ಪರಿಷತ್ ಚುನಾವಣೆ : ನಾಳೆ 228 ಮತಗಟೆಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ನಡೆಯಲಿದೆ ಮತದಾನ


Team Udayavani, Dec 9, 2021, 12:34 PM IST

ಚುನಾವಣೆ : ನಾಳೆ 228 ಮತಗಟೆಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ನಡೆಯಲಿದೆ ಮತದಾನ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದೆ. ಡಿ.10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿ ಕೆ.ಶ್ರೀನಿವಾಸ್‌ ಹೇಳಿದರು.

ಹೊಸಕೋಟೆ ತಾಲೂಕಿನಲ್ಲಿ 29 ಮತಗಟ್ಟೆ, ದೇವನಹಳ್ಳಿ ತಾಲೂಕಿನಲ್ಲಿ 24 ಮತಗಟ್ಟೆ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 28 ಮತಗಟ್ಟೆ ಹಾಗೂ ನೆಲಮಂಗಲ ತಾಲೂಕಿನಲ್ಲಿ 21 ಮತಗಟ್ಟೆ
ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 102 ಮತಗಟ್ಟೆಗಳಲ್ಲಿ ಮತದಾನದ ದಿನದಂದು ಕಾರ್ಯನಿರ್ವಹಿಸಲು 116 ಪಿಆರ್‌ಒಗಳು, 116 ಪಿಒಗಳು, 102 ಎಂಒಗಳು, 102 ವಿಡಿಯೋ ಗ್ರಾಫ‌ರ್‌ ಗಳನ್ನು ನಿಯೋಜಿಸಲಾಗಿದೆ ಎಂದರು.

ರಾಮನಗರ ಜಿಲ್ಲೆಯಲ್ಲಿ ಒಟ್ಟು 126 ಮತಗಟ್ಟೆ:
ಮಾಗಡಿ ತಾಲೂಕಿನಲ್ಲಿ 33 ಮತಗಟ್ಟೆ, ರಾಮನಗರ ತಾಲೂಕಿನಲ್ಲಿ 21 ಮತಗಟ್ಟೆ, ಕನಕಪುರ ತಾಲೂಕಿನಲ್ಲಿ 39 ಮತಗಟ್ಟೆ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ 33 ಮತಗಟ್ಟೆ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಒಟ್ಟು 126 ಮತಗಟ್ಟೆಗಳಲ್ಲಿ ಮತದಾನದ ದಿನದಂದು ಕಾರ್ಯನಿರ್ವಹಿಸಲು 145 ಪಿ.ಆರ್‌.ಓ.ಗಳು, 145 ಪಿ.ಓ.ಗಳು, 126 ಎಂ.ಓ.ಗಳು, 126 ವಿಡಿಯೋ ಗ್ರಾಫ‌ರ್‌ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಒಟ್ಟಾರೆ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗಾಗಿ ತೆರೆಯಲಾದ ಒಟ್ಟು 228 ಮತಗಟ್ಟೆಗಳಲ್ಲಿ 264 ಪಿ.ಆರ್‌.ಓ.ಗಳು, 264 ಪಿ.ಓ.ಗಳು, 228 ಎಂ.ಓ.ಗಳು, 228 ವಿಡಿಯೋ ಗ್ರಾಫ‌ರ್‌ಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ : ಜರ್ಮನಿಯಿಂದ ಬೆಂಗಳೂರಿಗೆ ಬಂದ ಕೋವಿಡ್ ಸೋಂಕಿತ ಪರಾರಿ : ಸೋಂಕಿತ ನಾಪತ್ತೆಯಿಂದ ಆತಂಕ ಸೃಷ್ಟಿ

ಮತದಾರರ ವಿವರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 902 ಪುರುಷ ಮತದಾರರು, 962 ಮಹಿಳಾ ಮತದಾರರು ಸೇರಿದಂತೆ ಒಟ್ಟು 1864 ಮತದಾರರಿದ್ದು, ಈ ಪೈಕಿ, ದೊಡ್ಡಬಳ್ಳಾಪುರ
ತಾಲೂಕಿನಲ್ಲಿ 250 ಪುರುಷ ಮತದಾರರು, 265 ಮಹಿಳಾ ಮತದಾರರು ಸೇರಿದಂತೆ ಒಟ್ಟು 515 ಮತದಾರರಿದ್ದಾರೆ. ದೇವನಹಳ್ಳಿ ತಾಲೂಕಿನಲ್ಲಿ 194 ಪುರುಷ ಮತದಾರರು, 202 ಮಹಿಳಾ ಮತದಾರರು ಸೇರಿ ದಂತೆ ಒಟ್ಟು 396 ಮತದಾರರಿದ್ದಾರೆ. ಹೊಸಕೋಟೆ ತಾಲೂಕಿನಲ್ಲಿ 282 ಪುರುಷ ಮತದಾರರು, 300 ಮಹಿಳಾ ಮತದಾರರು ಸೇರಿದಂತೆ ಒಟ್ಟು 582 ಮತದಾರರಿದ್ದಾರೆ. ನೆಲಮಂಗಲ ತಾಲೂಕಿನಲ್ಲಿ 176 ಪುರುಷ ಮತದಾರರು, 195 ಮಹಿಳಾ ಮತದಾರರು ಸೇರಿದಂತೆ ಒಟ್ಟು 371 ಮತದಾರರಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ 960 ಪುರುಷ ಮತದಾರರು, 1099 ಮಹಿಳಾ ಮತದಾರರು ಸೇರಿದಂತೆ ಒಟ್ಟು 2059 ಮತದಾರರಿದ್ದು, ಈ ಪೈಕಿ, ಮಾಗಡಿ ತಾಲೂಕಿನಲ್ಲಿ 221 ಪುರುಷ ಮತದಾರರು,
258 ಮಹಿಳಾ ಮತದಾರರು ಸೇರಿದಂತೆ ಒಟ್ಟು 479 ಮತದಾರರಿದ್ದಾರೆ. ಚನ್ನಪಟ್ಟಣ ತಾಲೂಕಿನಲ್ಲಿ 233 ಪುರುಷ ಮತದಾರರು, 280 ಮಹಿಳಾ ಮತದಾರರು ಸೇರಿದಂತೆ ಒಟ್ಟು 513 ಮತದಾರರಿದ್ದಾರೆ. ರಾಮನಗರ ತಾಲೂಕಿನಲ್ಲಿ 181 ಪುರುಷ ಮತದಾರರು, 209 ಮಹಿಳಾ ಮತದಾರರು ಸೇರಿದಂತೆ ಒಟ್ಟು 390 ಮತದಾರರಿದ್ದಾರೆ. ಕನಕಪುರ ತಾಲೂಕಿನಲ್ಲಿ 325 ಪುರುಷ ಮತದಾರರು, 352 ಮಹಿಳಾ ಮತದಾರರು ಸೇರಿದಂತೆ ಒಟ್ಟು 677 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಒಟ್ಟು 3923 ಮತದಾರರು: ಒಟ್ಟಾರೆ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯಲ್ಲಿ 1862 ಪುರುಷ ಮತದಾರರು,  2061 ಮಹಿಳಾ ಮತದಾರರು ಸೇರಿದಂತೆ ಒಟ್ಟು 3923 ಮತದಾರರಿದ್ದಾರೆ.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.