ಆಳಸಮುದ್ರದಲ್ಲಿ ಸುವರ್ಣ ತ್ರಿಭುಜ ಅವಶೇಷ ಪತ್ತೆ

Team Udayavani, May 4, 2019, 3:09 AM IST

ala-samudra

ಮಲ್ಪೆ/ಕಾರವಾರ: ನಾಲ್ಕೂವರೆ ತಿಂಗಳ ಹಿಂದೆ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಏಳು ಮೀನುಗಾರರ ಸಹಿತ ನಿಗೂಢವಾಗಿ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ದೋಣಿಯ ಅವಶೇಷ ಮಹಾರಾಷ್ಟ್ರದ ಮಾಲ್ವಾಣ್‌ ಬಳಿ ಪತ್ತೆಯಾಗಿದೆ. ಅದು ಮುಳುಗಡೆಯಾಗಿರುವ ಬಗ್ಗೆ ನೌಕಾ ಪಡೆಯ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ಮಾಲ್ವಾಣ್‌ ಬಳಿ ಸುಮಾರು 64 ಮೀ. ಆಳ ಸಮುದ್ರದಲ್ಲಿ ಅವಶೇಷಗಳು ಪತ್ತೆಯಾಗಿದ್ದು, ಅವು ಸುವರ್ಣ ತ್ರಿಭುಜದವು ಎಂದು ಐಎನ್‌ಎಸ್‌ ನಿರೀಕ್ಷಕ್‌ ಹಡಗಿನ ಮುಳುಗು ತಜ್ಞರು ಖಚಿತಪಡಿಸಿದ್ದಾರೆ. ಭಾರತೀಯ ನೌಕಾಪಡೆಯ ಸಾರ್ವಜನಿಕ ಸಂಪರ್ಕಾಧಿ ಕಾರಿಯೊಬ್ಬರು ಈ ಸಂಬಂಧ ಟ್ವೀಟ್‌ ಮಾಡಿದ್ದಾರೆ.

ಮಲ್ಪೆ ಬಡಾನಿಡಿಯೂರಿನ ಚಂದ್ರಶೇಖರ್‌ ಕೋಟ್ಯಾನ್‌, ದಾಮೋದರ ಸಾಲ್ಯಾನ್‌, ಉತ್ತರ ಕನ್ನಡ ಜಿಲ್ಲೆಯ ಲಕ್ಷ್ಮಣ, ರವಿ, ಸತೀಶ್‌, ಹರೀಶ ಮತ್ತು ರಮೇಶ ಸೇರಿ ಒಟ್ಟು ಏಳು ಮೀನುಗಾರರು ಬೋಟಿನಲ್ಲಿದ್ದು, ಇವರೆಲ್ಲರೂ ಮೃತಪಟ್ಟಿರಬಹುದೆಂದು ಊಹಿಸಲಾಗಿದೆ. ನೌಕಾಪಡೆ ಇವರ ಸಾವಿನ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ.

ಮೀನುಗಾರರ ನೆರವಿನಿಂದ ಸಾಧ್ಯವಾಯಿತು: ಶಾಸಕ ಕೆ. ರಘುಪತಿ ಭಟ್‌ ಅವರ ನೇತೃತ್ವದಲ್ಲಿ 10 ಮಂದಿ ಮೀನುಗಾರರ ತಂಡ ಏ.28ರಿಂದ ಐಎನ್‌ಎಸ್‌ ನಿರೀಕ್ಷಕ್‌ ಹಡಗಿನ ಮೂಲಕ ರಾತ್ರಿ ಕಾರ್ಯಾಚರಣೆಗೆ ತೊಡಗಿತ್ತು. ಸೋಮವಾರ ಬೆಳಗ್ಗಿನಿಂದ ತೀವ್ರ ಶೋಧ ನಡೆಯಿತು. ಸೋನಾರ್‌ ತಂತ್ರಜ್ಞಾನದ ಮೂಲಕ ಹುಡುಕಾಟ ನಡೆಸಲಾಗಿತ್ತು. ಜಿಪಿಎಸ್‌ ಮಾಹಿತಿ ಆಧರಿಸಿ ಬುಧವಾರದವರೆಗೂ ಕಾರ್ಯಾಚರಣೆ ನಡೆಯಿತು.

ಮುಳುಗು ತಜ್ಞರು ಸಮುದ್ರದ ಆಳಕ್ಕೆ ಇಳಿದು ಸುಮಾರು 64 ಮೀ. ಆಳದಲ್ಲಿ ಅವಶೇಷಗಳ ಇರುವಿಕೆ ಪತ್ತೆ ಹಚ್ಚಿದರು. ದೋಣಿಯ ಕ್ಯಾಬಿನ್‌ ಪೂರ್ಣ ಹಾನಿಯಾಗಿದೆ. ದೋಣಿ ಒಂದು ಬದಿಗೆ ಮಗುಚಿ ಬಿದ್ದ ಸ್ಥಿತಿಯಲ್ಲಿದ್ದು, “ಸುವರ್ಣ ತ್ರಿಭುಜ’ ಹೆಸರು ಕಂಡುಬಂದಿದೆ ಎನ್ನಲಾಗಿದೆ. ಖಾತ್ರಿ ಪಡಿಸಲು ಸಮುದ್ರದಾಳದಲ್ಲಿ ವಿಡಿಯೋಗ್ರಫಿ ಮಾಡಲಾಗಿದೆ. ಇದರಿಂದಲೂ ದೋಣಿಯ ಹೆಸರು ಖಚಿತವಾಗಿದೆ. ಮೀನುಗಾರರ ನೆರವಿನಿಂದ ಪತ್ತೆ ಮಾಡಲು ಸಾಧ್ಯವಾಗಿದೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಡಿ.15ರಂದು ಸಂಪರ್ಕ ಕಡಿದುಕೊಂಡಿತ್ತು: ಮಲ್ಪೆ ಬಂದರಿನಿಂದ ಡಿ.13ರಂದು ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಡಿ.15ರ ತಡರಾತ್ರಿ ಇತರ ದೋಣಿಗಳ ಸಂಪರ್ಕವನ್ನು ಕಳೆದುಕೊಂಡಿತ್ತು. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ತೀರ ಸಮೀಪ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿತ್ತು. ಸಾಕಷ್ಟು ಶೋಧನೆ ನಡೆದು ಅವಘಡಕ್ಕೆ ಈಡಾಗಿ ಮುಳುಗಿರಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಮಾಲ್ವಾಣ್‌ ದಡದಲ್ಲಿ ದೋಣಿಯ ಬಾಕ್ಸ್‌ಗಳು ದೊರೆತಿದ್ದವು.

ಮೀನುಗಾರರ ಮನವಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಇತ್ತೀಚೆಗೆ ನಾಪತ್ತೆಯಾದ ಮೀನುಗಾರರ ಮನೆಗೆ ಭೇಟಿ ನೀಡಿದ್ದಾಗ ಶೋಧ ಕಾರ್ಯಾಚರಣೆಯಲ್ಲಿ ನಮ್ಮನ್ನೂ ಸೇರಿಸಿಕೊಳ್ಳಬೇಕು ಎಂದು ಮನೆಯವರು ಪಟ್ಟು ಹಿಡಿದಿದ್ದರು. ಚುನಾವಣೆ ಮುಗಿದ ಕೂಡಲೇ ಮೀನುಗಾರರ ಉಪಸ್ಥಿತಿಯಲ್ಲಿ ಶೋಧಕ್ಕೆ ವ್ಯವಸ್ಥೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದರು. ವಿಶಾಖಪಟ್ಟಣದಿಂದ ಐಎನ್‌ಎಸ್‌ ನಿರೀಕ್ಷಕ್‌ ನೌಕೆಯನ್ನು ಕಾರವಾರ ಸೀಬರ್ಡ್‌ ನೌಕಾನೆಲೆಗೆ ಕಳುಹಿಸಿ ಕೊಟ್ಟಿದ್ದರು.

ಐದು ದಿನ ಸಮುದ್ರದಲ್ಲಿದ್ದ ಶಾಸಕ: ನೌಕಾಪಡೆ ಹಡಗಿನಲ್ಲಿ ಮೀನುಗಾರ ತಂಡದೊಂದಿಗೆ ಶಾಸಕ ರಘುಪತಿ ಭಟ್‌ ಖುದ್ದಾಗಿ ಕಾರ್ಯಾಚರಣೆಗೆ ಇಳಿದಿದ್ದರು. ಸತತ 5 ದಿನ ಸಮುದ್ರ ಮಧ್ಯೆ ಇದ್ದು ಪಾಲ್ಗೊಂಡಿದ್ದರು. ಶಾಸಕರ ಜತೆಯಲ್ಲಿ ಮೀನುಗಾರರ ಮನೆಯವರಾದ ನಿತ್ಯಾನಂದ ಕೋಟ್ಯಾನ್‌, ಗಂಗಾಧರ ಸಾಲ್ಯಾನ್‌, ಕರುಣಾಕರ ಸಾಲ್ಯಾನ್‌, ದೇವೇಂದ್ರ ಭಟ್ಕಳ, ನಾಗರಾಜ ಭಟ್ಕಳ, ಮೀನುಗಾರಿಕೆ ಸಹಾಯಕ ನಿರ್ದೇಶಕ ಚಂದ್ರಶೇಖರ್‌ ಇದ್ದರು.

ತನಿಖೆಗೆ ಆಗ್ರಹ: ಬೋಟ್‌ ಅವಘಡ ಹೇಗೆ ಸಂಭವಿಸಿದೆ ಎನ್ನುವ ಬಗ್ಗೆ ತನಿಖೆಯಾಗಬೇಕು. ನೌಕಾಪಡೆ ನೌಕೆಯ ಬಗ್ಗೆಯೂ ಶಂಕೆ ಇದೆ. ರಾಜ್ಯ ಮತ್ತು ಕೇಂದ್ರ ಸರಕಾರದಿಂದ 7 ಮಂದಿ ಮೀನುಗಾರರ ಕುಟುಂಬಗಳಿಗೆ ಗರಿಷ್ಠ ಮೊತ್ತ ಪರಿಹಾರ ಒದಗಿಸುವ ಬಗ್ಗೆ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಬೋಟ್‌ ಅವಘಡಕ್ಕೀಡಾದ ಸಮಯದಲ್ಲಿ ಭಾರತೀಯ ನೌಕಾಸೇನೆಯ ಐಎನ್‌ಎಸ್‌ ಕೊಚ್ಚಿ ಅದೇ ಭಾಗದಲ್ಲಿ ತೆರಳಿದೆ ಎನ್ನಲಾಗುತ್ತಿದ್ದು, ಬೋಟ್‌ ಅವಘಡಕ್ಕೆ ಐಎನ್‌ಎಸ್‌ ಕೊಚ್ಚಿ ನೌಕೆ ಕಾರಣ ಇರಬಹುದು ಎಂಬ ಸಂಶಯವಿದೆ. ಅಥವಾ ಇನ್ಯಾವುದೇ ಶಿಪ್‌ ಕೂಡ ಇರಬಹುದು. ಈ ಬಗ್ಗೆ ರಕ್ಷಣಾ ಇಲಾಖೆ ಸಮಗ್ರ ತನಿಖೆ ನಡೆಸಿ, ಸತ್ಯಾಂಶ ತಿಳಿಸಬೇಕು. ಈ ಬಗ್ಗೆ ಮೀನುಗಾರರು ಸಭೆ ನಡೆಸಿ ಶೋಭಾ ಕರಂದ್ಲಾಜೆ ಮೂಲಕ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್‌ ಅವರನ್ನು ಭೇಟಿಯಾಗಿ ಮನವಿ ಮಾಡಲಿದ್ದೇವೆ.
-ಕೆ. ರಘುಪತಿ ಭಟ್‌, ಶಾಸಕರು, ಉಡುಪಿ

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.