ಪ್ರತಿ ಮೂರು ಜಿಲ್ಲೆಗೆ ಒಂದು ಎಸ್ ಡಿಆರ್ ಎಫ್ ಪಡೆ ನಿಯೋಜನೆ: ಆರಗ ಜ್ಞಾನೇಂದ್ರ

Team Udayavani, Nov 7, 2022, 12:12 PM IST

ಪ್ರತಿ ಮೂರು ಜಿಲ್ಲೆಗೆ ಒಂದು ಎಸ್ ಡಿಆರ್ ಎಫ್ ಪಡೆ ನಿಯೋಜನೆ: ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ವಿಪತ್ತು ಹಾಗೂ ತುರ್ತು ಸೇವೆಗಳ ಪಡೆಯನ್ನು ಇನ್ನಷ್ಟು ಹೆಚ್ಚು ಬಲಪಡಿಸಲು ಪ್ರತಿ ಮೂರು ಜಿಲ್ಲೆಗಳಿಗೆ ಒಂದರಂತೆ ಎಸ್ ಡಿಆರ್ ಎಫ್ ಪಡೆಗಳನ್ನು ನಿಯೋಜಿಸಲು ರಾಜ್ಯ ಸರಕಾರ ಯೋಜನೆಯನ್ನು ರೂಪಿಸಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ರಾಜ್ಯ ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಾಗೂ ಎಸ್ ಡಿಆರ್ ಎಫ್ ನಿರ್ದೇಶನಾಲಯ ವತಿಯಿಂದ ರಾಜಭವನದಲ್ಲಿ ಆಯೋಜಿಸಲಾದ ಜೀವದ ಹಂಗನ್ನು ತೊರೆದು ಸಂಕಷ್ಟಕ್ಕೆ ಒಳಗಾದ ಜನತೆಯನ್ನು ರಕ್ಷಿಸಿದ ಹಾಗೂ ವಿಶಿಷ್ಟ ಸೇವೆಗೈದ ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಕೃತಿಕ ಸಂಕಷ್ಟದ ಸಮಯದಲ್ಲಿ ಕ್ಷಿಪ್ರವಾಗಿ ಸೇವೆ ಸಲ್ಲಿಸಲು ಅನುಕೂಲವಾಗಲು ಸಹಾಯಕವಾಗುವಂತೆ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ನಾಗರಿಕರ ಸುರಕ್ಷತೆ ಹಾಗೂ ಆಸ್ತಿಪಾಸ್ತಿಗಳು ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮಾಡಲು ಸರಕಾರ ಬದ್ಧವಾಗಿದೆ ಎಂದರು.

ಹಲವಾರು ವರ್ಷಗಳ ನಂತರ, ರಾಜ್ಯ ಅಗ್ನಿಶಾಮಕ ದಳವನ್ನು ಬಲಪಡಿಸಲು ಸುಮಾರು 1547 ವಿವಿಧ ದರ್ಜೆಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಹಾಗೂ ತರಬೇತಿ ನೀಡಲಾಗುತ್ತಿದೆ ಎಂದ ಸಚಿವರು, ಅವಘಡದ ಸಂದರ್ಭದಲ್ಲಿ ಅತ್ಯಂತ ಎತ್ತರದ ಕಟ್ಟಡವನ್ನೂ ತಲುಪಲು ಅನುಕೂಲವಾಗುವಂತೆ, ಸುಮಾರು 30 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಏರಿಯಲ್ ಲ್ಯಾಡರನ್ನು ಇಲಾಖೆಗೆ ಸಮರ್ಪಿಸಲಾಗಿದೆ ಎಂದರು.

ಸಮಾರಂಭದಲ್ಲಿ ಸುಮಾರು 61 ಸಿಬ್ಬಂದಿಗಳಿಗೆ ಪದಕವನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಮರ ಕುಮಾರ್ ಪಾಂಡೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.