ಸಂಪುಟ ವಿಸ್ತರಣೆಗೆ ಕಾಂಗ್ರೆಸ್‌ ಒಲವು


Team Udayavani, May 31, 2019, 3:01 AM IST

congress-logo

ಬೆಂಗಳೂರು: ಹಾಲಿ ಸಚಿವರ ವಿರೋಧದ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಂಪುಟ ಪುನಾರಚನೆ ಮಾಡುವುದರ ಬದಲಿಗೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಿ ಮೈತ್ರಿ ಸರ್ಕಾರ ಉಳಿಸಿ ಕೊಳ್ಳಲು ಕಾಂಗ್ರೆಸ್‌ ನಾಯಕರು ಸರ್ಕಸ್‌ ನಡೆಸಿದ್ದು, ಅಗತ್ಯ ಬಿದ್ದರೆ, ಸ್ಥಾನ ತ್ಯಾಗಕ್ಕೆ ಸಿದ್ದರಾಗುವಂತೆ ಹಾಲಿ ಸಚಿವರಿಗೆ ಸೂಚನೆ ನೀಡಿದ್ದಾರೆ.

ಸಂಪುಟ ಪುನಾರಚನೆಯಿಂದ ಪಕ್ಷದೊಳಗೆ ಮತ್ತಷ್ಟು ಬಂಡಾಯ ಸಾಧ್ಯತೆ ಇರುವುದರಿಂದ ಸೆಪ್ಟಂಬರ್‌ ತಿಂಗಳವರೆಗೆ ಆ ಯತ್ನ ಮಾಡುವುದಕ್ಕೆ ಪಕ್ಷ ಹಿಂದೇಟು ಹಾಕಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಹೀನಾಯ ಸೋಲಿನಿಂದ ಹಾಗೂ ಬಿಜೆಪಿ ಮತ್ತೆ ಆಪರೇಷನ್‌ ಕಮಲ ಆರಂಭಿಸುವ ಸಾಧ್ಯತೆ ಹೆಚ್ಚಿರುವುದರಿಂದ ದೋಸ್ತಿ ಪಕ್ಷಗಳು ಆತಂಕಗೊಂಡಿವೆ.

ಹಾಗಾಗಿ ಅತೃಪ್ತ ಶಾಸಕರನ್ನು ಉಳಿಸಿ ಕೊಳ್ಳಲು ಅವರಿಗೆ ಸಚಿವ ಸ್ಥಾನ ನೀಡಿ, ಸರ್ಕಾರವನ್ನು ಗಟ್ಟಿಗೊಳಿಸಲು ಮೈತ್ರಿ ಪಕ್ಷಗಳ ನಾಯಕರು ಕಸರತ್ತು ನಡೆಸಿದ್ದಾರೆ. ಇದರ ಜತೆಗೆ ಸಚಿವ ಸ್ಥಾನ ತ್ಯಾಗಕ್ಕೆ ಪಕ್ಷ ಸೂಚಿಸಿರುವುದು ಕೆಲವು ಕಾಂಗ್ರೆಸ್‌ ಸಚಿವರು ಆತಂಕಗೊಳ್ಳುವಂತೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಒಂದು ವರ್ಷ ಕಳೆಯುವಷ್ಟರಲ್ಲೇ ಅಧಿಕಾರ ಕಿತ್ತುಕೊಳ್ಳುವುದಕ್ಕೆ ಕೆಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಕ್ಷಣ ಸಂಪುಟ ಪುನಾರಚನೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈಗ ಪುನಾರಚನೆಗೆ ಕೈ ಹಾಕಿದರೆ, ಸಚಿವ ಸ್ಥಾನ ಕಳೆದುಕೊಂಡವರು ಹಾಗೂ ಸಿಗದವರು ಮತ್ತಷ್ಟು ಬಂಡಾಯ ಏಳಲು ಕಾರಣವಾಗಬಹುದು.ಅದರ ಬದಲು ಅತೃಪ್ತರನ್ನು ಸಮಾಧಾನ ಪಡಿಸಲು ಪರ್ಯಾಯ ಮಾರ್ಗ ಅನುಸರಿಸುವುದು ಸೂಕ್ತ ಎಂಬ ಅಭಿಪ್ರಾಯ ಹೊಂದಿದ್ದಾರೆ ಎನ್ನಲಾಗಿದೆ.

ಸದ್ಯ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಿ, ಒಂದು ವೇಳೆ, ಬಂಡಾಯ ಹೆಚ್ಚಾದರೆ ಸಂಪುಟ ಪುನಾರಚನೆಗೆ ಸಿದ್ಧತೆಗಳನ್ನು ಮಾಡಿಕೊಳ್ಳ ಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದೇ ಕಾರಣಕ್ಕೆ ಸಚಿವರಿಗೆ ತಕ್ಷಣಕ್ಕೆ ಯಾರಿಗೂ ರಾಜೀನಾಮೆಯ ಬಗ್ಗೆ ಸೂಚನೆ ನೀಡದೇ, ಪಕ್ಷದ ತೀರ್ಮಾನಕ್ಕೆ ಬದ್ದರಾಗಿರುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹಿರಿಯರಿಗೆ ಗೇಟ್‌ಪಾಸ್‌?: ಒಂದು ಮೂಲದ ಪ್ರಕಾರ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಐದು ವರ್ಷ ಪೂರ್ಣ ಪ್ರಮಾಣದಲ್ಲಿ ಸಚಿವರಾಗಿದ್ದು, ಮೈತ್ರಿ ಸರ್ಕಾರದಲ್ಲಿಯೂ ಸಚಿವರಾಗಿರುವವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆ ರಾಜ್ಯ ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಹಿಂದಿನ ಸರ್ಕಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಸಚಿವರಾಗಿದ್ದ ಆರ್‌.ವಿ. ದೇಶಪಾಂಡೆ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್‌, ಕೆ.ಜೆ. ಜಾರ್ಜ್‌ ಅವರನ್ನು ಸಂಪುಟದಿಂದ ಕೈ ಬಿಡುವ ಆಲೋಚನೆ ಹೊಂದಿದ್ದಾರೆ ಎನ್ನಲಾಗಿದೆ.

ಆದರೆ, ಗುರುವಾರ ನಡೆದ ಸಭೆಯಲ್ಲಿ ನಾಯಕರು ಎಲ್ಲ ಸಚಿವರಿಂದ ವಯಕ್ತಿಕ ಅಭಿಪ್ರಾಯ ಪಡೆದುಕೊಂಡಿದ್ದು, ಒಂದು ವರ್ಷದಲ್ಲಿ ಇಲಾಖೆಯಲ್ಲಿ ತಾವು ಮಾಡಿರುವ ಸಾಧನೆ ಹಾಗೂ ಮುಂದೆ ಮಾಡಬೇಕಾದ ಕೆಲಸಗಳ ಬಗ್ಗೆ ನಾಯಕರಿಗೆ ವಿವರಣೆ ನೀಡಿ, ಪರೋಕ್ಷವಾಗಿ ಸಂಪುಟದಲ್ಲಿ ತಾವು ಮುಂದುವರೆಯುವ ಇಚ್ಛೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್‌ ಸಚಿವರ ಇಲಾಖೆಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಬೆಂಬಲ ದೊರೆಯದಿರುವ ಬಗ್ಗೆಯೂ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸಚಿವರ ಅಭಿಪ್ರಾಯಗಳನ್ನು ಆಲಿಸಿರುವ ನಾಯಕರು, ಮುಂದಿನ ದಿನಗಳಲ್ಲಿ ನಿಮಗೆ ವಹಿಸಿರುವ ಇಲಾಖೆಗಳಲ್ಲಿ ಉತ್ತಮ ಕೆಲಸ ಮಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ಯಾವುದೇ ರೀತಿಯ ತೊಂದರೆಯಾಗದಂತೆ ಪಕ್ಷ ನೋಡಿಕೊಳ್ಳುತ್ತದೆ.

ಮೈತ್ರಿ ಸರ್ಕಾರಕ್ಕೆ ಮುಜುಗರವಾಗುವಂತೆ ನಡೆದುಕೊಳ್ಳದೇ ಮೈತ್ರಿ ಧರ್ಮ ಪಾಲಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣವೇ ಸಂಪುಟ ಪುನಾರಚನೆಗೆ ಸಚಿವರು ವಿರೋಧ ವ್ಯಕ್ತಪಡಿಸಿದ್ದರೂ, ಹೈಕಮಾಂಡ್‌ ನಿರ್ಧಾರಕ್ಕೆ ಬದ್ದರಾಗಿರುವಂತೆ ಪಕ್ಷದ ನಾಯಕರು ಸೂಚನೆ ನೀಡಿದ್ದಾರೆ.

ಪ್ರಮುಖ ನಾಯಕರ ಸಭೆ: ಸಚಿವರೊಂದಿಗಿನ ಸಭೆಯ ಬಳಿಕ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಎಂ.ಬಿ.ಪಾಟೀಲ್‌, ಪರಮೇಶ್ವರ್‌ ಅವರ ನಿವಾಸದಲ್ಲಿಯೇ ಪ್ರತ್ಯೇಕ ಸಭೆ ನಡೆಸಿದರು.

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ ತೆಗೆದು ಕೊಂಡಿಲ್ಲ. ಸದ್ಯ ಸರ್ಕಾರದ ಕೆಲಸಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಚಿವರಿಗೆ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದೇವೆ.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಸಚಿವ ಸ್ಥಾನ ಸಿಕ್ಕ ಬಳಿಕ ನಾನು ತುಂಬ ಖುಷಿಯಾಗಿದ್ದೇನೆ. ಒಂದು ಬಾರಿ ಸಚಿವನಾಗಬೇಕು ಎಂಬ ಬಯಕೆ ಇತ್ತು. ಮೂರು ತಿಂಗಳ್ಳೋ, ಮೂರು ದಿನವೋ ಸಚಿವ ಆಗಿದ್ದೇನೆ. ಸಚಿವ ಸ್ಥಾನ ಬಿಟ್ಟುಕೊಡುವಂತೆ ಹೈಕಮಾಂಡ್‌ ಕೇಳಿದರೆ ಬಿಟ್ಟು ಕೊಡುತ್ತೇನೆ.
-ಎಂ.ಟಿ.ಬಿ. ನಾಗರಾಜ್‌, ವಸತಿ ಸಚಿವ

ಸಂಪುಟ ಪುನಾರಚನೆಯ ವಿಷಯ ಹೈ ಕಮಾಂಡ್‌ಗೆ ಬಿಟ್ಟಿದ್ದು, ಹಿರಿಯ ಸಚಿವರನ್ನು ಕೈ ಬಿಡುವ ಬಗ್ಗೆ ಯಾವುದೇ ಚರ್ಚೆ ಯಾಗಿಲ್ಲ. ಹೈ ಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದನಾಗಿರುತ್ತೇನೆ.
-ಕೆ.ಜೆ. ಜಾರ್ಜ್‌, ಕೈಗಾರಿಕಾ ಸಚಿವ

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.