ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು
ಕಟ್ಟುನಿಟ್ಟಿನ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ
Team Udayavani, Feb 2, 2023, 7:15 AM IST
ಬೆಂಗಳೂರು: ರಾಜಕೀಯ ಪಕ್ಷಗಳ ಉಚಿತ ಉಡುಗೊರೆ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಚುನಾವಣಾ ಆಯೋಗ ಈ ರೀತಿ ಕಾನೂನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ರಾಜಕಾರಣಿಗಳು ಜನಸಾಮಾನ್ಯರಿಗೆ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುತ್ತಿರುವುದು ಹೆಚ್ಚಾಗಿದೆ. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳನ್ನು ಆಧರಿಸಿ ಸಂಬಂಧಪಟ್ಟ ಇಲಾಖೆಯ ಕಾನೂನು-ನಿಯಮಗಳನ್ವಯ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಲ್ಲದೆ, ಸಮಾಜಘಾತುಕ ಭಾಷಣ, ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವ ಮಾತುಗಳು ಮತ್ತು ಅಂತಹ ಸಭೆಗಳ ಮೇಲೆ ನಿಗಾವಹಿಸಬೇಕು. ಆ ರೀತಿಯ ಘಟನೆಗಳು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಮನೋಜ್ ಕುಮಾರ್ ಮೀನಾ ಸೂಚಿಸಿದ್ದಾರೆ.
ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಪೂರ್ವ ಸಿದ್ದತೆಯ ಕುರಿತು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಕುರಿತು ಪೂರ್ವಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು.
ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೂರೆಗಳ ಆಮಿಷಗಳನ್ನು ಕೂಪನ್‌ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಅಂತರ ರಾಜ್ಯ ಚೆಕ್ ಪೋಸ್ಟ್‌ಗಳನ್ನು ತೆರೆಯಲು ಸೂಚಿಸಿದರು.
ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಣಿಕೆ ಮೇಲೆ ನಿಗಾವಹಿಸಬೇಕು. ಮಾದಕ ವಸ್ತುಗಳ ಸಾಗಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು, ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಇದಕ್ಕಾಗಿ ವಿಶೇಷ ನೂಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದರು.
ಹಣದ ರೂಪದಲ್ಲಿ ಮತ್ತು ಡಿಜಿಟಲ್ ವಿಧಾನಗಳ ಮೂಲಕ ನಡೆಯುವ ಚಲಾವಣೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು.
ಅದೇ ರೀತಿ ಭಾರತ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ 2022ರ ನ.24 ರಂದು ರಾಜ್ಯ ಹಾಗೂ ಕೇಂದ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ತೆಗೆದುಕೊಂಡಿರುವ ಕ್ರಮ ಮತ್ತು ವರದಿಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ), ಅಬಕಾರಿ ಇಲಾಖೆ ಆಯುಕ್ತರು, ರಾಜ್ಯ ಸರಕು ಮತ್ತು ಸೇವೆ ಇಲಾಖೆಯ ವಾಣಿಜ್ಯ ತೆರಿಗೆ ಆಯುಕ್ತರು, ದಾಯ ತೆರಿಗೆ ಇಲಾಖೆ (ತನಿಖೆ) ಹೆಚ್ಚುವರಿ ನಿರ್ದೇಶಕರು, ಕೇಂದ್ರ ತೆರಿಗೆ ಮತ್ತು ಸುಂಕ ಇಲಾಖೆಯ ಉಪ ಆಯುಕ್ತರು, ರೆವಿನ್ಯೂ ಇಂಟಲಿಜೆನ್ಸ್ ಹೆಚ್ಚುವರಿ ನಿರ್ದೇಶಕರು, ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ ಉಪ ನಿರ್ದೇಶಕರು, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಯಲ ನಿರ್ದೇಶಕರು, ಡಿಐಜಿ, ಸಿಐಎಸ್‌ಎಫ್, ರೈಲ್ವೆ ಭದ್ರತಾ ಪಡೆಯ ಸಹಾಯಕ ಭದ್ರತಾ ಆಯುಕ್ತರು, ಆರ್‌ಬಿಐ ಜನರಲ್ ಮ್ಯಾನೇಜರ್, ಎಸ್‌ಎಲ್‌ಬಿಸಿ ಡಿಜಿಎಂ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಿದ ಜನರಲ್ ಮ್ಯಾನೇಜರ್, ಅಂಚೆ ಸೇವೆಗಳು-ಕರ್ನಾಟಕ ವೃತ್ತದ ನಿರ್ದೇಶಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ
ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ,ಸಾವಿರಾರು ಸೀರೆಗಳು ವಶ
ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ
ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ
MUST WATCH
ಹೊಸ ಸೇರ್ಪಡೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ