ಕಾಂಗ್ರೇಸ್ ಸಂಸದ ಡಿ.ಕೆ. ಸುರೇಶ್ ಗೂ ಕೋವಿಡ್ ಸೋಂಕು ದೃಢ!
Team Udayavani, Oct 6, 2020, 4:51 PM IST
ಬೆಂಗಳೂರು : ಕಾಂಗ್ರೇಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಕುರಿತು ಡಿ.ಕೆ. ಸುರೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಸೋಮವಾರವಷ್ಟೇ ಸಿಬಿಐ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಮನೆ ಮೇಲೆ ದಾಳಿ ನಡೆಸಿದ್ದರು. ಆದರೆ ಇಂದು ಸುರೇಶ್ ಅವರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಡಿ.ಕೆ. ಸುರೇಶ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ತನಗೆ ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ನನ್ನ ಜೊತೆ ಸಂಪರ್ಕದಲ್ಲಿ ಇದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
ಸೋಮವಾರ ಸಿಬಿಐ ದಾಳಿ ನಡೆದ ಸಂದರ್ಭ ಡಿ.ಕೆ. ಸುರೇಶ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು ಇಂದು ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಬೆಂಬಲಿಗರಲ್ಲಿ ಆತಂಕ ಮನೆಮಾಡಿದೆ.
ಈ ಹಿಂದೆ ಡಿ.ಕೆ. ಶಿವಕುಮಾರ್ ಅವರಲ್ಲೂ ಕೋವಿಡ್ ಪಾಸಿಟಿವ್ ವರದಿ ಬಂದಿದ್ದು ಅವರು ಗುಣಮುಖರಾಗಿದ್ದಾರೆ ಆದರೆ ಮಂಗಳವಾರ ಸಹೋದರ ಅವರಲ್ಲಿ ಸೋಂಕು ದೃಢಪಟ್ಟಿದೆ.
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020