ಭೂಕುಸಿತ ಸಾಧ್ಯತೆ : ಚಾರ್ಮಾಡಿ ಘಾಟಿ ವಾಹನ ಸಂಚಾರ ಸಂಜೆ 7ರಿಂದ ಬೆಳೆಗ್ಗೆ 6ರವರೆಗೆ ಬಂದ್
Team Udayavani, Jul 23, 2021, 6:58 PM IST
ಚಿಕ್ಕಮಗಳೂರು : ಭಾರಿ ಮಳೆಯಿಂದ ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಶಿರಡಿ ಘಾಟ್ ರಸ್ತೆಯನ್ನು ಬಂದ್ ಮಾಡಿದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ವಾಹನ ದಟ್ಟಣೆ ಹೆಚ್ಚಾದ ಪರಿಣಾಮ ಕೆಲವೊಂದು ಕಡೆಗಳಲ್ಲಿ ಭೂ ಕುಸಿತ ಸಂಭವಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾತ್ರಿ 7 ರಿಂದ ಬೆಳಿಗ್ಗೆ 6 ರ ವರೆಗೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಮಾಡದಂತೆ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.
ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಪರಿಣಾಮ ಶಿರಾಡಿ ಘಾಟಿ ರಸ್ತೆಯಲ್ಲಿ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರ ಬಂದ್ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ವಾಹನಗಳು ಬದಲಿ ಮಾರ್ಗವಾಗಿ ಚಾರ್ಮಾಡಿ ರಸ್ತೆಯನ್ನು ಅವಲಂಭಿಸಿದ ಪರಿಣಾಮ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ ಅಲ್ಲದೆ ಕೆಲವು ಕಡೆ ಭೂ ಕುಸಿತದಿಂದ ಮರಗಳು ಧರೆಗುರುಳಿದ್ದು ಇದರ ಪರಿಣಾಮ ಶುಕ್ರವಾರ (23-07-2021) ರಿಂದ ಮುಂದಿನ ಆದೇಶದ ವರೆಗೆ ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ :ವರದಕ್ಷಿಣೆಯಾಗಿ ‘ಆಮೆ’ ಬೇಕೆಂದ ವರನ ಲೈಫ್ ಹರೋಹರ