ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: 17 ಮಂದಿಯ ಮೇಲೆ ಎಫ್ಐಆರ್, ನಾಲ್ವರ ಬಂಧನ
Team Udayavani, Aug 13, 2020, 11:54 AM IST
ಬೆಂಗಳೂರು: ಆಕ್ಷೇಪಾರ್ಹ ಫೇಸ್ ಬುಕ್ ಪೋಸ್ಟ್ ಒಂದರ ಕುರಿತಾಗಿ ಮಂಗಳವಾರ ರಾತ್ರಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಗಳಲ್ಲಿ ನಡೆದ ಗಲಭೆಯ ಸಂಬಂಧ ಈವರೆಗೆ ಒಟ್ಟು 9 ಎಫ್ ಐಆರ್ ದಾಖಲಾಗಿದೆ. ಒಟ್ಟು 17 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.
ಡಿಜೆ ಹಳ್ಳಿ ಠಾಣೆಯಲ್ಲಿ ಆರು ಮತ್ತು ಕೆಜಿ ಹಳ್ಳಿ ಠಾಣೆಯಲ್ಲಿ ಮೂರು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಎ1 ಅಬ್ಬಾಸ್, ಎ2 ಫಿರೋಜ್, ಎ3ಹಬೀಬ್, ಎ4 ಪೀರ್ ಬಾಷಾ ಸೇರಿದಂತೆ 17 ಮಂದಿಯನ್ನು ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದೆ.
ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 15ರ ಬೆಳಿಗ್ಗೆ ಆರು ಗಂಟೆಯವರೆಗೆ ಸೆಕ್ಷನ್ 144 ಮುಂದುವರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಸುಮಾರು 600ಕ್ಕಿಂತ 800 ಮಂದಿ ಜನರು ಮಾರಾಕಾಸ್ತ್ರಗಳಿಂದ ಠಾಣೆಗೆ ನುಗ್ಗಿ, ಫೇಸ್ ಬುಕ್ ಪೋಸ್ಟ್ ಮಾಡಿದ್ದ ನವೀನ್ ನನ್ನು ಪೊಲೀಸರು ಸಾಯಿಸಲು ಬಿಡುತ್ತಿಲ್ಲ, ಹಾಗಾಗಿ ಕೈಗೆ ಸಿಕ್ಕ ಪೊಲೀಸರನ್ನು ಕೊಚ್ಚಿ ಹಾಕಿ ಎಂದು ಬೆದರಿಕೆ ಹಾಕಿದ್ದರು ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.
ಇದನ್ನೂ ಓದಿ: ಮಹಮ್ಮದ್ ಪೈಗಂಬರರನ್ನು ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ನೋವಾಗಿದೆ: ಜಮೀರ್ ಅಹಮದ್
ಇದನ್ನೂ ಓದಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಆಗಸ್ಟ್ 15ರವರೆಗೂ ಸೆಕ್ಷನ್ 144 ಜಾರಿ
ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೋಮಿಗೆ ಸೇರಿದ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದ್ದರು. ಶಾಸಕರ ಮನೆ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆ ವೇಳೆ ನೂರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಗುಂಪು ಮಾರಾಕಾಸ್ತ್ರಗಳನ್ನು ಹಿಡಿದು ಹಿಂಸಾಚಾರ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ