ಭಾರತ್ ಬಂದ್: ಸಾರಿಗೆ ಸಿಬ್ಬಂದಿಗೆ ಡಿಸಿಎಂ ಲಕ್ಷ್ಮಣ ಸವದಿ ಎಚ್ಚರಿಕೆ
Team Udayavani, Jan 7, 2020, 4:13 PM IST
ಬೆಂಗಳೂರು: ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ಕೊಟ್ಟಿರುವ ಭಾರತ್ ಬಂದ್ ನಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಎಂದಿನಂತೆ ಕಾರ್ಯ ನಿರ್ವಹಿಸಬೇಕು ಎಂದು ಸಿಬ್ಬಂದಿಗೆ ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ.
ಈ ರೀತಿಯ ಬಂದ್ ಗಳಿಂದ ಸರ್ಕಾರಿ ಸಂಸ್ಥೆಗಳಿಗೆ ನಷ್ಟ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸಿಬ್ಬಂದಿಗಳು ಈ ಬಂದ್ ನಲ್ಲಿ ಭಾಗವಹಿಸಬಾರದು ಮತ್ತು ಈ ಸಂಸ್ಥೆಗಳ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸಬಾರದು ಎಂದು ಸವದಿ ಸೂಚಿಸಿದ್ದಾರೆ.
ಬಂದ್ -ಮುಷ್ಕರದಲ್ಲಿ ಭಾಗವಹಿಸುವ ಸರ್ಕಾರಿ ಆಸ್ತಿ- ಪಾಸ್ತಿಗಳಿಗೆ ಅದರಲ್ಲೂ ವಿಶೇಷವಾಗಿ ಸಾರಿಗೆ ಬಸ್ಸುಗಳಿಗೆ ಹಾನಿ ಉಂಟುಮಾಡುವ ದುಷ್ಕೃತ್ಯಕ್ಕೆ ಮುಂದಾದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಸವದಿ ಎಚ್ಚರಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444