ಮನೆಯ ಹಿತ್ತಲಲ್ಲೇ ಸೋಂಕಿತ ಮಹಿಳೆ ಸಾವು : 3 ಗಂಟೆ ಕಳೆದರೂ ಸ್ಥಳಕ್ಕೆ ಬಾರದ ಅಧಿಕಾರಿಗಳು
Team Udayavani, May 9, 2021, 7:04 PM IST
ಚಿಕ್ಕಮಗಳೂರು : ಮನೆಯ ಹಿತ್ತಲಲ್ಲೇ 45 ವರ್ಷದ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ನಂದಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಮಹಿಳೆ ಸಾವನ್ನಪ್ಪಿ 3 ಗಂಟೆ ಕಳೆದರೂ ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಬಾರದಿರುವುದನ್ನು ಕಂಡು ಸಂಬಂಧಿಕರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂರು ದಿನದ ಹಿಂದೆ ಮಹಿಳೆಯ ಅಣ್ಣ ಸಾವನ್ನಪ್ಪಿದ್ದರು ಎನ್ನಲಾಗಿದೆ.
ಇದನ್ನೂ ಓದಿ :ಕೋವಿಡ್ ನಿರ್ವಹಣೆ : ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ್ ಖರ್ಗೆ 6 ಸಲಹೆ