ಡಿಸಿಎಂ ಕೌತುಕ ಬಿಎಸ್‌ವೈ ಜಾಣ ನಡೆ

ಉಮೇಶ್‌ ಕತ್ತಿಗೆ ಸಚಿವ ಸ್ಥಾನದ ಭರವಸೆ; ಮುದುಡಿದ ಶ್ರೀರಾಮುಲು ಡಿಸಿಎಂ ಕನಸು

Team Udayavani, Jan 30, 2020, 7:00 AM IST

jan-26

ಬೆಂಗಳೂರು/ಬೆಳಗಾವಿ: “ಹೊಸದಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವುದಿಲ್ಲ’ ಎಂದು ಸಂಪುಟ ವಿಸ್ತರಣೆ ಸಂಬಂಧ ಚರ್ಚೆಗೆ ದಿಲ್ಲಿಗೆ ಹೊರಡುವ ಮುನ್ನ ಹೇಳಿಕೆ ನೀಡುವ ಮೂಲಕ ಸಿಎಂ ಯಡಿಯೂರಪ್ಪ ಪಕ್ಷದೊಳಗೆ ಹೊಸ ಸಂಚಲನ ಮೂಡಿಸಿದ್ದಾರೆ.

ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹಿರಿಯ ಶಾಸಕ ಉಮೇಶ್‌ ಕತ್ತಿ ಅವರು ಸಚಿವರಾಗಲಿದ್ದಾರೆ ಎಂಬ ಹೇಳಿಕೆ ನೀಡಿ ಮೂಲ ಬಿಜೆಪಿಯವರಿಗೂ ಸಂಪುಟದಲ್ಲಿ ಸ್ಥಾನ ನೀಡುವ ಭರವಸೆ ಮೂಡಿಸಿದ್ದಾರೆ. ಹೊಸದಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಇಲ್ಲ ಎಂದು ಹೇಳುವ ಮೂಲಕ ಆ ಸ್ಥಾನದ ಆಕಾಂಕ್ಷಿಗಳಾದ ರಮೇಶ್‌ ಜಾರಕಿ ಹೊಳಿ, ಬಿ. ಶ್ರೀರಾಮುಲು ಅವರು ಉಪ ಮುಖ್ಯಮಂತ್ರಿ ಸ್ಥಾನದ ಆಸೆ ಕೈಬಿಡುವುದು ಸೂಕ್ತ ಎಂಬ ಸಂದೇಶ ನೀಡಿದ್ದಾರೆ. ಜತೆಗೆ ಹಾಲಿ ಮೂರು ಉಪಮುಖ್ಯಮಂತ್ರಿ ಸ್ಥಾನವನ್ನು ಹಿಂಪಡೆಯುವ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಂದಿಷ್ಟು ಮಹತ್ವದ ಸುಳಿವು
ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡಲಾಗುವುದು. ವರಿಷ್ಠರು ಬಯಸಿದರೆ ಒಂದಿಬ್ಬರನ್ನು ಕೈಬಿಡಬಹುದು ಎಂಬ ಸೂಚನೆ ನೀಡಿದ್ದಾರೆ. ಮೊದಲಿಗೆ ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂದು ಸ್ಪಷ್ಟಪಡಿಸಿದ ಯಡಿಯೂರಪ್ಪ ಈಗ ಉಪಚುನಾವಣೆಯಲ್ಲಿ ಗೆದ್ದವರ ಪೈಕಿ ಕೆಲವರಿಗೆ ಸಚಿವಗಿರಿ ಅನುಮಾನ ಎಂಬು ದನ್ನೂ ಖಾತರಿಪಡಿಸಿದಂತಿದೆ.

ಕೊನೆಗೂ ಸಿಎಂ ಗುರುವಾರ ದಿಲ್ಲಿ ಪ್ರವಾಸಕ್ಕೆ ಅಣಿಯಾಗುವ ಮೂಲಕ ಸಂಪುಟ ವಿಸ್ತರಣೆ ಕಸರತ್ತು ನಿರ್ಣಾಯಕ ಹಂತ ತಲುಪಿದಂತಿದೆ. ವರಿಷ್ಠರ ಒಪ್ಪಿಗೆ ಸಿಕ್ಕಿದರೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಲಿದೆ. ಶುಕ್ರವಾರ ದಿಲ್ಲಿಯಿಂದ ಬೆಂಗಳೂರಿಗೆ ಹಿಂದಿರುಗುವ ಸಾಧ್ಯತೆ ಇದೆ. ಉಪಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಅವರು ದಿಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುವ ಕುತೂಹಲ ಮೂಡಿದೆ.

2-3 ದಿನಗಳಲ್ಲಿ ಸಂಪುಟ ವಿಸ್ತರಣೆ
ಗುರುವಾರ ದಿಲ್ಲಿಗೆ ತೆರಳಿ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , ಶಾ ಅವರನ್ನು ಭೇಟಿಯಾಗಿ ಚರ್ಚಿಸಲಾಗುವುದು. ಇನ್ನು 2-3 ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು. ವರಿಷ್ಠರ ಜತೆಗೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಅವರು ಗುರು ವಾರ ಬೆಳಗ್ಗೆ 11.45ಕ್ಕೆ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದು, ಅಪರಾಹ್ನ 2.45ಕ್ಕೆ ತಲುಪುವ ಸಾಧ್ಯತೆ ಇದೆ. ಅನಂತರ  ವರಿಷ್ಠರ ಭೇಟಿಗೆ ಮುಂದಾಗ ಬಹುದು. ಕೇಂದ್ರ ಬಜೆಟ್‌ ಫೆ. 1ಕ್ಕೆ ಮಂಡನೆಯಾಗಲಿರುವುದರಿಂದ ಕೇಂದ್ರ ಸಚಿವರು ಕೂಡ ಬಜೆಟ್‌ ಸಿದ್ಧತಾ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಇನ್ನೊಂದೆಡೆ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ನಾಯಕರು ತೊಡಗಿಸಿಕೊಂಡಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ಸಾಧ್ಯವೇ ಎಂಬ ಕುತೂಹಲವೂ ಮೂಡಿದೆ.

ಗೆದ್ದವರಿಗೆ ಸ್ಥಾನ: ವಿರೋಧವಿಲ್ಲ !
ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿಗಳು ವರಿಷ್ಠರೊಂದಿಗೆ ಚರ್ಚೆ ನಡೆಸಿರುವ ಸಾಧ್ಯತೆ ಬಹಳ ಕಡಿಮೆ. ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ವರಿಷ್ಠರಿಂದ ಯಾವುದೇ ರೀತಿಯ ಆಕ್ಷೇಪವಿದ್ದಂತಿಲ್ಲ. ಗೆದ್ದ 11 ಮಂದಿಗೂ ಸಚಿವ ಸ್ಥಾನ ನೀಡಬಹುದು. ಅವಕಾಶವಿದ್ದರೆ ಒಂದಿಬ್ಬರ ಮನವೊಲಿಸಿ ಅವರಿಗೆ ಪ್ರಮುಖ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಕಲ್ಪಿಸುವ ಬಗ್ಗೆ ಚಿಂತಿಸಬಹುದು. ಆ ಸ್ಥಾನಗಳನ್ನು ಮೂಲ ಬಿಜೆಪಿಗರಿಗೆ ನೀಡಿ ಸಮತೋಲನ ಸಾಧಿಸಲು ಪ್ರಯತ್ನಿಸಬಹುದು ಎಂಬ ಸಂದೇಶ ನೀಡಿದ್ದರು. ಅದರಂತೆ ಪಟ್ಟಿ ಸಿದ್ಧಪಡಿಸಿಕೊಂಡು ಸಲ್ಲಿಸಿದರೆ ವರಿಷ್ಠರು ಪರಿಗಣಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ದಿಲ್ಲಿ ಚುನಾವಣೆ ಬಳಿಕ ವಿಸ್ತರಣೆ
ಈ ಮಧ್ಯೆ ಶಾಸಕ ನಾರಾಯಣಗೌಡ, ದಿಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ವರಿಷ್ಠರು ನಿರತರಾಗಿದ್ದು, ಅದು ಪೂರ್ಣಗೊಂಡ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ. ವಿಧಾನಸೌಧದಲ್ಲಿ ಗುರುವಾರ ಪ್ರತಿಕ್ರಿಯಿಸಿದ ಅವರು, ಸದ್ಯದಲ್ಲೇ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದ್ದು, ಬಿಜೆಪಿಗೆ ಬಂದ 17 ಮಂದಿಗೂ ಒಳ್ಳೆಯದೇ ಆಗಲಿದೆ. ಸಂಪುಟ ವಿಸ್ತರಣೆ ವಿಳಂಬಕ್ಕೆ ನಾನಾ ಕಾರಣಗಳಿವೆ. ಮೊದಲಿಗೆ ಸಂಕ್ರಾಂತಿ ಹಬ್ಬ ಎದುರಾಯಿತು. ಅನಂತರ ದಿಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಚುನಾವಣೆ ಬಳಿಕ ಯಡಿಯೂರಪ್ಪ ಅವರು ದಿಲ್ಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.