ಹಿಜಾಬ್‌ ವಿವಾದ ಸೃಷ್ಟಿಯಿಂದ ದೇಶಕ್ಕೆ ಅವಮಾನವಾಗಿದೆ : ಡಿ.ಕೆ. ಶಿವಕುಮಾರ್

Team Udayavani, Feb 7, 2022, 7:28 PM IST

ಹಿಜಾಬ್‌ ವಿವಾದ ಸೃಷ್ಟಿಯಿಂದ ದೇಶಕ್ಕೆ ಅವಮಾನವಾಗಿದೆ : ಡಿ.ಕೆ. ಶಿವಕುಮಾರ್

ಮಂಗಳೂರು  : ಹಿಜಾಬ್‌ ವಿವಾದ ಸೃಷ್ಟಿಯಿಂದ ದೇಶಕ್ಕೆ ಅವಮಾನವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವ ಕುಮಾರ್‌ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು.  ಪ್ರಸ್ತುತ ಜನರಿಗೆ ಬೇಕಾಗಿರುವುದು ಆರ್ಥಿಕ ಭದ್ರತೆ, ಉದ್ಯೋಗ, ನೆಮ್ಮದಿಯ ಬದುಕು. ಜನತೆಯ ಈ ಆಶೋತ್ತರಗಳನ್ನು ಈಡೇರಿಸುವುದೇ ಕಾಂಗ್ರೆಸ್‌ನ ಗುರಿ. ನಾವು ಆದ್ಯತೆ ನೀಡುವುದು ಇದಕ್ಕೆ. ಆದರೆ ಬಿಜೆಪಿಗೆ ಈ ಆದ್ಯತೆಗಳು ಬೇಕಾಗಿಲ್ಲ . ಅವರ ಗಮನ ಇರುವುದು ಮತೀಯ ಭಾವನೆಗಳನ್ನು ಕೆರಳಿಸಿ ಅರಾಜಕತೆ ಸೃಷ್ಟಿಸುವುದು. ವಿದ್ಯಾರ್ಥಿಗಳಲ್ಲಿ, ಜನರಲ್ಲಿ ಮತೀಯ ಭಾವನೆಯ ವಿಷಬೀಜವನ್ನು ಬಿತ್ತುವ ಷಡ್ಯಂತ್ರ ಆನೇಕರಿಂದ ನಡೆಯುತ್ತಿದ್ದು ಕಾಂಗ್ರೆಸ್‌ ಇದನ್ನು ಖಂಡಿಸುತ್ತದೆ ಎಂದವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

50 ಲಕ್ಷ ಸದಸ್ಯತ್ವ ನೊಂದಣಿ ಗುರಿ

ರಾಜ್ಯದಲ್ಲಿ ಮಾ.31ರವರೆಗೆ ನಡೆಯುವ ಕಾಂಗ್ರೆಸ್‌ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ರಾಜ್ಯದಲ್ಲಿ 50 ಲಕ್ಷ ಹೊಸ ಸದಸ್ಯರ ನೋಂದಣಿ ಗುರಿ ಇರಿಸಿಕೊಳ್ಳಲಾಗಿದೆ ಎಂದರು.

ಸದಸ್ಯತ್ವ ನೋಂದಣಿಗೆ ನೋಂದಣಿಗಾರು ಹಾಗೂ ಮುಖ್ಯ ನೋಂದಣಿಗಾರರ ನೇಮಕ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮುಖ್ಯ ನೋಂದಣಿಗಾರರ ನೇಮಕಕ್ಕೆ 7253 ಅರ್ಜಿಗಳು ಬಂದಿದ್ದು ಇದರಲ್ಲಿ 5848 ಮಂದಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್‌ ಸದಸ್ಯರಾಗಲು ಬಯಸುವವರಿಗೆ ಇದೊಂದು ಅವಕಾಶವಾಗಿದೆ.ಕಾಂಗ್ರೆಸ್‌ ಸಿದ್ಧಾಂತ ಹಾಗೂ ನಾಯಕತ್ವದ ಮೇಲೆ ನಂಬಿಕೆ ಇರುವ ಯಾರೂ ಕೂಡಾ 5 ರೂ. ನೀಡಿ ಸದಸ್ಯತ್ವ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಸದಸ್ಯರಿಗೆ ಪಕ್ಷದಿಂದ ಗುರುತಿನ ಚೀಟಿ ನೀಡಲಾಗುವುದು ಎಂದರು.

ಪ್ರತಿಕ್ಷೇತ್ರಕ್ಕೆ ನೇಮಕ ಮಾಡಿರುವ ವೀಕ್ಷಕರು ಇದರ ಬಗ್ಗೆ ನಿಗಾ ವಹಿಸುತ್ತಾರೆ . ಸದಸ್ಯತ್ವ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ ಹಂತದಲ್ಲಿ ಬೂತ್‌, ತಾಲೂಕು, ಜಿಲ್ಲಾಮಟ್ಟಗಳಲ್ಲಿ ಪಕ್ಷದ ಅಧ್ಯಕ್ಷತೆಗೆ ಅಂತರಿಕ ಚುನಾವಣೆ ನಡೆಯಲಿರುವುದು. ಈ ಕುರಿತು ಎಐಸಿಸಿ ವತಿಯಿಂದ ಈಗಾಗಲೇ ಚುನಾವಣಾಧಿಕಾರಿಯನ್ನು ನೇಮಕಗೊಳಿಸಲಾಗಿದೆ ಎಂದವರು ವಿವರಿಸಿದರು.

ಇದನ್ನೂ ಓದಿ : ಕುಡಗೋಲು ತಾಗಿ ವಿದ್ಯಾರ್ಥಿನಿ ಸಾವು ಪ್ರಕರಣ : ಆರೋಪಿ ಸೈಕಲ್ ಸವಾರನಿಗೆ 2 ವರ್ಷ ಜೈಲು

ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೋರಿಕೆ
ರಾಜ್ಯದಲ್ಲಿ ಇದೀಗ ಸರಕಾರ ಎಲ್ಲಾ ಚಟುವಟಿಕೆಗಳಿಗೆ ಅವಕಾಶ ನೀಡಿದೆ. ಆದರೆ ನಮ್ಮ ಮೇಕೆದಾಟು ಪಾದಯಾತ್ರೆಯನ್ನು ಮಾತ್ರ ಸರಕಾರ ತಡೆಹಿಡಿದಿದೆ. ಪಾದಯಾತ್ರೆ ಮುಂದುವರಿಸಲು ಅನುಮತಿ ನೀಡುವಂತೆ ಶೀಘ್ರದಲ್ಲೆ ರಾಜ್ಯಸರಕಾರಕ್ಕೆ ಕೋರಿಕೆ ಸಲ್ಲಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ಅವರು ಈ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ,ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್‌, ಮಾಜಿ ಶಾಸಕರಾದ ವಸಂತ ಬಂಗೇರ, ಶಕುಂತಾಳ ಶೆಟ್ಟಿ, ಜೆ.ಆರ್‌.ಲೋಬೋ, ಮೊದೀನ್‌ ಬಾವಾ,ವಿಧಾನಪರಿಷತ್‌ ಮಾಜಿ ಸದಸ್ಯ ಬಿ.ಎಲ್‌.ಶಂಕರ್‌, ರಾಜ್ಯಸಭಾ ಮಾಜಿ ಸದಸ್ಯ ಇಬ್ರಾಹಿಂ, ಮುಖಂಡರಾದ ಕೋಡಿಜಾಲ್‌ ಇಬ್ರಾಹಿಂ, ಮಿಥುನ್‌ ರೈ, ಡಾ| ರಘು,ಶಶಿಧರ ಹೆಗ್ಡೆ, ಲುಕಾ¾ನ್‌ ಬಂಟ್ವಾಳ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.