ಧ್ವನಿ ವರ್ಧಕ ಬಳಕೆ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವೇ ಎಂದು ನ್ಯಾಯಾಂಗ ನಿರ್ಧರಿಸಬೇಕಿದೆ

ನ್ಯಾಯಾಂಗ ಅಧಿಕಾರಿಗಳ ಸಮಾವೇಶದಲ್ಲಿ ಸಿಜೆಐ ಅಭಿಪ್ರಾಯ

Team Udayavani, Jan 11, 2020, 8:22 PM IST

110120kpn63

ಬೆಂಗಳೂರು: ಇಂಟರ್‌ನೆಟ್‌, ಧ್ವನಿವರ್ಧಕಗಳ ಬಳಕೆಯಂತಹ ಹೊಸ ವ್ಯಾಖ್ಯೆಗಳನ್ನು ಸಂವಿಧಾನ ಕೊಡಮಾಡಿರುವ “ಅಭಿವ್ಯಕ್ತಿ ಸ್ವಾತಂತ್ರ್ಯ’ದ ಭಾಗವಾಗಿ ಪರಿಗಣಿಸಬಹುದೆ ಎಂಬುದನ್ನು ನಿರ್ಧರಿಸಬೇಕಾದ ಹೊಸ ಸವಾಲುಗಳು ನ್ಯಾಯಾಂಗದ ಮುಂದಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಬೋಬ್ಡೆ  ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘವು ಜಿಕೆವಿಕೆಯ ಡಾ. ಬಾಬುರಾಜೇಂದ್ರ ಪ್ರಸಾದ್‌ ಅಂತರರಾಷ್ಟ್ರೀಯ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ರಾಜ್ಯ ಮಟ್ಟದ 19ನೇ ದೈವಾರ್ಷಿಕ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

“ಕಾಶ್ಮೀರದಲ್ಲಿ ಇಂಟರ್‌ನೆಟ್‌ ಸಂಪರ್ಕಕ್ಕೆ ನಿರ್ಬಂಧ ಹೇರಿದ್ದರ ವಿಚಾರವಾಗಿ ನಾವು (ಸುಪ್ರೀಂಕೋರ್ಟ್‌) ಇಂಟರ್‌ನೆಟ್‌ ಬಳಕೆ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗ ಎಂದು ಹೇಳಿದ್ದೇವೆ. ಇಂತಹ ಅನೇಕ ಪ್ರಶ್ನೆಗಳು ಉದ^ಭವಿಸುತ್ತವೆ. ಉದಾಹರಣೆಗೆ ಧ್ವನಿ ವರ್ಧಕಗಳನ್ನು ಬಳಸಿ ಮದುವೆ ಮಂಟಪಗಳಲ್ಲಿ ಜೋರು ಧ್ವನಿಯಲ್ಲಿ ಮ್ಯೂಸಿಕ್‌ ಕೇಳುವುದು, ಮಂದಿರ, ಮಸೀದಿಗಳಲ್ಲಿ ಧ್ವನಿ ವರ್ಧಕಗಳನ್ನು ಬಳಸಲಾಗುತ್ತದೆ. ಹಾಗಾಗಿ, ಧ್ವನಿ ವರ್ಧಕಗಳ ಬಳಕೆಯನ್ನು ಸಂವಿಧಾನ ಖಾತರಿಪಡಿಸಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿ ಪರಿಗಣಿಸಬಹುದೇ ಎಂಬ ಬಗ್ಗೆ ನಿರ್ಧರಿಸಬೇಕಾಗಿದೆ. ಇದು ಸಾಂವಿಧಾನಿಕ ಕಾನೂನಿನ ಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನವನ್ನು ಒಳಗೊಂಡಿದೆ ಎಂದರು.

ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಇಲ್ಲದ ವಿಶೇಷತೆ ನ್ಯಾಯಾಂಗ ಮತ್ತು ನ್ಯಾಯಾಧೀಶರಿಗಿದೆ. ಶಾಸಕಾಂಗ ಕಾನೂನು ರಚಿಸಿದೆರೆ, ಕಾರ್ಯಾಂಗ ನಿಯಮಗಳನ್ನು ರೂಪಿಸುತ್ತದೆ. ಆದರೆ, ನ್ಯಾಯಾಧೀಶರು ಸಂದರ್ಭ-ಸನ್ನಿವೇಶಗಳಿಗೆ ಅನುಗುಣವಾಗಿ ಕಾನೂನಿನಡಿ ತೀರ್ಪು ನೀಡಿ ನ್ಯಾಯ ಒದಗಿಸುತ್ತಾರೆ. ಅಕ್ಷರ ರೂಪದಲ್ಲಿರುವ ಸಂವಿಧಾನದ ತತ್ವಗಳನ್ನು ವಾಸ್ತವ ರೂಪಕ್ಕೆ ತರುವ ಜವಾಬ್ದಾರಿಯನ್ನು ನ್ಯಾಯಾಧೀಶರು ನಿರ್ವಹಿಸುತ್ತಾರೆ. ತಮ್ಮ ಈ ವೈಶಿಷ್ಟéತೆಯನ್ನು ನ್ಯಾಯಾಧೀಶರ ಮನಗಾಣಬೇಕು. ಸಮರ್ಪಕ ಜ್ಞಾನ, ಕೌಶಲ್ಯ ಹಾಗೂ ಅನುಭವದ ಕೊರತೆಯೂ ನ್ಯಾಯದಾನದ ವಿಳಂಬಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು ಎಂದು ನ್ಯಾ. ಬೋಬ್ಡೆ ಕಿವಿಮಾತು ಹೇಳಿದರು.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಮಾತನಾಡಿ, ರಾಜ್ಯದ ನ್ಯಾಯಾಂಗ ಅಧಿಕಾರಿಗಳು ಉದಾತ್ತ ಸೇವೆ ಸಲ್ಲಿಸಿದ್ದಾರೆ. ಸಾಧಿಸಬೇಕಾದ್ದದ್ದು ಇನ್ನೂ ಇದೆ. ಅನುದಾನದ ಮೂಲಕ ಸಾರ್ವಜನಿಕರ ತೆರಿಗೆ ಹಣ ಪಡೆಯುತ್ತಿರುವ ನಾವುಗಳು (ಜಡ್ಜ್) ಜನರ ಮುಂದೆ ಉತ್ತರದಾಯಿಗಳು ಎಂದನ್ನು ಮರೆಯಬಾರದು. ಇನ್ನೂ ಮುಂದೆ ಅಧೀನ ನ್ಯಾಯಾಲಯ, ಕೆಳಹಂತದ ನ್ಯಾಯಾಲಯಗಳ ಬದಲು ವಿಚಾರಣಾ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯ ಎಂದು ಸಂಬೋಧಿಸುವಂತೆ ಸೂಚನೆ ಜಾರಿಗೊಳಿಸಲಾಗಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ನ್ಯಾಯಾಂಗದ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಲಾಗುವುದು. ನ್ಯಾಯಾಂಗ ಅಧಿಕಾರಿಗಳ ವಿವಿಧ ಬೇಡಿಕೆಗಳ ಬಗ್ಗೆ ಪರಿಶೀಲಿಸಲಾಗುವುದು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ನೆರವು ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು ನೀಡಿದ ನೆರವನ್ನು ಸರ್ಕಾರ ಮರೆಯುವಂತಿಲ್ಲ ಎಂದರು.

“ಭೂದೇವಿಯ ಮುಕುಟದ ನವಮಣಿ’: ಸಿಜೆಐ
ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯ “ಭೂದೇವಿಯ ಮುಕುಟದ ನವಮಣಿಯೆ’ ಸಾಲನ್ನು ಕನ್ನಡದಲ್ಲಿ ಓದಿದ ಸಿಜೆಐ ನ್ಯಾ. ಬೋಬ್ಡೆ , “ಬೆಂಗಳೂರನ್ನು ನಾನು “ಸಿಲಿಕಾನ್‌ ವ್ಯಾಲಿ ಆಫ್ ಇಂಡಿಯಾ’ ಎಂದಷ್ಟೇ ಕರೆಯಲು ಬಯಸುವುದಿಲ್ಲ. ಏಕೆಂದರೆ, ಈ ನಾಡು ಬಹಳ ಪುರಾತನ ನಾಗರಿಕತೆಯನ್ನು ಹೊಂದಿದ್ದು, ಇದು ಭಾರತೀಯ ಸಂಸ್ಕೃತಿಯ ಪ್ರಧಾನ ಕೇಂದ್ರವಾಗಿದೆ. ಕರ್ನಾಟಕ ಅನೇಕ ಖ್ಯಾತನಾಮ ಹಾಗೂ ಪ್ರತಿಭಾವಂತ ನ್ಯಾಯಾಧೀಶರನ್ನು ದೇಶಕ್ಕೆ ನೀಡಿದೆ. ಕಾನೂನು ಪಂಡಿತರನ್ನು ಕೊಟ್ಟಿದೆ. ಸಿವಿಲ್‌ ನ್ಯಾಯದ ಹಲವು ಮಹತ್ವದ ತೀರ್ಪುಗಳು ಕರ್ನಾಕಟದಿಂದ ಬಂದಿರುವುದು ಹೆಮ್ಮೆಯ ಸಂಗತಿ ಎಂದರು. ಸಾಂಪ್ರದಾಯಿಕ ಮೈಸೂರು ಪೇಟ ಧರಿಸಿಯೇ ಅವರು ಭಾಷಣ ಮಾಡಿದ್ದು ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಮೋಹನ ಶಾಂತನಗೌಡರ್‌, ಅಬ್ದುಲ್‌ ನಜೀರ್‌, ಎ.ಎಸ್‌. ಬೋಪಣ್ಣ ಮಾತನಾಡಿದರು. ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಪ್ರಧಾನ ಕಾರ್ಯದರ್ಶಿ ಎ. ಸೋಮಶೇಖರ್‌ ಮತ್ತಿತರರು ವೇದಿಕೆಯಲ್ಲಿದ್ದರು.

“ವ್ಯಾಜ್ಯಗಳನ್ನು ಮಧ್ಯಸ್ಥಿಕೆ, ರಾಜಿ-ಸಂಧಾನಗಳ ಮೂಲಕ ಇತ್ಯರ್ಥಪಡಿಸುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಕೆಲವೊಮ್ಮೆ ಬಳಸಿಕೊಂಡರೂ, ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಆಯೋಧ್ಯೆ ವಿವಾದದಲ್ಲಿ ಅದರ ಅನುಭವ ಕಂಡಿದ್ದೇವೆ. ಮಧ್ಯಸ್ಥಿಕೆ ಮೂಲಕ ವಿವಾದ ಬಗೆಹರಿಯಬುದು ಎಂದು ಭಾವಿಸಲಾಗಿತ್ತು. ಆದರೆ, ಅದು ಆಗಲಿಲ್ಲ. ಮಧ್ಯಸ್ಥಿಕೆ, ರಾಜಿ-ಸಂಧಾನ ಕಾಲದ ಬೇಡಿಕೆಯಾಗಿದೆ’
-ನ್ಯಾ. ಎ.ಎಸ್‌. ಬೋಬ್ಡೆ , ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.