ಮೂರು ವರ್ಷದ ಪ್ರೀತಿ ಮುರಿದುಕೊಂಡ ಉದ್ಯಮಿ ಎಲಾನ್ ಮಸ್ಕ್
Team Udayavani, Sep 25, 2021, 2:27 PM IST
ತಂತ್ರಜ್ಞಾನ ಉದ್ಯಮಿ, ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪೆನಿಗಳ ಮಾಲಿಕ ಎಲಾನ್ ಮಸ್ಕ್ ಅವರ ಪ್ರೀತಿ ಮುರಿದು ಬಿದ್ದಿದೆ. ಕೆನಡಾದ ಗಾಯಕಿ ಗ್ರಿಮೆಸ್ ಜೊತೆಗಿನ ಮೂರು ವರ್ಷಗಳ ಪ್ರೀತಿಯ ಪಯಣಕ್ಕೆ ಇತಿಶ್ರೀ ಹಾಡಿದ್ದಾರೆ.
ಎಲಾನ್ ಮಸ್ಕ್ ಅವರು 2018 ರಲ್ಲಿ ಗ್ರಿಮೆಸ್ ಜೊತೆಗಿನ ಪ್ರೀತಿಯನ್ನು ಬಹಿರಂಗ ಪಡಿಸಿದ್ದರು. ಈ ಜೋಡಿಗೆ ಒಂದು ವರ್ಷದ ಗಂಡು ಮಗು ಕೂಡ ಇದೆ. ಇದೀಗ ಪರಸ್ಪರ ಒಪ್ಪಿಗೆಯ ಮೂಲಕ ಬೇರೆಯಾಗಲು ನಿರ್ಧರಿಸಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.
ಶನಿವಾರ ತಮ್ಮ ಬ್ರೇಕಪ್ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಎಲಾನ್, ನಾವು ಇನ್ಮುಂದೆ ಒಟ್ಟಿಗೆ ಇರುವುದಿಲ್ಲ. ಆದರೆ, ನಾವಿಬ್ಬರು ನಮ್ಮ ಮಗುವಿಗೆ ಸಹಪೋಷಕರಾಗಿ ಮುಂದುವರೆಯಲಿದ್ದೇವೆ. ನಾವು ಪರಸ್ಪರ ದೂರುವಾದರೂ ಕೂಡ ನಮ್ಮ ನಡುವಿನ ಪ್ರೀತಿ ಇದೆ ರೀತಿ ಮುಂದುವರೆಯಲಿದೆ ಎಂದಿದ್ದಾರೆ.
ಎಲಾನ್ ಮಸ್ಕ್ ವಿಶ್ವದ ನಂಬರ್ ಒನ್ ಉದ್ಯಮಿಗಳ ಸ್ಥಾನದಲ್ಲಿದ್ದಾರೆ. ಅವರು ಉತ್ಪಾದಿಸುತ್ತಿರುವ ಟೆಸ್ಲಾ ಕಾರುಗಳು ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುತ್ತಿವೆ. ನಾವೀನ್ಯ ತಂತ್ರಜ್ಞಾನದ ಟೆಸ್ಲಾ ವಾಹನಗಳು ಕಾರು ಪ್ರಿಯರನ್ನು ಸೆಳೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?