ಕೌಟುಂಬಿಕ ವಿಚಾರ : ಮಂಡ್ಯ ಮೂಲದ ಒಂದೇ ಕುಟುಂಬದ ಐವರು ಸಾವು

Team Udayavani, Sep 17, 2021, 11:26 PM IST

ಕೌಟುಂಬಿಕ ವಿಚಾರ : ಮಂಡ್ಯ ಮೂಲದ ಒಂದೇ ಕುಟುಂಬದ ಐವರು ಸಾವು

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಒಂದೇ ಕುಟುಂಬ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಒಂಭತ್ತು ತಿಂಗಳ ಹಸುಗೂಸು ಆಹಾರವಿಲ್ಲದೆ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಶುಕ್ರವಾರ ಸಂಜೆ ಬ್ಯಾಡರಹಳ್ಳಿಯ ತಿಗರಪಾಳ್ಯದಲ್ಲಿ ನಡೆದಿದೆ.

ಹಲ್ಲೆಗೆರೆ ಶಂಕರ್‌ ಅವರ ಪತ್ನಿ ಭಾರತಿ (51), ಅವರ ಮೊದಲ ಪುತ್ರಿ ಸಿಂಚನಾ (34),ಎರಡನೇ ಪುತ್ರಿ ಸಿಂಧೂರಾಣಿ (31) ಮತ್ತು ಪುತ್ರ ಮಧು ಸಾಗರ್‌ (25) ಮತ್ತು ಸಿಂಧೂರಾಣಿಯ 9 ತಿಂಗಳ ಗಂಡು ಮಗು ಆಹಾರವಿಲ್ಲದೆ ಮೃತಪಟ್ಟಿದೆ. ಐದು ಮೃತದೇಹಗಳ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಮಧ್ಯೆ ಎರಡೂವರೆ ವರ್ಷದ ಪ್ರೇಕ್ಷಾ ಎಂಬ ಹೆಣ್ಣು ಮಗು ಪವಾಡದಂತೆ ಬದುಕುಳಿದಿದೆ.

ಈ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಸೆ.12ರಂದೇ ದುರ್ಘ‌ಟನೆ ನಡೆದಿದ್ದು, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶಂಕರ್‌ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಿಡಿಯೋ ಚಿತ್ರೀಕರಣದ ಮೂಲದ ಬಾಗಿಲು ಮುರಿದು ನೋಡಿದಾಗ ಕೊಣೆಯೊಂದರಲ್ಲಿ ತಾಯಿ, ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 9 ತಿಂಗಳ ಮಗು ಬೆಡ್‌ ಮೇಲೆ ಮೃತಪಟ್ಟಿತ್ತು. ಇನ್ನು ಬದುಕುಳಿದ ಪ್ರೇಕ್ಷಾ ಅಸ್ವಸ್ಥಗೊಂಡು ಹಾಸಿಗೆ ಪಕ್ಕದಲ್ಲಿ ಬಿದ್ದಿದ್ದಳು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ :ಉಪ್ಪುಂದ ಮೀನುಗಾರಿಕೆಗೆ ತೆರಳಿದ ದೋಣಿ ದುರಂತ : 6 ಮಂದಿ ಪಾರು, ಇಬ್ಬರು ನಾಪತ್ತೆ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಬ್ಯಾಡರಹಳ್ಳಿ ಪೊಲೀಸರು ಹಾಗೂ ಡಿಸಿಪಿ ಸಂಜೀವ್‌ ಎಂ. ಪಾಟೀಲ್‌ ಹಾಗೂ ಹೆಚ್ಚುವರಿ ಪೊಲೀಸ್‌ ಆಯುಕ್ತ ಸೌಮೇಂದು ಮುಖರ್ಜಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶಂಕರ್‌ ಸೆ.12 ಕುಟುಂಬಸ್ಥರ ಜತೆ ಗಲಾಟೆ ಮಾಡಿಕೊಂಡು ಮನೆಯಿಂದ ಹೊರ ಹೋಗಿದ್ದರು. ಬಳಿಕ ಐದು ದಿನಗಳಿಂದಲೂ ಮನೆಗೆ ಬಂದಿರಲಿಲ್ಲ. ಗುರುವಾರ ಸಂಜೆ ಮನೆಗೆ ಬಂದಾಗ ಮನೆ ಬಾಗಿಲು ಹಾಕಿದ್ದರಿಂದ ಮತ್ತೆ ಹೊರಗಡೆ ಹೋಗಿದ್ದಾರೆ. ಆದರೆ, ಐದು ದಿನಗಳಿಂದ ಯಾರು ಮನೆಯಿಂದ ಹೊರಬಂದಿರುವುದನ್ನು ಸ್ಥಳೀಯರು ನೋಡಿಲ್ಲ. ಅಲ್ಲದೆ, ಶುಕ್ರವಾರ ಮಧ್ಯಾಹ್ನ ಶಂಕರ್‌ ಮನೆಯಿಂದ ಕೊಳತೆ ವಾಸನೆ ಬರುತ್ತಿತ್ತು. ಅದರಿಂದ ಅನುಮಾನಗೊಂಡು ಸ್ಥಳೀಯರೇ ಶಂಕರ್‌ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಏಳು ಗಂಟೆ ಸುಮಾರಿಗೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಕೌಟುಂಬಿಕ ವಿಚಾರವೇ ಘಟನೆಗೆ ಕಾರಣ
ಶಂಕರ್‌ “ಶಾಸಕ’ ಎಂಬ ಪತ್ರಿಕೆಯ ಸಂಪಾದಕರಾಗಿದ್ದು, ಬ್ಯಾಡರಹಳ್ಳಿಯ ತಿಗಳರ ಪಾಳ್ಯದ ಚೇತನ್‌ ವೃತ್ತದ 4ನೇ ಕ್ರಾಸ್‌ನಲ್ಲಿರುವ ಮನೆಯಲ್ಲಿ ಕುಟುಂಬ ಸದಸ್ಯರ ಜತೆ ವಾಸವಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಶಂಕರ್‌ ಮತ್ತು ಪತ್ನಿ, ಮಕ್ಕಳ ನಡುವೆ ಕೌಟುಂಬಿಕ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಶಂಕರ್‌ ಎರಡನೇ ಪುತ್ರಿ ಸಿಂಧುರಾಣಿ ಎಂಬವರನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ, ಪತಿಯ ಜತೆಗೆ ಜಗಳವಾಡಿಕೊಂಡ ಪತ್ನಿ ಸಿಂಧುರಾಣಿ ತವರು ಮನೆಗೆ ವಾಪಸ್‌ ಬಂದಿದ್ದರು. ಅಲ್ಲದೆ, ಹತ್ತು ದಿನಗಳ ಹಿಂದೆ 9 ತಿಂಗಳ ಗಂಡು ಮಗುವಿನ ನಾಮಕಾರಣ ವಿಚಾರದಲ್ಲಿ ಸಿಂಧುರಾಣಿ ಪತಿಯ ಮನೆ ಮತ್ತು ಶಂಕರ್‌ ಕುಟುಂಬ ನಡುವೆ ಜಗಳ ನಡೆದಿತ್ತು. ಮಗುವಿಗೆ ಕಿವಿಚುಚ್ಚಿಸುವಂತೆ ಶಂಕರ್‌ ಕುಟುಂಬ ಹೇಳಿತ್ತು. ಆದರೆ, ಸಿಂಧೂರಾಣಿ ಪತಿ ಕುಟುಂಬ ಅದಕ್ಕೆ ನಿರಾಕರಿಸಿತ್ತು. ಅದೇ ವಿಚಾರಕ್ಕೆ ಆಕೆ ಗಲಾಟೆ ಮಾಡಿಕೊಂಡು ತವರು ಮನೆಗೆ ಬಂದಿದ್ದು, ಆತ್ಮಹತ್ಯೆಗೂ ಯತ್ನಿಸಿದ್ದರು. ಇನ್ನು ಶಂಕರ್‌ ಮತ್ತು ಪುತ್ರ ಮಧುಸೂದನ್‌ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿದ್ದು, ಹತ್ತು ಲಕ್ಷ ರೂ. ಹಣ ಕೊಡುವಂತೆ ಪುತ್ರ ಮತ್ತು ಪತ್ನಿ ಶಂಕರ್‌ಗೆ ಒತ್ತಾಯಿಸಿದ್ದರು. ಆದರೆ, ಶಂಕರ್‌ ಕೊಡಲು ನಿರಾಕರಿಸಿದ್ದರು ಎಂದು ಹೇಳಲಾಗಿದೆ. ಈ ಎಲ್ಲ ವಿಚಾರಗಳಿಗೆ ಭಾನುವಾರ ಶಂಕರ್‌ ಮತ್ತು ಪತ್ನಿ, ಮಕ್ಕಳ ನಡುವೆ ಗಲಾಟೆ ಆಗಿತ್ತು. ಅದರಿಂದ ಬೇಸರಗೊಂಡು ಶಂಕರ್‌ ಕೆಲಸದ ಹೆಸರಿನಲ್ಲಿ ಮೈಸೂರಿಗೆ ಹೋಗಿದ್ದರು ಎಂದು ಹೇಳಲಾಗಿದೆ. ಅವರು ವಾಪಸ್‌ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಐದು ದಿನ ಶವಗಳ ಮುಂದೆ ಕಣ್ಣಿರಿಟ್ಟು ಬದುಕಿದ ಪ್ರೇಕ್ಷಾ
ತಾಯಿ, ಚಿಕ್ಕಮ್ಮ, ಅಜ್ಜಿ ಮತ್ತು ಮಾವ ನೇಣಿಗೆ ಶರಣಾದ ಬಳಿಕ ದಿಕ್ಕು ತೋಚದೆ ಎರಡೂವರೆ ವರ್ಷದ ಸಿಂಚನಾ ಪುತ್ರಿ ಪ್ರೇಕ್ಷಾ, ಶವಗಳ ಮುಂದೆಯೇ ಕಣ್ಣಿರು ಸುರಿಸಿ ಅಸ್ವಸ್ಥಗೊಂಡು ಹಾಸಿಗೆ ಪಕ್ಕದಲ್ಲಿ ಬಿದ್ದಿದ್ದಳು. ಪೊಲೀಸರು ಬಾಗಿಲು ಒಡೆದು ಒಳಹೋಗಿ ನೋಡಿದಾಗ ಪ್ರೇಕ್ಷಾ ಬದುಕಿರುವುದನ್ನು ಖಚಿತ ಪಡಿಸಿಕೊಂಡು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐದು ದಿನಗಳಿಂದ ಆಹಾರ ಸೇವಿಸದರಿಂದ ಆಕೆ ಅಸ್ವಸ್ಥಗೊಂಡಿದ್ದಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ಹೇಳಿದರು.

ಆಹಾರವಿಲ್ಲದೆ ಮೃತ ಪಟ್ಟ 9ತಿಂಗಳ ಮಗು
ಸಿಂಧೂರಾಣಿಯ 9 ತಿಂಗಳ ಮಗು ಹಾಲು, ಆಹಾರವಿಲ್ಲದೆ ಮೃತಪಟ್ಟಿರುವುದು ಪತ್ತೆಯಾಗಿದೆ. ಸೆ.12ರಂದು ಮಗುವಿಗೆ ಹಾಲು ಕುಡಿಸಿ ಬೆಡ್‌ ಮೇಲೆ ಮಲಗಿಸಿದ್ದಾರೆ. ಅನಂತರ ಮಗುವಿಗೆ ಯಾವುದೇ ಆಹಾರ ಸೇವಿಸಿಲ್ಲ. ಹೀಗಾಗಿ ಮಗು ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.