ಅನೈತಿಕ ಸಂಬಂಧ: ಫ್ಲ್ಯಾಟ್ ನೊಳಗೆ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ, ಆರೋಪಿ ಪರಾರಿ
ಆರೋಪಿಯನ್ನು ಅಮಾನ್ ಎಂದು ಗುರುತಿಸಲಾಗಿದ್ದು, ಈತ ನಾಪತ್ತೆಯಾಗಿದ್ದಾನೆ
Team Udayavani, Feb 19, 2022, 12:03 PM IST
ನವದೆಹಲಿ: ಯುವತಿಯ ಕತ್ತು ಹಿಸುಕಿ ಕೊಲೆ ಮಾಡಲಾದ ಅರೆ ಬೆತ್ತಲೆ ಶವ ದೆಹಲಿಯ ಬುರಾರಿ ಪ್ರದೇಶದಲ್ಲಿ ಶುಕ್ರವಾರ (ಫೆ.19) ಪತ್ತೆಯಾಗಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ ವಿವಾದ: ಶಿವಮೊಗ್ಗದಲ್ಲಿ 58 ವಿದ್ಯಾರ್ಥಿಗಳು ಸಸ್ಪೆಂಡ್ ಆಗಿಲ್ಲ; ಡಿಸಿ ಗರಂ
ಬುರಾರಿಯ ಕೌಶಿಕ್ ಎನ್ ಕ್ಲೇವ್ ಪ್ರದೇಶದಲ್ಲಿ ನಡೆದ ಈ ಘಟನೆಯ ಆರೋಪಿಯನ್ನು ಅಮಾನ್ ಎಂದು ಗುರುತಿಸಲಾಗಿದ್ದು, ಈತ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ವಿವರ ನೀಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ತನ್ನ ಸಂಬಂಧಿಯನ್ನು ಭೇಟಿಯಾಗುವುದಾಗಿ ಆರೋಪಿಯ ಪತ್ನಿ ಮನೆಯಿಂದ ಹೊರ ಹೋದ ಮೇಲೆ, ಅಮಾನ್ ಈ ಯುವತಿಯನ್ನು ಮನೆಗೆ ಆಹ್ವಾನಿಸಿದ್ದ. ಪತ್ನಿ ಮನೆಗೆ ಬಂದಾಗ, ಯುವತಿಯ ಶವ ಬೆಡ್ ಮೇಲೆ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ಆರಂಭಿಸಿರುವ ಪೊಲೀಸರು, ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದು, ಪ್ರಾಥಮಿಕ ತನಿಖೆ ಪ್ರಕಾರ, ಕೌಶಿಕ್ ಎನ್ ಕ್ಲೇವ್ ನ ಫ್ಲ್ಯಾಟ್ ನಲ್ಲಿ ಅಮಾನ್ ಮತ್ತು ಪತ್ನಿ ಪ್ರಿಯಾಂಕಾ ರಾವತ್ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಅಮಾನ್ ಪತ್ನಿ ರಾತ್ರಿ 8ಗಂಟೆಗೆ ಫ್ಲ್ಯಾಟ್ ಗೆ ಬಂದಾಗ ಅರೆನಗ್ನ ಸ್ಥಿತಿಯಲ್ಲಿದ್ದ ಯುವತಿಯ ಶವ ಪತ್ತೆಯಾಗಿತ್ತು. ಕೂಡಲೇ ಪ್ರಿಯಾಂಕಾ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಯುವತಿಯ ಜೊತೆ ಅಮಾನ್ ದೀರ್ಘಕಾಲದಿಂದ ಸಂಬಂಧ ಹೊಂದಿದ್ದು, ಯಾವ ಕಾರಣದಿಂದ ಯುವತಿಯನ್ನು ಕೊಲೆ ಮಾಡಿದ್ದಾನೆ ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಏತನ್ಮಧ್ಯೆ ಅಮಾನ್ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.