ಚಂದ್ರಶೇಖರ್ ಗುರೂಜಿ ಹತ್ಯೆ : ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಕ್ರಮ : ಬೊಮ್ಮಾಯಿ
Team Udayavani, Jul 5, 2022, 7:21 PM IST
ಬೆಂಗಳೂರು : ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಹೀನ ಕೃತ್ಯವಾಗಿದ್ದು, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯನ್ನು ನೀಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾನತಾಡಿದರು.
ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಹೀನ ಕೃತ್ಯ ಹಾಗೂ ದುರದೃಷ್ಟಕರವಾಗಿದೆ. ಸಿಸಿಟಿವಿ ವಿಡಿಯೋದಲ್ಲಿ ಎಲ್ಲ ಸ್ಪಷ್ಟವಾಗಿದೆ. ನಗರ ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಸಿಸಿಟಿವಿ ವಿಡಿಯೋದಲ್ಲಿರುವ ಕೊಲೆಪಾತಕರನ್ನು ಬಂಧಿಸಲು ತಿಳಿಸಲಾಗಿದ್ದು, ಪ್ರಕ್ರಿಯೆ ನಡೆದಿದೆ. ಕೊಲೆ ನಡೆದಿರುವ ಕಾರಣ ತನಿಖೆಯಿಂದ ತಿಳಿದು ಬರಲಿದೆ.
ಬಹಿರಂಗವಾಗಿ ಇಂತಹ ಘಟನೆಗಳು ಅತ್ಯಂತ ಖಂಡನೀಯ ಎಂದರು.
ಇದನ್ನೂ ಓದಿ : ಬೊಮ್ಮಾಯಿ ಸಿಎಂ ಆಗಿರುವುದರಿಂದ ಪಿಎಸ್‌ಐ ಪ್ರಕರಣ ಬಯಲಿಗೆ ಬಂದಿದೆ: ಅಶೋಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಸರಿಗಷ್ಟೇ ಸಂಸ್ಕೃತಿ ಇಲಾಖೆ: ಕಲಾವಿದರ ಗೋಳಿಗೆ ಸ್ಪಂದನೆಯೇ ಇಲ್ಲ!
ಕಾಂಗ್ರೆಸ್ ಈಗ ಡಬಲ್ ಡೋರ್ ಬಸ್: ಸಚಿವ ಸುಧಾಕರ್ ವ್ಯಂಗ್ಯ
ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್
ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಇನ್ನೂ ಎರಡು ಪೀಠ
ಬೇದೂರು ಗ್ರಾಮದಲ್ಲಿ ಗುಡ್ಡ ಕುಸಿತ ; ಆತಂಕ ವ್ಯಕ್ತಪಡಿಸಿದ ವೃಕ್ಷ ಲಕ್ಷ ಆಂದೋಲನ