ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಗಲಾಟೆ: ವಾಗ್ವಾದ, ಕೈ-ಕೈ ಮಿಲಾಯಿಸಿದ ಕಾರ್ಯಕರ್ತರು

Team Udayavani, May 10, 2023, 7:00 AM IST

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಗಲಾಟೆ: ವಾಗ್ವಾದ, ಕೈ-ಕೈ ಮಿಲಾಯಿಸಿದ ಕಾರ್ಯಕರ್ತರು

ಬೆಂಗಳೂರು: ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಗರದ ಮೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ, ಗಲಾಟೆ ನಡೆದಿದೆ.

ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಕ್ಷೇತ್ರದ ಗಂಗೋತ್ರಿ ಸರ್ಕಲ್‌ ಬಳಿ ಬಿಜೆಪಿ ಕಾರ್ಯಕರ್ತ ಹರಿನಾಥ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬಿಜೆಪಿ ಮಡಿವಾಳ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದೆ. ಆದರೆ, ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಇದುವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ, ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡು ಬಿಜೆಪಿ ಮುಖಂಡ, ರಾಜ್ಯದ ಚುನಾವಣ ಸಹ ಉಸ್ತುವಾರಿ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ಎರಡು ಕಡೆಯವರನ್ನು ಮನವೊಲಿಸಿ ವಾಪಸ್‌ ಕಳುಹಿಸಿದರು.

ಇನ್ನು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಕೆಜಿಎಫ್ ಬಾಬು ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಆರ್‌.ವಿ. ದೇವರಾಜ್‌ ಪುತ್ರ ಯುವರಾಜ್‌ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಜೆ.ಸಿ. ರಸ್ತೆಯಲ್ಲಿ ಮುಖಾಮುಖೀಯಾದ ಕೆಜಿಎಫ್ ಬಾಬು ಮತ್ತು ಯುವರಾಜ್‌ ಬೆಂಬಲಿಗರು ಪರಸ್ಪರ ವಾಗ್ವಾದ ನಡೆಸಿದರು. ಒಂದು ಹಂತಕ್ಕೆ ಇಬ್ಬರ ಬೆಂಬಲಿಗರು ಹೊಡೆದಾಟಕ್ಕೂ ಮುಂದಾದರು. ಸ್ಥಳದಲ್ಲಿದ್ದ ಪೊಲೀಸರು ಎರಡು ಕಡೆಯವರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಮತ್ತೂಂದೆಡೆ ಆರ್‌.ಆರ್‌. ನಗರ ಕ್ಷೇತ್ರದಲ್ಲಿ ಮಾಜಿ ಕಾರ್ಪೊರೆಟರ್‌ ಮಂಜುಳಾ ಮೇಲೆ ರಾಷ್ಟ್ರೀಯ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ನಂದಿನಿ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.