ಪ್ರವಾಹ: ಉ.ಕ. ಭಾಗದಲ್ಲಿ ಶೇ.30 ರಷ್ಟು ಕಬ್ಬು ಇಳುವರಿ ಕುಸಿತ

Team Udayavani, Dec 7, 2019, 8:50 PM IST

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಕಾಣಿಸಿಕೊಂಡಿದ್ದ ಪ್ರವಾಹ ಹಿನ್ನೆಲೆಯಲ್ಲಿ ಈ ಬಾರಿ ಶೇ.30 ರಷ್ಟು ಕಬ್ಬು ಇಳುವರಿ ಕುಸಿತ ಕಂಡಿದೆ ಎಂದು ಸಕ್ಕರೆ ಸಚಿವ ಸಿ.ಟಿ.ರವಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಭಾಗದಲ್ಲಿ ಕಬ್ಬು ಬೆಳೆ ಕಡಿಮೆಯಾಗಿದೆ. ಅಲ್ಲಿನ ರೈತರಿಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಖಾನೆಗಳು ರೈತರಿಗೆ ಪಾವತಿಸಲು ಬಾಕಿ ಉಳಿಸಿಕೊಂಡಿದ್ದ ಹಿಂದಿನ ವರ್ಷಗಳ 11,948 ಕೋ. ರೂ. ಪೈಕಿ 11,921 ಕೋ. ರೂ. ಪಾವತಿಸಲಾಗಿದೆ. ಕೇವಲ 37 ಕೋ. ರೂ. ಮಾತ್ರ ಬಾಕಿಯಿದ್ದು ಪಾವತಿ ಪ್ರಮಾಣ ಶೇ.99.50 ರಷ್ಟಿದೆ ಎಂದು ಹೇಳಿದರು.

ಮೊದಲ ಬಾರಿಗೆ ವೈಜ್ಞಾನಿಕವಾಗಿ ಕಬ್ಬು ಸಾಗಾಣಿಕೆ ಮತ್ತು ಕಟಾವು ವೆಚ್ಚದ ಮೊತ್ತ ನಿಗದಿಪಡಿಸಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಿದೆ. ರೈತರು ಬೆಳೆಯುವ ಕಬ್ಬು ಇಳುವರಿ ನಿಖರತೆ ಪತ್ತೆಗೆ ಪ್ರಾಯೋಗಿಕವಾಗಿ ರಾಜ್ಯದ 2 ಭಾಗಗಳಲ್ಲಿ ಆಟೋಮೇಟಿವ್‌ ಶುಗರ್‌ ಡಿಟೆಕ್ಟೀವ್‌ ಮೆಶಿನ್‌ ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 18 ಸಕ್ಕರೆ ಕಾರ್ಖಾನೆಗಳು ಸ್ಥಗಿತಗೊಂಡಿದ್ದು, ಮೈಷುಗರ್‌ ಮಂಡ್ಯ ಕಾರ್ಖಾನೆ ಪುನಶ್ಚೇತನಕ್ಕೆ ಸರಕಾರ ಇದುವರೆಗೂ 504 ಕೋ. ರೂ. ವೆಚ್ಚ ಮಾಡಲಾಗಿದೆ. ಆದರೂ ಪುನಶ್ಚೇತನ ಸಾಧ್ಯವಾಗಿಲ್ಲ. ಹೀಗಾಗಿ ಖಾಸಗಿ ಸಹಭಾಗಿತ್ವದಲ್ಲಿ ಪುನರಾರಂಭಕ್ಕೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ