ಬಾರ್ಬೊರಾ ಕ್ರೆಜಿಕೋವಾಗೆ ಫ್ರೆಂಚ್‌ ಓಪನ್‌ ಕಿರೀಟ


Team Udayavani, Jun 13, 2021, 12:18 AM IST

Barbora-Krejcikova

ಪ್ಯಾರಿಸ್‌ : ಶ್ರೇಯಾಂಕ ರಹಿತ ಜೆಕ್‌ ಆಟಗಾರ್ತಿ ಬಾರ್ಬೊರಾ ಕ್ರೆಜಿಕೋವಾ ಫ್ರೆಂಚ್‌ ಓಪನ್‌ ಟೂರ್ನಿಯ ನೂತನ ರಾಣಿಯಾಗಿದ್ದಾರೆ. ಶನಿವಾರದ 3 ಸೆಟ್‌ಗಳ ಫೈನಲ್‌ ಹೋರಾಟದಲ್ಲಿ ಅವರು ರಶ್ಯದ 31ನೇ ಶ್ರೇಯಾಂಕಿತೆ ಅನಾಸ್ತಾಸಿಯಾ ಪಾವ್ಲುಚೆಂಕೋವಾ ವಿರುದ್ಧ 6-1, 2-6, 6-4 ಅಂತರದ ಗೆಲುವು ಸಾಧಿಸಿ ಮೊದಲ ಗ್ರ್ಯಾನ್‌ಸ್ಲಾಮ್‌ ಟ್ರೋಫಿಯನ್ನು ಹಿಡಿದು ಸಂಭ್ರಮಿಸಿದರು.

ಇಬ್ಬರಿಗೂ ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಆದುದರಿಂದ ಟೆನಿಸ್‌ ಅಭಿಮಾನಿಗಳು ವಿಶೇಷ ಕುತೂಹಲ ಇರಿಸಿಕೊಂಡಿದ್ದರು. ಮೊದಲ ಸೆಟ್‌ ಅನ್ನು ಸುಲಭದಲ್ಲಿ ವಶಪಡಿಸಿಕೊಂಡ ಕ್ರೆಜಿಕೋವಾ, ದ್ವಿತೀಯ ಸೆಟ್‌ನಲ್ಲಿ ಇದೇ ರಭಸ ತೋರುವಲ್ಲಿ ವಿಫ‌ಲರಾದರು. ಪಾವ್ಲುಚೆಂಕೋವಾ ತಿರುಗಿ ಬಿದ್ದರು. ತೃತೀಯ ಸೆಟ್‌ ಹೆಚ್ಚು ಫೈಟ್‌ ಕಂಡೀತೆಂಬ ನಿರೀಕ್ಷೆ ಇತ್ತು. ಆದರೆ ಇಲ್ಲಿ ಕ್ರೆಜಿಕೋವಾ ಮುಂದೆ ರಶ್ಯನ್ನಳ ಆಟ ಸಾಗಲಿಲ್ಲ. ಬರೋಬ್ಬರಿ 40 ವರ್ಷಗಳ ಬಳಿಕ ಜೆಕ್‌ ಆಟಗಾರ್ತಿಯೊಬ್ಬರು ರೊಲ್ಯಾಂಡ್‌ ಗ್ಯಾರೋಸ್‌ನಲ್ಲಿ ಚಾಂಪಿಯನ್‌ ಆಗಿ ಮೂಡಿಬಂದ ಕ್ಷಣಕ್ಕೆ ಕ್ರೆಜಿಕೋವಾ ಸಾಕ್ಷಿಯಾದರು.

ಡಬಲ್ಸ್‌ ನಲ್ಲೂ ಫೈನಲ್‌
ಕ್ರೆಜಿಕೋವಾ ರವಿವಾರ ವನಿತಾ ಡಬಲ್ಸ್‌ ಫೈನಲ್‌ನಲ್ಲೂ ಸೆಣಸಲಿದ್ದಾರೆ. ಇಲ್ಲಿ ಅವರ ಜತೆಗಾರ್ತಿ ಕ್ಯಾಥರಿನಾ ಸಿನಿಯಕೋವಾ. ಈ ಜೋಡಿಯ ಎದುರಾಳಿ ಪೋಲೆಂಡ್‌ನ‌ ಐಗಾ ಸ್ವಿಯಾಟೆಕ್‌-ಅಮೆರಿಕದ ಬೆಥನಿ ಮಾಟೆಕ್‌ ಸ್ಯಾಂಡ್ಸ್‌.

ಕ್ರೆಜಿಕೋವಾ ಇದಕ್ಕೂ ಮೊದಲು 2018ರಲ್ಲಿ ಫ್ರೆಂಚ್‌ ಓಪನ್‌ ಮತ್ತು ವಿಂಬಲ್ಡನ್‌ ವನಿತಾ ಡಬಲ್ಸ್‌ ಪ್ರಶಸ್ತಿ ಎತ್ತಿದ್ದರು. ಆಸ್ಟ್ರೇಲಿಯನ್‌ ಓಪನ್‌ ಮಿಕ್ಸೆಡ್‌ ಡಬಲ್ಸ್‌ನಲ್ಲಿ ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧನೆಗೈದ ಹಿರಿಮೆಯೂ ಇವರ ಪಾಲಿಗಿದೆ (2019, 2020, 2021).

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.