ಎಲ್ಲ ಸೇನಾನಿಗಳಿಗೆ ಪರಿಹಾರ ಸಿಗಲಿ : ಕೋವಿಡ್ ಯುದ್ಧನಿರತ ವಿವಿಧ ಇಲಾಖೆಗಳ ಯೋಧರು


Team Udayavani, May 25, 2021, 7:25 AM IST

ಎಲ್ಲ ಸೇನಾನಿಗಳಿಗೆ ಪರಿಹಾರ ಸಿಗಲಿ : ಕೋವಿಡ್ ಯುದ್ಧನಿರತ ವಿವಿಧ ಇಲಾಖೆಗಳ ಯೋಧರು

ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಕಾರ್ಯಕರ್ತರ ಸೇವೆ ಗಣನೀಯ. ಇದನ್ನು ಯುದ್ಧವೆಂದೇ ಪರಿಗಣಿ ಸಿರುವ ಸರಕಾರಗಳು ಕೊರೊನಾ ವಿರುದ್ಧ ಅವಿರತ ಹೋರಾಟ ನಡೆಸುತ್ತಲೇ ಇವೆ. ಇದರಲ್ಲಿ ಹಲವಾರು ಯೋಧರನ್ನು ಕಳೆದುಕೊಂಡಿದ್ದೇವೆ. ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಇಂಥ ಯೋಧರ ಸಾವಿಗೆ ಬೆಲೆ ಸಿಗುತ್ತಿಲ್ಲ ಎಂಬುದು ದುರದೃಷ್ಟಕರ. ಸದ್ಯ ವೈದ್ಯರು ಮತ್ತು ಪೊಲೀಸರಿಗೆ ಮಾತ್ರ ಕೊರೊನಾ ವಿಮೆ ಸೌಲಭ್ಯ ಸಿಕ್ಕಿದ್ದರೆ ಉಳಿದವರಿಗೆ ಸಿಕ್ಕಿಲ್ಲ. ಇವರಿಗೂ ಬೇಗನೇ ಪರಿ ಹಾರ ಸಿಗಲಿ ಎಂಬುದು ಉದಯವಾಣಿ ಆಶಯ.

ಗುತ್ತಿಗೆ ವೈದ್ಯಕೀಯ ಸಿಬಂದಿ: 26 ಸಾವು
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ, ಹೊರ ಗುತ್ತಿಗೆ ನೌಕರರು ಈ ಹೋರಾಟ ದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. 26 ವೈದ್ಯಕೀಯ ಸಿಬಂದಿ ಜೀವ ಕಳೆದುಕೊಂಡಿದ್ದಾರೆ. ಆದರೆ ಇದುವರೆಗೂ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಿಲ್ಲ ಎಂದು ಗುತ್ತಿಗೆ, ಹೊರ ಗುತ್ತಿಗೆ ವೈದ್ಯಕೀಯ ಸಿಬಂದಿಯ ಸಂಘಟನೆ ತಿಳಿಸಿದೆ.

ಆಶಾ ಕಾರ್ಯಕರ್ತೆಯರು: 19 ಸಾವು
ಕೊರೊನಾ ಕರ್ತವ್ಯ ಸಂದರ್ಭ ಕಳೆದ ವರ್ಷ 12, ಈ ವರ್ಷ 7 ಮಂದಿ ಆಶಾ ಕಾರ್ಯಕರ್ತೆಯರು ಜೀವ ಕಳೆದುಕೊಂಡಿದ್ದಾರೆ. ಅವರಲ್ಲಿ ಕೇವಲ ಒಬ್ಬರಿಗೆ ಮಾತ್ರ ಪರಿಹಾರ ದೊರೆತಿದ್ದು, ಉಳಿದವರ ಕುಟುಂಬಕ್ಕೆ ಪರಿಹಾರ ಇನ್ನೂ ಮರಿಚೀಕೆಯಾಗಿದೆ. ತಾಂತ್ರಿಕ ಕಾರಣಗಳಿಂದ ಪರಿಹಾರ ವಿಳಂಬವಾಗುತ್ತಿದ್ದು, ನಿಧನ ಹೊಂದಿದವರ ಕುಟುಂಬಕ್ಕೆ ಪರಿಹಾರ ಗಗನಕುಸುಮವಾಗಿದೆ.

ಪಂಚಾಯತ್‌ ಇಲಾಖೆ ಸಿಬಂದಿ: 63 ಸಾವು
ಕಳೆದ ವರ್ಷ 23, ಈ ವರ್ಷ 40 ಮಂದಿ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಇಲಾಖೆಯ ಸಿಬಂದಿ ಮೃತಪಟ್ಟಿದ್ದಾರೆ. ಇದುವರೆಗೆ ಒಬ್ಬರಿಗೆ ಮಾತ್ರ ಪರಿಹಾರ ದೊರೆತಿದೆ. ಪಂಚಾಯತ್‌ ಸಿಬಂದಿ ಸರಕಾರಿ ನೌಕರರಾಗಿದ್ದು, ಸರಕಾರದಿಂದ ಪರಿಹಾರ ದೊರೆಯುತ್ತದೆ. ವಿಮೆ ಪರಿಹಾರದ ಬಗ್ಗೆ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.

ಕೃಷಿ ಇಲಾಖೆ ಸಿಬಂದಿ : 9 ಸಾವು
ಕೊರೊನಾ ಸಂದರ್ಭದಲ್ಲಿ ಕೃಷಿ ಇಲಾಖೆಯನ್ನು ಅಗತ್ಯ ಸೇವೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಹೀಗಾಗಿ ಲಾಕ್‌ಡೌನ್‌ ಸಂದರ್ಭದಲ್ಲಿಯೂ ಕೃಷಿ ಇಲಾಖೆಯ ಸಿಬಂದಿ ಗ್ರಾಮೀಣ ಭಾಗದಲ್ಲಿ ರೈತರೊಂದಿಗೆ ನಿರಂತರ ಸಂಪರ್ಕ ಇರಿಸಿಕೊಂಡಿದ್ದಾರೆ. ಹೀಗಾಗಿ ಇವರೂ ಕೊರೊನಾ ಬಾಧಿತರಾಗಿದ್ದು, ಕರ್ತವ್ಯ ಸಂದರ್ಭದಲ್ಲಿ ಸೋಂಕಿನಿಂದ 9 ಜನ ಸಾವಿಗೀಡಾಗಿದ್ದಾರೆ. ಆದರೆ ಪರಿಹಾರ ಸಿಕ್ಕಿಲ್ಲ.

ವೈದ್ಯರು: 50 ಸಾವು
ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಕಳೆದ ವರ್ಷ 40 ಜನ ವೈದ್ಯರು ಜೀವ ತೆತ್ತಿದ್ದಾರೆ. ಈ ವರ್ಷ 10 ಜನ ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರಲ್ಲಿ ಮೂವರು ಸರಕಾರಿ ವೈದ್ಯರು. ವೈದ್ಯರನ್ನು ಸರಕಾರ ಕೊರೊನಾ ಸೇನಾನಿಗಳು ಎಂದು ಆರಂಭದಿಂದಲೂ ಪರಿಗಣಿಸಿದೆ. ವೈದ್ಯರು ನಿಧನ ಹೊಂದಿದರೆ ಅವರ ಕುಟುಂಬಕ್ಕೆ ಕೇಂದ್ರ ಸರಕಾರದಿಂದ 50 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ರಾಜ್ಯದಲ್ಲಿ ಮೃತಪಟ್ಟ ಬಹುತೇಕ ವೈದ್ಯರ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸಲಾಗಿದೆ.

ಪೋಲೀಸರು: 146 ಸಾವು
ಪೋಲೀಸರು ಮುಂಚೂಣಿ ಯೋಧರಾಗಿದ್ದು, ಎರಡು ವರ್ಷಗಳಲ್ಲಿ 146 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷ 103, ಈ ವರ್ಷ 43 ಜನ ಪೋಲೀಸರು ಜೀವ ತೆತ್ತಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಡಿಜಿಪಿ ಪ್ರವೀಣ್‌ ಸೂದ್‌ ಮುತುವರ್ಜಿ ವಹಿಸಿದ್ದು, ಮೃತ ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ವಿಮೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ.

ಅಂಗನವಾಡಿ ಕಾರ್ಯಕರ್ತೆಯರು: 44 ಸಾವು
ಕಳೆದ ವರ್ಷ 25, ಈ ವರ್ಷ 19 ಅಂಗನವಾಡಿ ಕಾರ್ಯಕರ್ತೆ ಯರು ಸಾವಿಗೀಡಾಗಿದ್ದಾರೆ. ಇದುವರೆಗೆ ಐವರಿಗೆ ಮಾತ್ರ ಪರಿಹಾರ ನೀಡಲಾಗಿದೆ. 15 ಜನರಿಗೆ ಪರಿಹಾರ ನೀಡಲು ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು, ಅವರಿಗೂ ಪರಿಹಾರ ನೀಡಲು ಇಲಾಖೆ ನಿರ್ಧರಿಸಿದೆ. ಈ ವರ್ಷ ನಿಧನ ಹೊಂದಿದ ಕಾರ್ಯಕರ್ತೆಯರ ಬಗ್ಗೆ ಇಲಾಖೆ ಅಧಿಕೃತ ಮಾಹಿತಿ ಕಲೆ ಹಾಕುತ್ತಿದೆ.

ಶಿಕ್ಷಕರು: 300 ಸಾವು
ಸರಕಾರ ಶಿಕ್ಷಕರನ್ನು ಕೊರೊನಾ ಕರ್ತವ್ಯಕ್ಕೆ ನಿಯೋಜಿಸುತ್ತಿದೆ. ಸೋಂಕಿನಿಂದ 300ಕ್ಕೂ ಹೆಚ್ಚು ಶಿಕ್ಷಕರು ನಿಧನ ಹೊಂದಿದ್ದಾರೆ. ಅಧಿಕೃತ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸರಕಾರ ಶಿಕ್ಷಕರನ್ನು ಇದುವರೆಗೆ ಮುಂಚೂಣಿ ಯೋಧರೆಂದು ಪರಿಗಣಿಸಿರಲಿಲ್ಲ. ಇದರಿಂದ ನಿಧನ ಹೊಂದಿದ ಶಿಕ್ಷಕರ ಕುಟುಂಬಕ್ಕೆ ಪರಿಹಾರ ಮರೀಚಿಕೆಯಾಗಿದೆ.

ಕಂದಾಯ ಇಲಾಖೆ: 43 ಸಾವು
ಕಂದಾಯ ಇಲಾಖೆ ಕೊರೊನಾ ನಿಯಂತ್ರಣದಲ್ಲಿ ಮಾತೃ ಇಲಾಖೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಜನರೊಂದಿಗೆ ನೇರವಾಗಿ ಬೆರೆಯುತ್ತಿದ್ದಾರೆ. ಈ ವರೆಗೆ 43 ಮಂದಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಆದರೆ ಇದುವರೆಗೆ ಯಾರಿಗೂ ಸರಕಾರದಿಂದ ಪರಿಹಾರ ದೊರೆತಿಲ್ಲ.

– ಶಂಕರ ಪಾಗೋಜಿ 

ಟಾಪ್ ನ್ಯೂಸ್

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ನಿವೃತ್ತಿಗೆ ಸರಿಯಾದ ವಯಸ್ಸು ಯಾವುದು?

ನಿವೃತ್ತಿಗೆ ಸರಿಯಾದ ವಯಸ್ಸು ಯಾವುದು?

ಬಂಟ್ವಾಳದಲ್ಲಿ ಗರಿಷ್ಠ, ಹೆಬ್ರಿಯಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಮತದಾರರು

ಬಂಟ್ವಾಳದಲ್ಲಿ ಗರಿಷ್ಠ, ಹೆಬ್ರಿಯಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಮತದಾರರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಪರ್ಸೆಂಟೇಜ್‌ ಆರೋಪ ಸದನ ಸಮಿತಿ ರಚನೆಗೆ ಡಿಕೆಶಿ ಆಗ್ರಹ

ಪರ್ಸೆಂಟೇಜ್‌ ಆರೋಪ ಸದನ ಸಮಿತಿ ರಚನೆಗೆ ಡಿಕೆಶಿ ಆಗ್ರಹ

ಮೊದಲನೇ ಸುತ್ತಿನ ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ಮೊದಲನೇ ಸುತ್ತಿನ ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟ

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.