ಗದಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಎರಡನೇ ಬಲಿ
Team Udayavani, Jun 3, 2020, 6:43 PM IST
ಗದಗ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಜ್ವರ ಹಾಗೂ ಮದುಮೇಹಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಲಕ್ಕುಂಡಿ ಗ್ರಾಮದ ವ್ಯಕ್ತಿಯೊಬ್ಬ ಮೃತಪಟ್ಟ ಬಳಿಕ ಕೋವಿಡ್-19 ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿದ್ದು, ಗ್ರಾಮದಲ್ಲಿ ಆತಂಕದ ಛಾಯೆ ಆವರಿಸಿದೆ.
ತಾಲೂಕಿನ ಲಕ್ಕುಂಡಿ ಗ್ರಾಮದ 44 ವರ್ಷದ ವ್ಯಕ್ತಿ ಜ್ವರ, ಮಧುಮೇಹ ಹಾಗೂ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಜ್ವರ ಹೆಚ್ಚಾಗಿದ್ದರಿಂದ ಮೇ 27 ರಂದು ಬೆಟಗೇರಿಯ ಸಿಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಜ್ವರ ಉಪಶಮನವಾಗದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜೂ.1 ರಂದು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿತ್ತು. ಈ ವೇಳೆ ಜ್ವರದ ಲಕ್ಷಣಗಳ ಬಗ್ಗೆ ಅನುಮಾನಗೊಂಡಿದ್ದ ಅಲ್ಲಿನ ವೈದ್ಯರು ರೋಗಿಯ ಗಂಟಲಿನ ದ್ರವ್ಯದ ಮಾದರಿಯನ್ನು ಸಂಗ್ರಹಿಸಿ, ಕೋವಿಡ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.
ಆದರೆ, ವರದಿ ಬರುವ ಮುನ್ನವೇ ಬುಧವಾರ ಆತ ಮೃತಟ್ಟಿದ್ದಾರೆ. ಆನಂತರ ಬಂದ ವರದಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದೆ. ಕೋವಿಡ್-19 ವಿಪತ್ತು ನಿರ್ವಹಣೆ ಮಾರ್ಗಸೂಚಿಯಂತೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರಮಠ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ