ಜೆಡಿಎಸ್ ಸಿದ್ಧಾಂತ ಏನಿದೆಯೋ ಗೊತ್ತಿಲ್ಲ: ದಿನೇಶ್ ಗುಂಡೂರಾವ್
Team Udayavani, Oct 30, 2019, 3:48 PM IST
ಬೆಂಗಳೂರು: ಜೆಡಿಎಸ್ ಯಾವತ್ತೂ ಸ್ವಂತವಾಗಿ ಅಧಿಕಾರಕ್ಕೆ ಬರಲ್ಲ. ಸೀಮಿತವಾಗಿರುವ ಜೆಡಿಎಸ್ ಪಕ್ಷದ ಸಿದ್ಧಾಂತ ಏನಿದೆಯೋ ಎಂಬುದು ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪತನವಾಗಲು ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಪ್ರಸ್ತಾಪಿಸಿ ನಮ್ಮ ಪಕ್ಷ ಜಾತ್ಯತೀತ ಸಿದ್ಧಾಂತ ಇರುವ ಪಕ್ಷ, ನಾವು ಕೋಮುವಾದಿ ಬಿಜೆಪಿ ಪಕ್ಷದ ಜತೆ ನಿಲ್ಲುವುದಿಲ್ಲ. ಜೆಡಿಎಸ್ಗೆ ಬಿಜೆಪಿ ಜತೆ ಸರ್ಕಾರ ರಚಿಸಿ ಅಭ್ಯಾಸವೂ ಇದೆ. ಹೀಗಾಗಿ, ಮತ್ತೆ ಅವರ ಜತೆ ಹೋಗಬಹುದೇನೋ ಎಂದು ತಿಳಿಸಿದರು.
ಬಿಜೆಪಿ ಸರ್ಕಾರ ಪತನವಾಗಲು ಬಿಡುವುದಿಲ್ಲ ಎಂದು ಜೆಡಿಎಸ್ನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳುತ್ತಾರೆ. ಹಾಗಾದರೆ ಅವರ ಮಾತಿನ ಅರ್ಥ ಏನು? ಅವರೇ ಹಿಂದೆ ಯಡಿಯೂರಪ್ಪ ಸರ್ಕಾರ ಹೆಚ್ಚು ದಿನ ಇರಲ್ಲ, ಉಪ ಚುನಾವಣೆ ನಂತರ ಚುನಾವಣೆ ಬರುತ್ತದೆ ಎಂದು ಹೇಳಿದ್ದರು. ಇದೀಗ ಬೇರೆ ಹೇಳಿಕೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಹೇಳಿಕೆಗಳು ನೋಡಿದರೆ ಜನರಿಗೆ ಸಮ್ಮಿಶ್ರ ಸರ್ಕಾರ ಪತನದ ವಿಷಯದಲ್ಲಿ ಯಾರದು ತಪ್ಪು ಎಂಬುದು ಅರ್ಥವಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ