉತ್ತೇಜನಕಾರಿಯಾಗಿದೆ.

ಉತ್ಪಾದನಾ ವಲಯ, ರಫ್ತಿಗೆ ಉತ್ತೇಜನ ನೀಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ.

ಮೂಲಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಒದಗಿಸಿರುವುದು ಹೂಡಿಕೆದಾರರಿಗೆ ಉತ್ತಮ ಸಂದೇಶ ನೀಡಿದೆ.

18600 ಕೋಟಿ ರೂ. ಅಂದಾಜು ವೆಚ್ಚದ ಬೆಂಗಳೂರು ಸಬರ್ಬನ್ ರೈಲಿಗೆ ಅನುಮೋದನೆ ನೀಡಿದ್ದು. ಭಾರತ ಸರ್ಕಾರದ ಶೇ. 20 ಪಾಲು, ರಾಜ್ಯ ಸರ್ಕಾರದ ಶೇ.20 ಪಾಲು ಹಾಗೂ ಶೇ. 60 ರ ಬಾಹ್ಯ ನೆರವಿನ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಲಾಗಿದ್ದು, ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಬಹಳ ಅನುಕೂಲವಾಗಿದೆ.

ಆದಾಯ ತೆರಿಗೆ ಹಾಗೂ ಕಾರ್ಪೊರೇಟ್ ತೆರಿಗೆ ಇಳಿಕೆ, ತೆರಿಗೆದಾರರಿಗೆ ಕಿರುಕುಳ ತಡೆಯುವ ನಿಟ್ಟಿನಲ್ಲಿ “tax payers charter” ಕೇಂದ್ರದ ಮಹತ್ವಪೂರ್ಣ ಕ್ರಮಗಳಾಗಿವೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ನೇಮಕಾತಿ ಸಂಸ್ಥೆಯನ್ನು ಪ್ರಾರಂಭಿಸುವ ಮೂಲಕ ನಾನ್ ಗಜೆಟೆಡ್ ಹುದ್ದೆಗಳ ನೇಮಕಾತಿಯನ್ನು ಸರಳಗೊಳಿಸುವ ಕೇಂದ್ರದ ತೀರ್ಮಾನವೂ ಸ್ವಾಗತಾರ್ಹ” ಎಂದು ಅವರು ಬಣ್ಣಿಸಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.