ಕೇರಳದಲ್ಲಿ ಕೋವಿಡ್ ಹೆಚ್ಚಳ: ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ; ಜಿಲ್ಲಾಧಿಕಾರಿ
ಇನ್ನೆರಡು ದಿನಗಳಲ್ಲಿ ಹೊಸ ಮಾರ್ಗಸೂಚಿ
Team Udayavani, Jul 31, 2021, 7:10 AM IST
ಉಳ್ಳಾಲ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಪರಿಣಾಮ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಾಸಿಟಿವಿಟಿ ದರ ಹೆಚ್ಚುತ್ತಿದೆ. ಇದರ ನಿಯಂತ್ರಣಕ್ಕಾಗಿ ಮುಂದಿನೆರಡು ದಿನಗಳಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಶುಕ್ರವಾರ ತಲಪಾಡಿ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ, ಜಿಲ್ಲೆಗೆ ಬರುವವರ ತಪಾಸಣೆ ಕಾರ್ಯ ಪರಿಶೀಲಿಸಿ ಮಾತನಾಡಿದ ಅವರು, ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ಕೋವಿಡ್ ನೆಗೆಟಿವ್ ವರದಿ ಇರುವವರಿಗೆ ದ.ಕ. ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಪ್ರಥಮ ಅಲೆಯ ಸಂದರ್ಭ ದಿನನಿತ್ಯ ಸಂಚರಿಸುವವರಿಗೆ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಅದರ ಮರು ಅನುಷ್ಠಾನಕ್ಕೆ ಚಿಂತನೆ ಮಾಡಲಾಗುವುದು ಎಂದರು.
ಜಿಲ್ಲೆಯ ಗಡಿಯ 4 ಕೇಂದ್ರಗಳಲ್ಲಿ ಕೇರಳದಿಂದ ಬರುವವರ ತಪಾಸಣೆಗೆ ಚೆಕ್ ಪಾಯಿಂಟ್ ಆರಂಭಿಸಲಾಗಿದೆ. ಒಳರಸ್ತೆಗಳಲ್ಲೂ ಚೆಕ್‌ಪಾಯಿಂಟ್ ಹಾಕಲು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಶನಿವಾರ ಜಿಲ್ಲಾ ವಿಪತ್ತು ಪ್ರಾ ಧಿಕಾರದ ಸಭೆ ನಡೆಯಲಿದ್ದು, ಅಂತಾರಾಜ್ಯ ವಾಹನ ಸಂಚಾರ ಸಹಿತ ಧಾರ್ಮಿಕ ಕ್ಷೇತ್ರ, ಶಾಲಾ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ನಿಯಮ ಹೇರುವ ಕುರಿತು ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಹೊಸ ಮಾರ್ಗಸೂಚಿಯನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
9 ಸಾವಿರ ಪರೀಕ್ಷೆಗೆ ಗುರಿ
ಜಿಲ್ಲೆಯಲ್ಲಿ ದಿನವೊಂದಕ್ಕೆ 9,000 ಜನರ ಪರೀಕ್ಷೆಗೆ ಗುರಿ ಇಟ್ಟುಕೊಳ್ಳಲಾಗಿದ್ದು ಪ್ರತೀದಿನ 7ರಿಂದ 8 ಸಾವಿರದವರೆಗೆ ಪರೀಕ್ಷೆ ನಡೆಸಲಾಗುತ್ತಿದೆ. ಮುಂದೆ ಹೆಚ್ಚುವರಿ ತಂಡ ರಚಿಸಿ ಪರೀಕ್ಷೆಯ ಪ್ರಮಾಣ ಹೆಚ್ಚಿಸಲಾಗುವುದು. ಇದರೊಂದಿಗೆ ಕೋವಿಡ್ ದೃಢಪಟ್ಟವರಿಗೆ ಹೋಂ ಐಸೊಲೇಶನ್‌ನೊಂದಿಗೆ ಕೋವಿಡ್ ಕೇರ್ ಸೆಂಟರ್‌ಗೆ ಕಡ್ಡಾಯವಾಗಿ ದಾಖಲಾಗಲು ಸೂಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ