ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ ಮತ್ತೆ ಏರಿಕೆ, ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ
Team Udayavani, May 10, 2021, 9:50 PM IST
ಮಂಗಳೂರು/ಉಡುಪಿ : ದ.ಕ. ಜಿಲ್ಲೆಯಲ್ಲಿ ಸೋಮವಾರ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪಮಟ್ಟಿನ ಇಳಿಮುಖವಾಗಿದ್ದರೂ ಸಾವಿರಕ್ಕಿಂತ ಮೇಲೆ ಇದೆ. ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಸೋಮವಾರ 1,175 ಮಂದಿಗೆ ಸೋಂಕು ದೃಢಪಟ್ಟರೆ 5 ಮಂದಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಮತ್ತು ಮೃತಪಟ್ಟವರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದರೆ ಹೆಚ್ಚು ಮಂದಿ ಗುಣಮುಖರಾಗಿರುವುದು ಸಮಾಧಾನ ತಂದಿದೆ. 885 ಮಂದಿಗೆ ಸೋಂಕು ದೃಢಪಟ್ಟಿದ್ದರೆ 642 ಮಂದಿ ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. 919 ಮಂದಿಗೆ ಸೋಂಕು ದೃಢಪಟ್ಟಿದ್ದರೆ 825 ಮಂದಿ ಗುಣಮುಖರಾಗಿದ್ದಾರೆ. ಕೊಡಗಿನಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚೇನೂ ಬದಲಾಗದಿದ್ದರೂ ಮೃತಪಟ್ಟವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಸೋಮವಾಗರ 653 ಮಂದಿಗೆ ಸೋಂಕು ದೃಢಪಟ್ಟಿದ್ದರೆ 10 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ :3ನೇ ಅಲೆ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್ ಬೆಡ್ ವ್ಯವಸ್ಥೆಗೆ ಸರಕಾರ ನಿರ್ಧಾರ
31 ಕಡೆ ಕಂಟೈನ್ ಮೆಂಟ್ ವಲಯ
ದ.ಕ. ಜಿಲ್ಲೆಯಲ್ಲಿ ಸೋಮವಾರ 31 ಕಡೆ ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ 11, ಬಂಟ್ವಾಳ ತಾಲೂಕಿನಲ್ಲಿ 9, ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ತಲಾ 4, ಬೆಳ್ತಂಗಡಿ ತಾಲೂಕಿನ 3 ಕಡೆಗಳನ್ನು ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು