ಡಿಕೆ ಶಿವಕುಮಾರ್ ಗೆ ಜಾಮೀನು; ಹೈಕೋರ್ಟ್ ತೀರ್ಪಿನ ವಿರುದ್ಧ ಇ.ಡಿ. ಸುಪ್ರೀಂಗೆ

Team Udayavani, Oct 25, 2019, 3:36 PM IST

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ದೆಹಲಿ ಹೈಕೋರ್ಟ್ ಬುಧವಾರ ಡಿಕೆ ಶಿವಕುಮಾರ್ ಗೆ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ನೀಡಿತ್ತು. ದೆಹಲಿ ಹೈಕೋರ್ಟ್ ಜಸ್ಟೀಸ್ ಸುರೇಶ್ ಕೈಟ್ ಅವರು, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ವಿದೇಶಕ್ಕೆ ಪಲಾಯನ ಮಾಡುತ್ತಾರೆಂದು ಹೇಳಲು ಆಗಲ್ಲ. ಹೀಗಾಗಿ ಜಾಮೀನು ನೀಡಬಹುದಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ್ದರು.

ತನಿಖಾ ಸಂಸ್ಥೆಯ ದಾಖಲೆಗಳು, ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇಲ್ಲ. ಅಲ್ಲದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿರುವ ಜಸ್ಟೀಸ್ ಕೈಟ್ 25 ಲಕ್ಷದ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಭದ್ರತೆ ಮೇಲೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ