ಅಧಿಕಾರ ಕೇಂದ್ರವಾದ ಡಿಕೆಶಿ

ಕಾಂಗ್ರೆಸ್‌, ಜೆಡಿಎಸ್‌ ನಾಯಕರಿಂದ ಧೈರ್ಯ

Team Udayavani, Oct 30, 2019, 6:38 AM IST

r-36

ಡಿಕೆಶಿ ಜತೆಗೆ ಎಚ್‌. ಕೆ. ಪಾಟೀಲ್‌ ಮಾತುಕತೆ ನಡೆಸಿದರು.

ಬೆಂಗಳೂರು: ಜಾಮೀನಿನ ಮೇಲೆ ಬಿಡುಗಡೆಯಾಗಿ ಬೆಂಗಳೂರಿಗೆ ಮರಳಿದ ದಿನದಿಂದಲೇ ರಾಜಕೀಯವಾಗಿ ಸಕ್ರಿಯವಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಈಗ “ಅಧಿಕಾರ ಕೇಂದ್ರ’ವಾಗಿ ಮಾರ್ಪಟ್ಟಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮಂಗಳವಾರ ಅವರನ್ನು ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಪ್ರಮುಖ ನಾಯಕರು ಭೇಟಿ ಮಾಡಿ ಚರ್ಚಿಸಿದ್ದಾರೆ, ಧೈರ್ಯ ತುಂಬಿದ್ದಾರೆ. ಕಾಂಗ್ರೆಸ್‌ನ ಘಟಾನುಘಟಿ ನಾಯಕರಾದ ಎಚ್‌.ಕೆ. ಪಾಟೀಲ್‌, ರಾಮಲಿಂಗಾ ರೆಡ್ಡಿ, ಕೆ.ಬಿ. ಕೋಳಿವಾಡ, ಮಾರ್ಗರೆಟ್‌ ಆಳ್ವ, ರಾಣಿ ಸತೀಶ್‌, ಶಾಸಕಿ ಸೌಮ್ಯಾ ರೆಡ್ಡಿ, ಜೆಡಿಎಸ್‌ನ ಮಾಜಿ ಸಚಿವ ಡಿ.ಸಿ. ತಮ್ಮಣ್ಣ, ಶಾಸಕ ಶಿವಲಿಂಗೇಗೌಡ, ಅನರ್ಹಗೊಂಡಿರುವ ಶಾಸಕ ನಾರಾಯಣ ಗೌಡ ಭೇಟಿಯಾದವರಲ್ಲಿ ಸೇರಿದ್ದಾರೆ.

ರಾಜ್ಯ ಕಾಂಗ್ರೆಸ್‌ ನಾಯಕತ್ವವನ್ನು ವಹಿಸಿ ಕೊಳ್ಳು ವಂತೆ ಹಲವು ನಾಯಕರು ಡಿಕೆಶಿಗೆ ಮನವಿ ಮಾಡಿದ್ದಾರೆ ಎಂದೂ ಹೇಳಲಾಗಿದೆ. ಇದಕ್ಕೆ ಪೂರಕ ವಾಗಿ ಕೆಪಿಸಿಸಿ ಹೊಣೆಯನ್ನು ಶಿವಕುಮಾರ್‌ಗೆ ವಹಿ ಸುವ ಮೂಲಕ ಮೂಲ ಕಾಂಗ್ರೆಸಿಗರಲ್ಲಿ ಶಕ್ತಿ, ಧೈರ್ಯ ತುಂಬುವ ಪ್ರಸ್ತಾವನೆಯೊಂದನ್ನು ಹೈಕಮಾಂಡ್‌ ಮುಂದಿಡಲು ಹಿರಿಯ ನಾಯಕರು ಮುಂದಾಗಿದ್ದಾರೆ. ಪಕ್ಷದಲ್ಲಿ ಬಿಗಿಪಟ್ಟನ್ನು ಮುಂದುವರಿಸಿರುವ ಸಿದ್ದರಾಮಯ್ಯ ಅವರನ್ನು ಮಟ್ಟಹಾಕುವ ಉದ್ದೇಶವಿದೆ ಎನ್ನಲಾಗಿದೆ.

ಡಿಕೆಶಿ ತಿಹಾರ್‌ ಜೈಲಿನಲ್ಲಿರುವಾಗಲೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಈಗ ರಾಜ್ಯ ಮತ್ತು ಕೇಂದ್ರ ನಾಯಕರು ಭೇಟಿ ಮಾಡು ತ್ತಿರುವುದು ಕಾಂಗ್ರೆಸ್‌ನಲ್ಲಿ ಮತ್ತೆ ಡಿ.ಕೆ. ಶಿವಕುಮಾರ್‌ ಪ್ರಭಾವಶಾಲಿಯಾಗುವ ಲಕ್ಷಣಗಳಿಗೆ ಸಾಕ್ಷಿ ಎಂಬಂತಿದೆ. ಹಳೆ ಮೈಸೂರು ಭಾಗದ ಕಾಂಗ್ರೆಸ್‌ ನಾಯಕರು ಡಿಕೆಶಿ ಅವರನ್ನು ಭೇಟಿಯಾಗುತ್ತಲೇ ಇದ್ದಾರೆ. ಇದು ಕಾಂಗ್ರೆಸ್‌ ವಲಯದಲ್ಲಿ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಜತೆಗೆ ಡಿಕೆಶಿ ಅವರು ಸಿದ್ಧಗಂಗಾ ಮಠ ಸಹಿತ ಹಲವೆಡೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಸ್ವ ಕ್ಷೇತ್ರ ಕನಕಪುರಕ್ಕೆ ಹೋಗಿ ಕಬ್ಟಾಳಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದು, ಅಲ್ಲಿ ಅದ್ದೂರಿ ಸ್ವಾಗತ ದೊರೆತಿದೆ.

ಸಿದ್ದುಗೆ ಎದುರಾಗಿ ಡಿಕೆಶಿ?
ವಿಪಕ್ಷ ನಾಯಕ ಸ್ಥಾನ ಸಿದ್ದರಾಮಯ್ಯ ಪಾಲಾಗಿರುವುದರಿಂದ ಮತ್ತೂಂದು ಮಹತ್ವದ ಹುದ್ದೆ ಕೆಪಿಸಿಸಿ ಅಧ್ಯಕ್ಷಗಿರಿಯನ್ನು ಡಿಕೆಶಿಗೆ ನೀಡಿದರೆ ಪಕ್ಷಕ್ಕೆ ಶಕ್ತಿ ಬರುತ್ತದೆ ಎಂಬ ವಾದದೊಂದಿಗೆ ಹೈಕಮಾಂಡ್‌ ಭೇಟಿಗೆ ಹಿರಿಯ ನಾಯಕರು ಸಜ್ಜಾಗಿದ್ದಾರೆ. ಕೆ.ಎಚ್‌. ಮುನಿಯಪ್ಪ, ಡಾ| ಜಿ. ಪರಮೇಶ್ವರ್‌, ಎಚ್‌.ಕೆ. ಪಾಟೀಲ್‌, ರಾಮಲಿಂಗಾ ರೆಡ್ಡಿ ಅವರ ತಂಡ ಈ ಪ್ರಯತ್ನಕ್ಕೆ ಕೈ ಹಾಕಿದ್ದು, ಬಿ.ಕೆ. ಹರಿಪ್ರಸಾದ್‌, ಅಹ್ಮದ್‌ ಪಟೇಲ್‌, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರ ಪರೋಕ್ಷ ಕುಮ್ಮಕ್ಕು ಇದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ನಾಯಕರು. ಅವರು ಯಾವಾಗಲೂ ಪಕ್ಷದಲ್ಲಿ ಸ್ಟ್ರಾಂಗೇ. ದಿಲ್ಲಿಯಲ್ಲಿ ಬಂಧನ ಮಾಡಿದಾಗ ಆಸ್ಪತ್ರೆಗೆ ಹೋಗಿದ್ದೆ. ಮೂರು ದಿನಗಳಿಂದ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಭೇಟಿಯಾಗಿದ್ದೇನೆ. ಯಾವುದೇ ರಾಜಕೀಯ ಮಾತನಾಡಿಲ್ಲ.
– ರಾಮಲಿಂಗಾ ರೆಡ್ಡಿ , ಮಾಜಿ ಸಚಿ

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.