ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ: ಸಿಎಂ ಬೊಮ್ಮಾಯಿ

Team Udayavani, Oct 15, 2022, 2:43 PM IST

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಭಾರತ ದೇಶ ಒಗ್ಗಟ್ಟಿನಿಂದ ಬಲಿಷ್ಟವಾಗಿ ಬೆಳೆಯುತ್ತಿರುವಾಗ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತ ಜೋಡೋ ಯಾತ್ರೆಯ ಅರ್ಥ ಏನು? ಭಾರತ ಈಗಾಗಲೇ ಒಕ್ಕೂಟವಾಗಿ, ಒಗ್ಗಟ್ಟಾಗಿ ಮುನ್ನಡೆಯುತ್ತಿದೆ. ಇದನ್ನು ಮತ್ತೆ ಜೋಡಿಸುವ ಪ್ರಮೇಯ ಇಲ್ಲ. ಇಡೀ ದೇಶ ಒಗ್ಗಟ್ಟಾಗಿ ಭಾರತ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆಯನ್ನು ಸಾಧಿಸುತ್ತಿದೆ. ಪ್ರಸ್ತುತ ಇಡೀ ಜಗತ್ತಿನಲ್ಲಿ ಆರ್ಥಿಕ ಹಿಂಜರಿತ ಉಂಟಾಗುತ್ತಿದೆ. ಅಮೆರಿಕಾ ಸೇರಿದಂತೆ ಜಿ7 ದೇಶಗಳು ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿರುವ ಸಂದರ್ಭದಲ್ಲಿ ಭಾರತ ದೇಶ ಕನಿಷ್ಟ ಶೇ.7 ಅಭಿವೃದ್ಧಿಯನ್ನು ಕಾಯ್ದುಕೊಂಡು ಬಂದಿದೆ. ರಾಹುಲ್ ಗಾಂಧಿಯವರು ಮೊದಲ ಮಿಸೈಲ್ ವಿಫಲಗೊಂಡಿದ್ದು, ಈಗ ಮತ್ತೊಮ್ಮೆ ಲಾಂಚ್ ಮಾಡುವ ಪ್ರಯತ್ನದಲ್ಲಿದ್ದಾರೆ. ಅದು ಬಿಟ್ಟರೆ ಇವರ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಸಮಾವೇಶಕ್ಕೆ ಯಾವ ಪ್ರಶ್ನೆ ಕೇಳಲು ಬಯಸುತ್ತೀರಿ ಎಂಬುದಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರು ಬಳ್ಳಾರಿಯಲ್ಲಿ ಲೋಕಸಭಾ ಚುನಾವಣೆಗೆ ನಿಂತು, ಈ ಕ್ಷೇತ್ರವನ್ನೇ ಆಯ್ಕೆ ಮಾಡುವುದಾಗಿ ನಿರ್ಣಯಿಸಿ, ನಂತರ ರಾಯಬರೇಲಿ ಎಂದು ಆಯ್ಕೆ ಮಾಡಿಕೊಂಡರು. ಆ ಸಂದರ್ಭದಲ್ಲಿ ಮತ ಹಾಕಿದ ಜನರಿಗೆ ಕೃತಜ್ಞತೆಯನ್ನೂ ಸಲ್ಲಿಸಲಿಲ್ಲ. ಅಂದು ಮೂರು ಸಾವಿರ ಕೋಟಿ ಬಜೆಟ್ ನಿಗದಿಪಡಿಸಿ ಒಂದು ಪೈಸೆಯನ್ನೂ ಬಿಡುಗಡೆ ಮಾಡಲಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದೀರಿ. ಅಲ್ಲಿನ ಜನಕ್ಕೆ ನೀವು ಮೋಸ ಮಾಡಿದಂತಲ್ಲವೇ ಎಂದು ಪ್ರಶ್ನಿಸಿದರು.

150 ಗುರಿ ವಿಶ್ವಾಸವಿದೆ: ಸಂಕಲ್ಪ ಯಾತ್ರೆಯನ್ನು 3 ದಿನಗಳ ಕಾಲ 4 ಜಿಲ್ಲೆಯಲ್ಲಿ ಪ್ರಾರಂಭ ಮಾಡಿದ್ದು,ಅಭೂತಪೂರ್ವ ಬೆಂಬಲ ಇದೆ. ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಬಂದಿದೆ. ಭಾಜಪದ ಬಗ್ಗೆ ಜನರಲ್ಲಿಯೂ ವಿಶ್ವಾಸ ಹೆಚ್ಚಿದೆ. ಸಂಕಲ್ಪಯಾತ್ರೆ ವಿಜಯಸಂಕಲ್ಪ ಯಾತ್ರೆ ಆಗುವುದರಲ್ಲಿ ಸಂಶಯವಿಲ್ಲ. 2023 ರಲ್ಲಿ 150 ಗುರಿಯನ್ನು ಮುಟ್ಟುವ ವಿಶ್ವಾಸವಿದೆ ಎಂದರು.

ಸಿದ್ಧರಾಮಯ್ಯನವರು 4 ಕಿ.ಮೀ. ನಡೆಯುವ ಸವಾಲಿಗೆ ಪ್ರತಿಕ್ರಿಯೆ ನೀಡಿ, ಅವರು ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕಿಸಿದ್ದಾರೆ. ಇದಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರಿಗೆ ದೇವರು ಒಳ್ಳೆಯ ಆರೋಗ್ಯವನ್ನು ನೀಡಿ ನೂರು ವರ್ಷ ಚೆನ್ನಾಗಿರಲಿ ಎಂದು ತಿಳಿಸಿದರು.

ಕಾನೂನಿನ ಚೌಕಟ್ಟಿನೊಳಗೆ ಕ್ರಮ: ಮುರುಘಾಮಠಕ್ಕೆ ಹೊಸ ಶ್ರೀಗಳನ್ನು ನೇಮಿಸುವ ಬಗ್ಗೆ ಒತ್ತಡ ಕೇಳಿಬರುತ್ತಿರುವುದಕ್ಕೆ ಪ್ರತಿಕ್ರಯಿಸಿ, ಮಾಜಿ ಸಚಿವ ಏಕಾಂತಯ್ಯ ಅವರ ನೇತೃತ್ವದಲ್ಲಿ ಭಕ್ತಮಂಡಳಿಯ ಸರ್ವರೂ ಬಂದು ಭೇಟಿಯಾಗಿದ್ದಾರೆ. ಅಲ್ಲಿನ ವಿಚಾರಗಳೆಲ್ಲವನ್ನೂ ತಿಳಿಸಿದ್ದಾರೆ. ಮಠದ ಆಡಳಿತಕ್ಕೆ ಆಗುತ್ತಿರುವ ತೊಂದರೆಯ ಬಗ್ಗೆ ವಿವರಿಸಿದ್ದಾರೆ. ಮಠದ ಟ್ರಸ್ಟ್ ಇದ್ದು, ಕಾನೂನಿನ ಚೌಕಟ್ಟಿನೊಳಗೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.