ಬಿಜೆಪಿಗೆ ಸಿದ್ಧಾಂತವಿಲ್ಲ: ಡಿಕೆಶಿ
Team Udayavani, Dec 1, 2022, 9:30 PM IST
ಬೆಂಗಳೂರು: ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾನಾಡಿ, ಬಿಜೆಪಿಗೆ ಯಾವಾಗ ಯಾವ ಸಿದ್ಧಾಂತ ಇತ್ತು? ಅವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ಭಾವನೆಗೂ, ಬದುಕಿಗೂ ವ್ಯತ್ಯಾಸವಿದೆ. ಜನರ ಹೊಟ್ಟೆ ತುಂಬಿಸಿ, ಅವರಿಗೆ ಉದ್ಯೋಗ ಕೊಟ್ಟು, ಬದುಕು ಕಟ್ಟಿಕೊಳ್ಳುವ ಅವಕಾಶ ನೀಡಬೇಕು ಎಂಬುದು ಅವರಲ್ಲಿಲ್ಲ. ಅವರಿಗೇನಿದ್ದರೂ ಭಾವನೆಗಳ ವಿಚಾರದ ಮೇಲಷ್ಟೇ ಆಸಕ್ತಿ ಎಂದರು.
ಬಿಜೆಪಿಗೆ ಸಾಲು ಸಾಲು ರೌಡಿ ಶೀಟರ್‌ಗಳು ಸೇರ್ಪಡೆಯಾಗುತ್ತಿದ್ದಾರೆ. ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ.-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ