ಅತೃಪ್ತರ ಅರ್ಜಿ ಇಂದು ವಿಚಾರಣೆ

Team Udayavani, Jul 16, 2019, 6:10 AM IST

ಹೊಸದಿಲ್ಲಿ: ಕರ್ನಾಟಕದ 10 ಮಂದಿ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಅಂಗೀಕಾರದ ಬಗ್ಗೆ ನಿರ್ಧಾರ ಕೈಗೊಳ್ಳಲು ಸ್ಪೀಕರ್‌ ರಮೇಶ್‌ ಕುಮಾರ್‌ ವಿಳಂಬ ಮಾಡುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ದೂರಿನ ವಿಚಾರಣೆ ಮಂಗಳವಾರ ನಡೆಯಲಿದ್ದು, ಇವರೊಂದಿಗೆ ಮುಂಬಯಿ ಸೇರಿರುವ ಇನ್ನೂ ಐವರು ಶಾಸಕರು ಕೂಡ ನೀಡಿದ ದೂರನ್ನು ಮಂಗಳವಾರವೇ ವಿಚಾರಣೆ ನಡೆಸಲು ನ್ಯಾಯಾಲಯ ಪರಿಗಣಿಸಿದೆ.

ಆನಂದ್‌ ಸಿಂಗ್‌, ಕೆ. ಸುಧಾಕರ್‌, ಎಂ.ಟಿ.ಬಿ. ನಾಗರಾಜ್‌, ಮುನಿರತ್ನ ಮತ್ತು ರೋಷನ್‌ ಬೇಗ್‌ ದೂರನ್ನು ಉಳಿದ 10 ಮಂದಿ ಶಾಸಕರ ದೂರಿನ ಜತೆಗೆ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾ| ರಂಜನ್‌ ಗೊಗೊಯ್‌ ನೇತೃತ್ವದ ಪೀಠಕ್ಕೆ ವಕೀಲ ಮುಕುಲ್‌ ರೋಹrಗಿ ಮನವಿ ಮಾಡಿದರು. ಇದಕ್ಕೆ ಸೋಮವಾರ ಸುಪ್ರೀಂ ಕೋರ್ಟ್‌ ಸಮ್ಮತಿಸಿ, ಮಂಗಳವಾರ ವಿಚಾರಣೆ ನಡೆಸಲು ನಿರ್ಧರಿಸಿದೆ. 10 ಶಾಸಕರ ದೂರಿನ ಕುರಿತು ಶುಕ್ರ ವಾರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಮಂಗಳವಾರಕ್ಕೆ ವಿಚಾರಣೆ ಮುಂದೂಡಿತ್ತು. ಅಲ್ಲದೆ, ಅಲ್ಲಿಯ ವರೆಗೆ ಸ್ಪೀಕರ್‌ ಯಥಾಸ್ಥಿತಿ ಕಾಯ್ದು ಕೊಳ್ಳಬೇಕು ಎಂದೂ ಆದೇಶಿಸಿತ್ತು.

ವಿಶ್ವಾಸಮತಕ್ಕೆ ಅತೃಪ್ತರು ಇಲ್ಲ?
ಗುರುವಾರ ಬೆಂಗಳೂರಿಗೆ ಅತೃಪ್ತರು ಆಗಮಿಸದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮುಂಬಯಿಯಲ್ಲಿರುವ ಶಾಸಕರು ತಮ್ಮ ರಾಜೀನಾಮೆಗೆ ಬದ್ಧವಾಗಿದ್ದಾರೆ. ಹೀಗಾಗಿ ಗುರುವಾರ ಬೆಂಗಳೂರಿಗೆ ಹೋಗಬಾರದು ಎಂದು ನಿರ್ಧರಿಸಿ ದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖಂಡರ ಭೇಟಿಗೆ ನಕಾರ
ನಾವು ಯಾವುದೇ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಲು ಬಯ ಸುವುದಿಲ್ಲ. ಯಾರನ್ನೂ ಹೊಟೇಲ್‌ ಒಳಗೆ ಬಿಡಬೇಡಿ ಎಂದು ಅತೃಪ್ತ ಶಾಸಕರು ಮುಂಬಯಿ ಪೊಲೀಸರಿಗೆ ಪತ್ರ ಬರೆದು ವಿನಂತಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ