ಕರಾವಳಿ ಪ್ರದೇಶದಲ್ಲಿರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಿ;ಒಡಿಶಾ ಸಿಎಂ
ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯಿಂದಲೂ ಸಿದ್ಧತೆ ನಡೆಸಿಕೊಂಡಿದೆ ಎಂದು ಪಟ್ನಾಯಕ್ ತಿಳಿಸಿದ್ದಾರೆ.
Team Udayavani, May 25, 2021, 8:45 AM IST
ಭುವನೇಶ್ವರ್: ಮೇ 26ರಂದು ತೀವ್ರ ಸ್ವರೂಪದ ಯಾಸ್ ಚಂಡಮಾರುತ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಜನರು ಸ್ಥಳೀಯ ಆಡಳಿತದ ಅಧಿಕಾರಿಗಳೊಂದಿಗೆ ಸಹಕರಿಸುವ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಂಗಳವಾರ(ಮೇ 25) ಆಗ್ರಹಿಸಿದ್ದರು.
ಜನರು ಎರಡು ಮಾಸ್ಕ್ ಗಳನ್ನು ಧರಿಸಬೇಕು ಹಾಗೂ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದ್ದು, ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಚಂಡಮಾರುತ ಮತ್ತೊಂದು ಸವಾಲನ್ನು ತಂದೊಡ್ಡಿದೆ. ಇದನ್ನು ನಾವು ಎದುರಿಸಲೇಬೇಕಾಗಿದೆ ಎಂದು ಪಟ್ನಾಯಕ್ ತಿಳಿಸಿದ್ದಾರೆ.
ಕಳೆದ ವರ್ಷ ಮೇ ತಿಂಗಳಿನಲ್ಲಿ ನಾವು ಆ್ಯಂಫನ್ ಚಂಡಮಾರುತವನ್ನು ಕೋವಿಡ್ 19 ಸೋಂಕಿನ ನಡುವೆಯೇ ಜನರ ಸಹಕಾರದಿಂದ ಎದುರಿಸಿದ್ದೇವು, ಈ ವರ್ಷವೂ ಕೂಡಾ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಸೋಂಕು ಮತ್ತು ನೈಸರ್ಗಿಕ ವಿಕೋಪವನ್ನು ಎದುರಿಸಬೇಕು ಎಂದು ಹೇಳಿದರು.
ಚಂಡಮಾರುತ ಒಡಿಶಾ ರಾಜ್ಯಕ್ಕೆ ಹೊಸದೇನಲ್ಲ, ಆದರೆ ಇದರ ಬಗ್ಗೆ ಮುಂಜಾಗ್ರತೆ ಅಗತ್ಯವಾಗಿರಬೇಕು. ನಿರ್ಲಕ್ಷ್ಯ ವಹಿಸಿದರೆ ಹೆಚ್ಚು ಅಪಾಯ. ಈ ಬಾರಿಯೂ ಚಂಡಮಾರುತ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯಿಂದಲೂ ಸಿದ್ಧತೆ ನಡೆಸಿಕೊಂಡಿದೆ ಎಂದು ಪಟ್ನಾಯಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ
ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ
11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?
ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ