ದ.ಕ. ಮತ್ತೆ ಮೂವರಿಗೆ ಕೋವಿಡ್-19 ಸೋಂಕು ದೃಢ; ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆ
Team Udayavani, May 26, 2020, 1:15 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಈ ಮೂವರು ಸೋಂಕಿತರು ಕತಾರ್ ನಿಂದ ಬಂದವರಾಗಿದ್ದಾರೆ.
ಕತಾರ್ ನಿಂದ ಆಗಮಿಸಿ ಬೆಂಗಳೂರಿನಲ್ಲೇ ಕ್ವಾರೆಂಟೈನ್ ಇದ್ದ ಮೂವರು 30 ವರ್ಷದ ಇಬ್ಬರು ಪುರುಷರು ಮತ್ತು 37 ವರ್ಷದ ಓರ್ವನಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲೇ ಮೂವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಇಂದು 100 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2282ಕ್ಕೆ ಏರಿಕೆಯಾಗಿದೆ. ಇದರಲ್ಲಿ 722 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ