ಗಡಿ ವಿವಾದ; ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬಸವರಾಜ ಬೊಮ್ಮಾಯಿ

Team Udayavani, Nov 29, 2022, 11:55 AM IST

ಗಡಿ ವಿವಾದ; ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬಸವರಾಜ ಬೊಮ್ಮಾಯಿ

ನವದೆಹಲಿ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿರುವುದಾಗಿ ಹೇಳಿದರು.

ಮಹಾರಾಷ್ಟ್ರ ಸರ್ಕಾರ ಹಾಕಿರುವ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ ನಡೆಯಲಿದೆ. ಹಿಂದಿನ ಸಿಜೆಐ ದೀಪಕ್ ಮಿಶ್ರಾ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:ಬಿಜೆಪಿಯಲ್ಲಿ ವೈಲೆಂಟ್ ಸೃಷ್ಟಿಸಿದ ಸೈಲೆಂಟ್ ಸುನೀಲ್

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಹಾರಾಷ್ಟ್ರದ ನಾಯಕರುಗಳು, ನಾವು ಗಂಭೀರವಾಗಿ ಇದೀವಿ ಅಂತ ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಎಂದರು.

ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ ಎಂದರು.

ಜತ್ ತಾಲೂಕಿನ 42 ಗ್ರಾಮಸ್ಥರು ಸಿಎಂ ಭೇಟಿಗೆ ಅವಕಾಶ ಕೇಳಿರುವ ಬಗ್ಗೆ ಉತ್ತರಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ‌ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.

ರಾಜಕೀಯ ಹೇಳಿಕೆ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಕುಡಿಯುವ ‌ನೀರು ನೀಡುವ ನಿರ್ಣಯ ಮಾಡಿದ್ದರು. ಅವರು ಯಾಕೆ ಸೇರಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು. ಜವಬ್ದಾರಿಯುತ ಸ್ಥಾನದಲ್ಲಿದ್ದು ಎಲ್ಲವನ್ನೂ ಕಾನೂನು ಮತ್ತು ಸಂವಿಧಾನದ ಅಡಿಯಲ್ಲಿ ಕ್ರಮ‌ ಕೈಗೊಳ್ಳಲಾಗುವುದು ಎಂದರು.

ರಾಜ್ಯಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ,  ಮಹಾರಾಷ್ಟ್ರ ಗೃಹ ಇಲಾಖೆಗೆ ಜೊತೆಗೆ ಈಗಾಗಲೇ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.