ಸಿಇಟಿ: ಬೆಲ್‌ ಸೂಚನೆ;1.94 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ

ಎ. 29, 30ಕ್ಕೆ ಸಿಇಟಿ ಪರೀಕ್ಷೆ,

Team Udayavani, Apr 27, 2019, 9:44 AM IST

2555

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ವಿದ್ಯಾರ್ಥಿಗಳಿಗೆ “ಬೆಲ್‌’ ಮೂಲಕ ಸೂಚನೆ ನೀಡಲಾಗುತ್ತದೆ.

ಎ.29ರಂದು ಜೀವಶಾಸ್ತ್ರ, ಗಣಿತ ಮತ್ತು ಎ.30ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಸಿಇಟಿ ಬರೆಯಲು 1.94 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು.

ಸಿಇಟಿ ಪರೀಕ್ಷೆಯ ಅವಧಿಯಲ್ಲಿ ಒಟ್ಟು ಏಳು ಬೆಲ್‌ ಹೊಡೆಯ ಲಾಗುತ್ತದೆ. ಮೊದಲ ಬೆಲ್‌ 10.20ಕ್ಕೆ ಆಗಲಿದ್ದು, ಅಭ್ಯರ್ಥಿಗಳು ಗುರುತಿನ ಚೀಟಿ ಮತ್ತು ಪ್ರವೇಶ ಪತ್ರ ತೋರಿಸಿ ಕೊಠಡಿ ಒಳಗೆ ಪ್ರವೇಶಿಸಿ ನಿರ್ದಿಷ್ಟ ಜಾಗದಲ್ಲಿ ಕುಳಿತುಕೊಳ್ಳಬೇಕು. ಆಗ ಮೇಲ್ವಿಚಾರಕರು ತಪಾಸಣೆ ನಡೆಸು ತ್ತಾರೆ. 10.30ಕ್ಕೆ ಎರಡನೇ ಬೆಲ್‌ ಕೇಳಿಸ ಲಿದ್ದು ಆಗ ಪ್ರಶ್ನೆ ಪತ್ರಿಕೆ ಹಂಚಿಕೆ ಆರಂಭವಾಗುತ್ತದೆ. ಮೂರನೇ ಬೆಲ್‌ 10.40ಕ್ಕೆ ಆಗಲಿದ್ದು ವಿದ್ಯಾರ್ಥಿಗಳಿಗೆ ಒಎಂಆರ್‌ ಶೀಟ್‌ನಲ್ಲಿ ಪರೀಕ್ಷೆ ಬರೆ ಯಲು ಅವಕಾಶ ಮಾಡಿಕೊಡಲಾಗುತ್ತದೆ. 11.10ಕ್ಕೆ ನಾಲ್ಕನೇ ಬೆಲ್‌ ಪರೀಕ್ಷೆ ಆರಂಭವಾಗಿ ಅರ್ಧಗಂಟೆಯಾಗಿದೆ ಎಂಬ ಸಂದೇಶ ನೀಡಲಿದೆ. ಐದನೇ ಬೆಲ್‌ 11.30ಕ್ಕೆ ಆಗಲಿದ್ದು, ಪರೀಕ್ಷೆ ಬರೆಯಲು ಇನ್ನು ಇಪ್ಪತ್ತು ನಿಮಿಷ ಮಾತ್ರ ಇದೆ ಎಂಬ ಎಚ್ಚರಿಕೆ ನೀಡಲಿದೆ. 6ನೇ ಬೆಲ್‌ 11.45ಕ್ಕೆ ಆಗಲಿದ್ದು, ಪರೀಕ್ಷಾವಧಿ ಪೂರ್ಣಗಳ್ಳಲು ಐದು ನಿಮಿಷ ಇದೆ ಎಂಬು ದನ್ನು ಸೂಚಿಸುತ್ತದೆ. ಕೊನೆಯ ಬೆಲ್‌ 11.50ಕ್ಕೆ ಆಗಲಿದ್ದು, ಪರೀಕ್ಷೆ ಮುಗಿದಿದ್ದು, ಉತ್ತರ ಪತ್ರಿಕೆಗಳನ್ನು ಕೊಠಡಿ ಮೇಲ್ವಿಚಾರಕ ರಿಗೆ ಒಪ್ಪಿಸಬೇಕಾಗುತ್ತದೆ. ಅಪರಾಹ್ನದ ಅವಧಿಯ ಪರೀಕ್ಷೆಯ ಏಳು ಬೆಲ್‌ಗ‌ಳು ಕ್ರಮವಾಗಿ 2.20, 2.30, 2.40, 3.10,3.30, 3.45 ಮತ್ತು 3.50ಕ್ಕೆ ಆಗಲಿದೆ.

ಪ್ರವೇಶ ಪತ್ರದ ಜತೆಗೆ ಭಾವಚಿತ್ರವುಳ್ಳ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೆಗೆದು ಕೊಂಡು ಹೋಗಬೇಕು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.