ಮೀನುಗಾರಿಕಾ ಬೋಟ್ ಅಪಘಾತ: 8 ಮೀನುಗಾರರ ರಕ್ಷಣೆ
Team Udayavani, Feb 2, 2023, 10:58 PM IST
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ “ಜಲಮಾತಾ’ ಹೆಸರಿನ ಬೋಟು ಮಂಗಳವಾರ ಉಳ್ಳಾಲದಲ್ಲಿ ನೀರಿನಲ್ಲಿ ಅಪಘಾತಕ್ಕೀಡಾಗಿ ಮುಳುಗಿದ್ದು, ಅದರಲ್ಲಿದ್ದ ಎಂಟು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಬೋಟಿನ ಸಹಾಯದಿಂದ ರಕ್ಷಿಸಲಾಗಿದೆ ಎಂದು ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘ ತಿಳಿಸಿದೆ.
ಬಾಲಕೃಷ್ಣ ಎಂಬವರ ಮಾಲಕತ್ವದ ಈ ಬೋಟು ಮಂಗಳವಾರ ಮೀನುಗಾರಿಕೆಯಿಂದ ಹಿಂತಿರುಗುತ್ತಿದ್ದ ವೇಳೆ ಉಳ್ಳಾಲದ ಸಮುದ್ರದಲ್ಲಿ ಮುಳುಗಡೆಯಾಗಿರುವ ಹಡಗಿನ ಅವಶೇಷಗಳು ಬೋಟಿನ ತಳಭಾಗಕ್ಕೆ ತಾಗಿ ಜಖಂ ಗೊಂಡು ನೀರು ಒಳನುಗ್ಗಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಬಾಲಕೃಷ್ಣ ಎಂಬವರ ಮಾಲಕತ್ವದ ಈ ಬೋಟು ಮುಳುಗಡೆಯಿಂದ ಅಂದಾಜು 60 ಲಕ್ಷ ರೂ. ನಷ್ಟವಾಗಿದ್ದು, ಕರಾವಳಿ ಕಾವಲು ಪಡೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ: ಫೆ. 17ರಂದು ಸಿಎಂ ಬೊಮ್ಮಾಯಿ ಬಚಾವೋ ಬಜೆಟ್: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ