ಚೀನ ಹಿಡಿತಕ್ಕೆ ಬಂದ ಶ್ರೀಲಂಕಾ : ವಿವಾದಿತ ಮಸೂದೆಗೆ ಒಪ್ಪಿಗೆ
Team Udayavani, May 27, 2021, 6:52 AM IST
ಕೊಲಂಬೋ: ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಶ್ರೀಲಂಕಾ ಸಂಸತ್ ಕೊಲೊಂಬೊ ಬಂದರು ನಗರ ಆರ್ಥಿಕ ಆಯೋಗ ಮಸೂದೆಗೆ ಅನುಮೋದನೆ ನೀಡಿದೆ. ಈ ಮಸೂದೆ ಬಗ್ಗೆ ಅಲ್ಲಿನ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇಂಥ ಕ್ರಮದಿಂದಾಗಿ ದೇಶದ ಮೇಲೆ ಚೀನ ಸರಕಾರದ ಹಿಡಿತ ಮತ್ತಷ್ಟು ಬಿಗಿಗೊಳ್ಳಲಿದೆ ಎಂದು ಆರೋಪಿಸಿವೆ. 225 ಸದಸ್ಯ ಬಲದ ಸಂಸತ್‌ನಲ್ಲಿ ಮಸೂದೆಯ ಪರ 148 ಮತ್ತು ವಿರೋಧವಾಗಿ 59 ಮತಗಳು ಬಿದ್ದಿವೆ.
ಮಸೂದೆಯನ್ನು ಸಮರ್ಥಿಸಿಕೊಂಡ ಸರಕಾರ ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯವೇ ವಿಧೇಯಕಕ್ಕೆ ತಿದ್ದುಪಡಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಿಕೊಂಡಿತು. ಮಸೂದೆಯ ಕೆಲವು ಅಂಶಗಳಲ್ಲಿ ಬದಲು ಮಾಡಬೇಕು ಎಂದು ದ್ವೀಪ ರಾಷ್ಟ್ರದ ಸುಪ್ರೀಂಕೋರ್ಟ್ ಸೂಚಿಸಿತ್ತು. 1.4 ಬಿಲಿಯನ್ ಡಾಲರ್ ಮೊತ್ತದ ಕೊಲಂಬೋ ಮಸೂದೆ ಚೀನದ “ಮಾರಿಟೈಮ್ ಸಿಲ್ಕ್ ರೂಟ್’ನ ಯೋಜನೆ ವ್ಯಾಪ್ತಿಯಲ್ಲಿದೆ. ಅಲ್ಲಿ ಚೀನ ಸರಕಾರ ಬೃಹತ್ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ. ದಕ್ಷಿಣ ಚೀನ ಸಮುದ್ರ ವ್ಯಾಪ್ತಿಯಲ್ಲಿ ಈಗಾಗಲೇ ಹಿಡಿತ ಸಾಧಿಸುತ್ತಿರುವ ಡ್ರ್ಯಾಗನ್, ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿಯೂ ಮುಂದಿನ ದಿನಗಳಲ್ಲಿ ಶ್ರೀಲಂಕೆಯ ಮೂಲಕ ಪರೋಕ್ಷವಾಗಿ ತನ್ನ ನಿಲುವುಗಳನ್ನು ಸಾಧಿಸುವ ಸಾಧ್ಯತೆ ಹೆಚ್ಚಾಗಿದೆ. ದ್ವೀಪರಾಷ್ಟ್ರದ ಹಂಬಂತೋಟ ಬಂದರನ್ನು ಚೀನ ಕಂಪೆನಿಯೊಂದಕ್ಕೆ 99 ವರ್ಷಗಳ ಕಾಲ ಭೋಗ್ಯಕ್ಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ